ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾ-ಬಾಂಗ್ಲಾದೇಶ ಮುಖಾಮುಖಿಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನಉಭಯ ತಂಡಗಳಲ್ಲೂ ತಲಾ ಒಂದೊಂದು ಬದಲಾವಣೆ

ಸಿಡ್ನಿ(ಅ.27): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 22ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬ ಬವುಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಸೆಮೀಸ್‌ ಪ್ರವೇಶಿಸುವ ದೃಷ್ಠಿಯಿಂದ ಉಭಯ ತಂಡಗಳ ಪಾಲಿಗೆ ಈ ಪಂದ್ಯ ಮಹತ್ವದ್ದಾಗಿದ್ದು, ಉಭಯ ತಂಡಗಳು ತಲಾ ಒಂದೊಂದು ಬದಲಾವಣೆಯೊಂದಿಗೆ ಕಣಕ್ಕಿಳಿದಿವೆ.

ದಕ್ಷಿಣ ಆಫ್ರಿಕಾ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯಕ್ಕೆ ಇಲ್ಲಿನ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಲುಂಗಿ ಎಂಗಿಡಿ ಬದಲಿಗೆ ತಬ್ರೀಜ್ ಶಮ್ಸಿ ತಂಡ ಕೂಡಿಕೊಂಡಿದ್ದಾರೆ. ಇನ್ನು ಬಾಂಗ್ಲಾದೇಶ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದ್ದು, ಯಾಸಿರ್ ಅಲಿ ಬದಲಿಗೆ ಮೆಹದಿ ಹಸನ್ ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. 

Scroll to load tweet…

ಶಕೀಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ತಂಡವು ಈಗಾಗಲೇ ತಾನಾಡಿದ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದು, ಕೊಂಚ ಒತ್ತಡದಲ್ಲಿರುವ ದಕ್ಷಿಣ ಆಫ್ರಿಕಾಗೆ ಸೋಲಿನ ಶಾಕ್ ನೀಡಲು ಹಾತೊರೆಯುತ್ತಿದೆ. ಸೌಮ್ಯ ಸರ್ಕಾರ್, ಲಿಟನ್ ದಾಸ್, ಶಕೀಬ್ ಅಲ್ ಹಸನ್‌, ಅಫಿಫ್ ಹೊಸೈನ್‌ ಬಾಂಗ್ಲಾದೇಶದ ಬ್ಯಾಟಿಂಗ್ ಬೆನ್ನೆಲುಬು ಎನಿಸಿದ್ದಾರೆ. ಇನ್ನು ಬೌಲಿಂಗ್‌ನಲ್ಲಿ ಟಸ್ಕಿನ್ ಅಹಮದ್, ಮುಷ್ತಾಫಿಜುರ್ ರೆಹಮಾನ್‌ ಟ್ರಂಪ್‌ಕಾರ್ಡ್‌ ವೇಗದ ಬೌಲರ್‌ಗಳೆನಿಸಿದ್ದಾರೆ.

ಪ್ರಾಕ್ಟಿಸ್‌ ನಂತರ ಸರಿಯಾದ ಊಟ ಸಿಗ್ತಿಲ್ಲ: ICC ಆತಿಥ್ಯದ ಬಗ್ಗೆ ಕೋಪಗೊಂಡ ಟೀಂ ಇಂಡಿಯಾ

ಇನ್ನೊಂದೆಡೆ ತೆಂಬ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡವು, ತಾನಾಡಿದ ಮೊದಲ ಪಂದ್ಯವು ಮಳೆಯಿಂದ ರದ್ದಾಗಿತ್ತು. ಜಿಂಬಾಬ್ವೆ ಎದುರು ಸುಲಭ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿದ್ದ ಹರಿಣಗಳ ಪಡೆಗೆ ವರುಣರಾಯ ಶಾಕ್ ನೀಡಿದ್ದ. ಇದರಿಂದಾಗಿ ದಕ್ಷಿಣ ಆಫ್ರಿಕಾ ತಂಡದ ಸೆಮೀಸ್ ಹಾದಿ ಕೊಂಚ ಕಠಿಣವಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಎಂದಿನಂತೆ ದಕ್ಷಿಣ ಆಫ್ರಿಕಾ ತಂಡವು ಕ್ವಿಂಟನ್ ಡಿ ಕಾಕ್, ಏಯ್ಡನ್ ಮಾರ್ಕ್‌ರಮ್, ಡೇವಿಡ್ ಮಿಲ್ಲರ್, ರೀಲೆ ರೌಸೊ, ಟ್ರಿಸ್ಟನ್ ಸ್ಟಬ್ಸ್‌ ಅವರನ್ನು ನೆಚ್ಚಿಕೊಂಡಿದ್ದರೆ, ಬೌಲಿಂಗ್‌ನಲ್ಲಿ ಕಗಿಸೊ ರಬಾಡ, ಏನ್ರಿಚ್ ನೊಕಿಯ, ತಬ್ರಿಜ್ ಶಮ್ಸಿ ಬಾಂಗ್ಲಾದೇಶ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.

ತಂಡಗಳು ಹೀಗಿವೆ ನೋಡಿ

ದಕ್ಷಿಣ ಆಫ್ರಿಕಾ ತಂಡ

ಕ್ವಿಂಟನ್ ಡಿ ಕಾಕ್(ವಿಕೆಟ್ ಕೀಪರ್), ತೆಂಬ ಬವುಮಾ(ನಾಯಕ), ರೀಲೆ ರೌಸೊ, ಏಯ್ಡನ್ ಮಾರ್ಕ್‌ರಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹರಾಜ್, ಕಗಿಸೋ ರಬಾಡ, ಏನ್ರಿಚ್ ನೊಕಿಯೆ, ತಬ್ರಿಜ್ ಶಮ್ಸಿ.

ಬಾಂಗ್ಲಾದೇಶ ತಂಡ
ನಜ್ಮುಲ್ ಹೊಸೈನ್ ಶಾಂಟೊ, ಸೌಮ್ಯ ಸರ್ಕಾರ್, ಲಿಟನ್ ದಾಸ್, ಶಕೀಬ್ ಅಲ್ ಹಸನ್(ನಾಯಕ), ಅಫಿಫ್ ಹೊಸೈನ್, ಮೆಹದಿ ಹಸನ್ ಮಿರ್ಜ್, ನೂರುಲ್ ಹಸನ್(ವಿಕೆಟ್ ಕೀಪರ್), ಮೊಸದೆಕ್ ಹೊಸೈನ್, ಟಸ್ಕಿನ್ ಅಹಮ್ಮದ್, ಹಸನ್ ಮಹಮೂದ್, ಮುಷ್ತಾಫಿಜುರ್ ರೆಹಮಾನ್.