* ಐಸಿಸಿ ನೂತನ ಟಿ20 ಶ್ರೇಯಾಂಕ ಪ್ರಕಟಗೊಂಡಿದೆ* ಬ್ಯಾಟಿಂಗ್‌ನಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಡೇವಿಡ್ ಮಲಾನ್‌* ಬೌಲಿಂಗ್‌ನಲ್ಲಿ ದಕ್ಷಿಣ ಆಫ್ರಿಕಾದ ತಬ್ರೇಜ್‌ ಶಂಸಿ ಅಗ್ರಸ್ಥಾನದಲ್ಲಿದ್ದಾರೆ

ದುಬೈ(ಸೆ.16): ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಮತ್ತು ಕೆ.ಎಲ್‌.ರಾಹುಲ್‌ ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಕ್ರಮವಾಗಿ 4 ಮತ್ತು 6ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಆದರೆ ಭಾರತದ ಯಾವೊಬ್ಬ ಬೌಲರ್‌ಗಳು ಅಗ್ರ 10ರಲ್ಲಿ ಸ್ಥಾನ ಪಡೆದಿಲ್ಲ.

ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ ಅಗ್ರಸ್ಥಾನದಲ್ಲಿ ಮುಂದುವರೆದಿದ್ದು, ಬ್ಯಾಟ್ಸ್‌ಮನ್‌ಗಳ ವಿಭಾಗದ ಅಗ್ರ 7 ಸ್ಥಾನಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ದಕ್ಷಿಣ ಆಫ್ರಿಕಾ ತಂಡದ ನಾಯಕ ಕ್ವಿಂಟನ್‌ ಡಿ ಕಾಕ್‌ 8ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಲಂಕಾ ವಿರುದ್ದದ ಟಿ20 ಸರಣಿಯನ್ನು ಕ್ಲೀನ್‌ ಸ್ವೀಪ್‌ ಮಾಡುವಲ್ಲಿ ಡಿ ಕಾಕ್‌ ಮಹತ್ವದ ಪಾತ್ರ ನಿಭಾಯಿಸಿದ್ದರು. ಲಂಕಾ ಎದುರಿನ ಸರಣಿಯಲ್ಲಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಡಿ ಕಾಕ್‌ 153 ರನ್‌ ಚಚ್ಚಿದ್ದರು. ಇದರೊಂದಿಗೆ ಎಡಗೈ ಬ್ಯಾಟ್ಸ್‌ಮನ್‌ 4 ಸ್ಥಾನ ಮೇಲೇರಿ 8ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. 

Scroll to load tweet…

T20 World Cup: ಪಾಕಿಸ್ತಾನ ಎದುರಿನ ಪಂದ್ಯಕ್ಕೆ ಬಲಿಷ್ಠ ಟೀಂ ಇಂಡಿಯಾ ಹೆಸರಿಸಿದ ಗಂಭೀರ್

ಬೌಲರ್‌ಗಳ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ತಬ್ರೇಜ್‌ ಶಂಸಿ ಅಗ್ರಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗ ಮತ್ತು ಆಫ್ಘಾನಿಸ್ತಾನದ ರಶೀದ್‌ ಖಾನ್‌ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ. ಭಾರತದ ವೇಗಿ ಭುವನೇಶ್ವರ್‌ ಕುಮಾರ್‌ 12 ಮತ್ತು ಆಫ್‌ಸ್ಪಿನ್ನರ್‌ ವಾಷಿಂಗ್‌ಟನ್‌ ಸುಂದರ್‌ 18ನೇ ಸ್ಥಾನದಲ್ಲಿದ್ದಾರೆ. ಯಜುವೇಂದ್ರ ಚಾಹಲ್‌ 25ನೇ ಸ್ಥಾನಕ್ಕೇರಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಹಾರ್ದಿಕ್‌ ಪಾಂಡ್ಯ 20ನೇ ಸ್ಥಾನದಲ್ಲಿದ್ದರೆ, ಆಫ್ಘನ್‌ನ ಮೊಹಮದ್‌ ನಬಿ ಅಗ್ರಸ್ಥಾನದಲ್ಲಿದ್ದಾರೆ.