ವಿಶ್ವಕಪ್ ಮುಗಿದ ಬೆನ್ನಲ್ಲೇ ಮಹತ್ವದ ನಿಯಮ ರೂಪಿಸಿದ ಐಸಿಸಿ..! ಏನದು?
ಡಿಸೆಂಬರ್ 2023ರಿಂದ ಏಪ್ರಿಲ್ 2024ರ ವರೆಗೂ ಪ್ರಾಯೋಗಿಕವಾಗಿ ಏಕದಿನ ಹಾಗೂ ಅಂ.ರಾ.ಟಿ20 ಪಂದ್ಯಗಳಲ್ಲಿ ಸ್ಟಾಪ್ ಕ್ಲಾಕ್ ಬಳಕೆಯಾಗಲಿದೆ. ಅಂದರೆ ಇನ್ನಿಂಗ್ಸ್‌ವೊಂದರಲ್ಲಿ ಪ್ರತಿ ಓವರ್ ಮುಕ್ತಾಯಗೊಂಡ 60 ಸೆಕೆಂಡ್‌ಗಳಲ್ಲಿ ಮುಂದಿನ ಓವರ್ ಆರಂಭಿಸಲು ಬೌಲರ್ ವಿಫಲರಾದರೆ ತಂಡಕ್ಕೆ ದಂಡ ಬೀಳಲಿದೆ.
ಅಹಮದಾಬಾದ್(ಜ.22): ಸೀಮಿತ ಓವರ್ ಕ್ರಿಕೆಟ್ ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್ ತಡೆಯಲು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಹೊಸ ಯೋಜನೆಯನ್ನು ಪರಿಚಯಿಸಲು ನಿರ್ಧರಿಸಿದೆ. ಇದೇ ಮೊದಲ ಬಾರಿಗೆ ಏಕದಿನ ಹಾಗೂ ಅಂ.ರಾ. ಟಿ20 ಪಂದ್ಯಗಳಲ್ಲಿ ಓವರ್‌ಗಳ ಮಧ್ಯೆ ಕಾಲಮಿತಿಯನ್ನು ಅಳವಡಿಸಲು ಮಂಗಳವಾರ ಇಲ್ಲಿ ನಡೆದ ಐಸಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಐಸಿಸಿಯ ಈ ಹೊಸ ನಿಯಮದ ಬಗ್ಗೆ ಕ್ರಿಕೆಟ್ ವಲಯದಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಡಿಸೆಂಬರ್ 2023ರಿಂದ ಏಪ್ರಿಲ್ 2024ರ ವರೆಗೂ ಪ್ರಾಯೋಗಿಕವಾಗಿ ಏಕದಿನ ಹಾಗೂ ಅಂ.ರಾ.ಟಿ20 ಪಂದ್ಯಗಳಲ್ಲಿ ಸ್ಟಾಪ್ ಕ್ಲಾಕ್ ಬಳಕೆಯಾಗಲಿದೆ. ಅಂದರೆ ಇನ್ನಿಂಗ್ಸ್‌ವೊಂದರಲ್ಲಿ ಪ್ರತಿ ಓವರ್ ಮುಕ್ತಾಯಗೊಂಡ 60 ಸೆಕೆಂಡ್‌ಗಳಲ್ಲಿ ಮುಂದಿನ ಓವರ್ ಆರಂಭಿಸಲು ಬೌಲರ್ ವಿಫಲರಾದರೆ ತಂಡಕ್ಕೆ ದಂಡ ಬೀಳಲಿದೆ. 3 ಬಾರಿ 60 ಸೆಕೆಂಡ್ ಕಾಲಮಿತಿ ಮೀರಿದರೆ ತಂಡಕ್ಕೆ 5 ರನ್ ಪೆನಾಲ್ಟಿ ಹಾಕಲಾಗುತ್ತದೆ ಎಂದು ಐಸಿಸಿ ತಿಳಿಸಿದೆ.
ಟೀಂ ಇಂಡಿಯಾದಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಸೂಕ್ತ ಆಟಗಾರನೇ ಇಲ್ವಾ..?
ಒಂದು ವೇಳೆ ತಂಡ ಮೊದಲು ಬೌಲ್ ಮಾಡಿದಾಗ ನಿಯಮ ಉಲ್ಲಂಘನೆಯಾದರೆ, ತಂಡಕ್ಕೆ ಸಿಕ್ಕ ಗುರಿಗೆ 5 ರನ್ ಹೆಚ್ಚಿಗೆ ಸೇರ್ಪಡೆಗೊಳಿಸಲಾಗುತ್ತದೆ. ಒಂದು ವೇಳೆ ತಂಡ ಗುರಿ ರಕ್ಷಿಸಿಕೊಳ್ಳುವಾಗ ನಿಯಮ ಉಲ್ಲಂಘನೆಯಾದರೆ, ಎದುರಾಳಿ ತಂಡಕ್ಕೆ ನೀಡಿರುವ ಗುರಿಯಲ್ಲಿ 5 ರನ್ ಕಡಿಮೆಗೊಳಿಸಲಾಗುತ್ತದೆ.
ಹೊಸ ನಿಯಮ ಏಕೆ?
ಅಂತಾರಾಷ್ಟ್ರೀಯ ಪಂದ್ಯಗಳು ಸಮಯಕ್ಕೆ ಸರಿಯಾಗಿ ಮುಕ್ತಾಯಗೊಳ್ಳುತ್ತಿಲ್ಲ. ಓವರ್‌ಗಳ ನಡುವೆ ತಂಡಗಳು ಅನಗತ್ಯವಾಗಿ ಸಮಯ ವ್ಯರ್ಥ ಮಾಡುವುದು ಹೆಚ್ಚುತ್ತಿರುವ ಕಾರಣ, ಕಠಿಣ ನಿಯಮವನ್ನು ಜಾರಿ ಮಾಡುವಂತೆ ಅನೇಕರು ಐಸಿಸಿಯನ್ನು ಒತ್ತಾಯಿಸುತ್ತಿದ್ದರು. ಸದ್ಯ ತಂಡಗಳು ನಿಧಾನಗತಿಯಲ್ಲಿ ಬೌಲ್ ಮಾಡಿದಾಗ ನಾಯಕ ಅಥವಾ ಇಡೀ ತಂಡಕ್ಕೆ ಪಂದ್ಯದ ಸಂಭಾವನೆಯ ಇಂತಿಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಗುತ್ತಿದೆ.
ಭಾರತ-ಆಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ ಪ್ರಕಟ, ಅಂತಿಮ ಪಂದ್ಯಕ್ಕೆ ಬೆಂಗಳೂರು ಆತಿಥ್ಯ!
ಇನ್ನು ಇತ್ತೀಚೆಗೆ ಐಸಿಸಿ, ನಿರ್ದಿಷ್ಟ ಸಮಯದೊಳಗೆ ಓವರ್ ಮುಗಿಸದಿದ್ದರೆ 30 ಯಾರ್ಡ್ ವೃತ್ತದೊಳಗೆ ಒಬ್ಬ ಕ್ಷೇತ್ರರಕ್ಷಕ ಹೆಚ್ಚುವರಿಯಾಗಿ ಇರಬೇಕು ಎನ್ನುವ ನಿಯಮವನ್ನು ಜಾರಿ ಮಾಡಿತ್ತು. ಇಷ್ಟಾದರೂ ತಂಡಗಳು ಓವರ್-ರೇಟ್‌ನಲ್ಲಿ ಹಿಂದೆ ಬಿದ್ದಿರುವ ಕಾರಣ ಐಸಿಸಿ ರನ್ ಪೆನಾಲ್ಟಿ ಹಾಕಲು ನಿರ್ಧರಿಸಿದೆ.