Asianet Suvarna News Asianet Suvarna News

T20 World Cup: Eng vs NZ ನಗು ನಗುತ್ತಲೇ ಇಂಗ್ಲೆಂಡ್ ಎದುರು ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಂಡ ಕಿವೀಸ್‌..!

* ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಕಿವೀಸ್

* ಇಂಗ್ಲೆಂಡ್ ಎದುರು ನ್ಯೂಜಿಲೆಂಡ್‌ಗೆ 5 ವಿಕೆಟ್‌ಗಳ ಅಂತರದ ಭರ್ಜರಿ ಜಯ

* 2019ರ ಏಕದಿನ ವಿಶ್ವಕಪ್ ಸೋಲಿನ ಲೆಕ್ಕ ಚುಕ್ತಾ ಮಾಡಿದ ಕಿವೀಸ್

ICC T20 World Cup 2021 New Zealand get their sweet revenge against England here is Twitterati reactions kvn
Author
Bengaluru, First Published Nov 11, 2021, 12:03 PM IST

ಬೆಂಗಳೂರು(ನ.11): ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ಎದುರು ನ್ಯೂಜಿಲೆಂಡ್ ತಂಡವು ಅತ್ಯಮೋಘ ಪ್ರದರ್ಶನ ತೋರುವ ಮೂಲಕ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ, ಮೊದಲ ಬಾರಿಗೆ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಫೈನಲ್‌ ಪ್ರವೇಶಿಸಿದ ಸಾಧನೆ ಮಾಡಿದೆ. ಇದಷ್ಟೇ ಅಲ್ಲದೇ 2019ರಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಎದುರು ಅನುಭವಿಸಿದ್ದ ಸೋಲಿಗೆ ಕಿವೀಸ್‌ ಇದೀಗ ನಗು ನಗುತ್ತಲೇ ಸೇಡು ತೀರಿಸಿಕೊಂಡಿದೆ.
 
ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಇಂಗ್ಲೆಂಡ್ ತಂಡಕ್ಕೆ ಆಘಾತ ನೀಡುವಲ್ಲಿ ಕೇನ್ ವಿಲಿಯಮ್ಸನ್ (Kane Williamson) ನೇತೃತ್ವದ ನ್ಯೂಜಿಲೆಂಡ್ ತಂಡವು (New Zealand Cricket Team) ಯಶಸ್ವಿಯಾಗಿದೆ. ನ್ಯೂಜಿಲೆಂಡ್ ಆರಂಭಿಕ ಬ್ಯಾಟರ್‌ ಡೇರೆಲ್ ಮಿಚೆಲ್‌ (Daryl Mitchell) ಬಾರಿಸಿದ ಅಜೇಯ ಅರ್ಧಶತಕ(72) ಹಾಗೂ ಕೊನೆಯಲ್ಲಿ ಜೇಮ್ಸ್ ನೀಶಮ್‌ (James Neesham) ಬಾರಿಸಿದ ಸ್ಪೋಟಕ 27 ರನ್‌ಗಳ ಸಹಾಯದಿಂದ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ ಕಿವೀಸ್ ಗೆಲುವಿನ ನಗೆ ಬೀರಿದೆ. 

ಅಬುಧಾಬಿಯ ಶೇಕ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಪಡೆದಿದ್ದ ಇಂಗ್ಲೆಂಡ್ ತಂಡವು (England Cricket Team) ಮಹತ್ವದ ಪಂದ್ಯದಲ್ಲಿ ಎಚ್ಚರಿಕೆಯ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ ಜಾನಿ ಬೇರ್‌ಸ್ಟೋವ್‌ ಹಾಗೂ ಜೋಸ್ ಬಟ್ಲರ್ ಜೋಡಿ 37 ರನ್‌ಗಳ ಜತೆಯಾಟ ನಿಭಾಯಿಸಿತು. ಬೇರ್‌ಸ್ಟೋವ್ 13 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರೆ, ಬಟ್ಲರ್ ಆಟ ಕೇವಲ 29 ರನ್‌ಗಳಿಗೆ ಸೀಮಿತವಾಯಿತು. ಇನ್ನು ಮಧ್ಯಮ ಕ್ರಮಾಂಕದಲ್ಲಿ ಡೇವಿಡ್ ಮಲಾನ್(41), ಮೋಯಿನ್ ಅಲಿ(51) ಹಾಗೂ ಲಿಯಾಮ್ ಲಿವಿಂಗ್‌ಸ್ಟೋನ್‌(17) ಸಮಯೋಚಿತ ನಡೆಸುವ ಮೂಲಕ ಇಂಗ್ಲೆಂಡ್ 4 ವಿಕೆಟ್ ಕಳೆದುಕೊಂಡು 166 ರನ್‌ ಬಾರಿಸಿತ್ತು.

T20 World Cup 2021: ಇಂಗ್ಲೆಂಡ್ ಮಣಿಸಿ ಚೊಚ್ಚಲ ಭಾರಿಗೆ ಫೈನಲ್ ಪ್ರವೇಶಿಸಿದ ನ್ಯೂಜಿಲೆಂಡ್!

ಇನ್ನು ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ ನ್ಯೂಜಿಲೆಂಡ್ ತಂಡವು 13 ರನ್‌ ಗಳಿಸುವಷ್ಟರಲ್ಲಿ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಇದಾದ ಬಳಿಕ ಮೂರನೇ ವಿಕೆಟ್‌ಗೆ ಡೇರಲ್ ಮಿಚೆಲ್ ಹಾಗೂ ಡೆವೊನ್ ಕಾನ್‌ವೇ 82 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ವಿಕೆಟ್‌ ಕೀಪರ್ ಬ್ಯಾಟರ್ ಕಾನ್‌ವೇ 46 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಗ್ಲೆನ್ ಫಿಲಿಫ್ಸ್ ಕೇವಲ 2 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಕ್ರೀಸ್‌ಗಿಳಿದ ಜೇಮ್ಸ್‌ ನೀಶಮ್‌ ಕೇವಲ 11 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 27 ರನ್ ಸಿಡಿಸುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಿಸಿದರು. ಮತ್ತೊಂದು ತುದಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ಡೇರಲ್ ಮಿಚೆಲ್ 47 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 72 ರನ್ ಬಾರಿಸುವ ಮೂಲಕ ತಂಡವನ್ನು ಭರ್ಜರಿಯಾಗಿ ಫೈನಲ್‌ಗೇರಿಸುವಲ್ಲಿ ಯಶಸ್ವಿಯಾದರು.

ICC T20 Rankings: 8ನೇ ಸ್ಥಾನಕ್ಕೆ ಜಾರಿದ ವಿರಾಟ್ ಕೊಹ್ಲಿ..!

ಎರಡು ವರ್ಷಗಳ ಹಿಂದಷ್ಟೇ ಅಂದರೆ 2019ರಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ಎದುರು ಬೌಂಡರಿ ಕೌಂಟ್ ನಿಯಮದನ್ವಯ ನ್ಯೂಜಿಲೆಂಡ್ ತಂಡವು ವಿರೋಚಿತ ಸೋಲು ಕಂಡಿತ್ತು. ಇದೀಗ ವಿಲಿಯಮ್ಸನ್‌ ಪಡೆ ಹಳೆ ಸೋಲಿನ ಲೆಕ್ಕ ಚುಕ್ತಾ ಮಾಡಿದೆ. ಹಿರಿ-ಕಿರಿಯ ಕ್ರಿಕೆಟಿಗರು ಹಾಗೂ ನೆಟ್ಟಿಗರು ಈ ಗೆಲುವನ್ನು ಸ್ವೀಟ್‌ ರಿವೇಂಜ್ ಎಂದು ಬಣ್ಣಿಸಿದ್ದಾರೆ. 
 

Follow Us:
Download App:
  • android
  • ios