Asianet Suvarna News Asianet Suvarna News

T20 World Cup: Aus vs Ban ಬಾಂಗ್ಲಾ ಎದುರು ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ

* ದುಬೈ ಮೈದಾನದಲ್ಲಿಂದು ಆಸ್ಟ್ರೇಲಿಯಾ-ಬಾಂಗ್ಲಾದೇಶ ಮುಖಾಮುಖಿ

* ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಆಸ್ಟ್ರೇಲಿಯಾ

* ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ ಬಾಂಗ್ಲಾದೇಶ ಕ್ರಿಕೆಟ್ ತಂಡ

ICC T20 World Cup Australia won the toss and Elected to Bowl first Against Bangladesh in Dubai kvn
Author
Bengaluru, First Published Nov 4, 2021, 3:13 PM IST

ದುಬೈ(ನ.04): ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿಂದು ಆಸ್ಟ್ರೇಲಿಯಾ ಹಾಗೂ ಬಾಂಗ್ಲಾದೇಶ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ (Australia Cricket Team) ನಾಯಕ ಆರೋನ್ ಫಿಂಚ್ (Aaron Finch) ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಸೆಮೀಸ್ ಪ್ರವೇಶಿಸುವ ದೃಷ್ಠಿಯಿಂದ ಆಸ್ಟ್ರೇಲಿಯಾ ಪಾಲಿಗಿದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದ್ದು, ಈ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಆಸ್ಟನ್ ಅಗರ್‌ ಬದಲಿಗೆ ಮಿಚೆಲ್ ಮಾರ್ಷ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಬಾಂಗ್ಲಾದೇಶ ತಂಡದಲ್ಲೂ (Bangladesh Cricket Team) ಸಹಾ ಒಂದು ಬದಲಾವಣೆ ಮಾಡಲಾಗಿದ್ದು, ನಸುಮ್ ಬದಲಿಗೆ ಮುಷ್ತಾಫಿಜುರ್ ರೆಹಮಾನ್ ತಂಡ ಕೂಡಿಕೊಂಡಿದ್ದಾರೆ.

T20 World Cup: ಬಾಂಗ್ಲಾ ವಿರುದ್ಧ ಆಸೀಸ್‌ಗೆ ದೊಡ್ಡ ಜಯದ ನಿರೀಕ್ಷೆ!

ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಸೆಮಿಫೈನಲ್‌ ಪ್ರವೇಶಿಸುವ ದೃಷ್ಠಿಯಿಂದ ಆಸ್ಟ್ರೇಲಿಯಾ ಪಾಲಗಿದು ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಆಘಾತಕಾರಿ ಸೋಲು ಕಂಡಿದ್ದು, ಸೆಮೀಸ್‌ ಪ್ರವೇಶಿಸುವ ದೃಷ್ಠಿಯಿಂದ ಆರೋನ್ ಫಿಂಚ್ ಪಡೆಗೆ ಕೊಂಚ ಹಿನ್ನೆಡೆಯಾಗಿ ಪರಿಣಮಿಸಿದೆ. 

ಒಂದು ಕಡೆ ಆರೋನ್ ಫಿಂಚ್ ನೇತೃತ್ವದ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ 3 ಪಂದ್ಯಗಳನ್ನಾಡಿ 2 ಗೆಲುವು ಹಾಗೂ ಒಂದು ಸೋಲಿನೊಂದಿಗೆ 4 ಅಂಕಗಳ ಸಹಿತ ಗ್ರೂಪ್ 1 ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇದೇ ಗುಂಪಿನಲ್ಲಿ ಸತತ 4 ಗೆಲುವುಗಳೊಂದಿಗೆ ಇಂಗ್ಲೆಂಡ್ ಸೆಮೀಸ್ ಹಾದಿಯನ್ನು ಖಚಿತಪಡಿಸಿಕೊಂಡಿದ್ದರೆ, ದಕ್ಷಿಣ ಆಫ್ರಿಕಾ ತಂಡವು 4 ಪಂದ್ಯಗಳನ್ನಾಡಿ 3 ಗೆಲುವು ಹಾಗೂ ಒಂದು ಸೋಲಿನೊಂದಿಗೆ 6 ಅಂಕಗಳ ಸಹಿತ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇದಷ್ಟೇ ಅಲ್ಲದೇ ಹರಿಣಗಳ ನೆಟ್‌ ರನ್‌ರೇಟ್ ಕೂಡಾ ಉತ್ತಮವಾಗಿದೆ.

T20 World Cup: Deepavali ಹಬ್ಬಕ್ಕೆ ಶುಭಕೋರಿದ ವಿರಾಟ್, ವಾರ್ನರ್‌ ಸೇರಿದಂತೆ ಹಲವು ಕ್ರೀಡಾತಾರೆಯರು..!

ಇಂದಿನ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಆಸ್ಟ್ರೇಲಿಯಾ ತಂಡವು ಭಾರೀ ಅಂತರದಲ್ಲಿ ಗೆಲುವು ದಾಖಲಿಸಿದರೆ ಮಾತ್ರ, ದಕ್ಷಿಣ ಆಫ್ರಿಕಾ ತಂಡವನ್ನು ಹಿಂದಿಕ್ಕಿ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೇರಬಹುದು. ಇನ್ನೊಂದೆಡೆ ಬಾಂಗ್ಲಾದೇಶ ತಂಡವು ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿತ್ತು. ಆದರೆ ಸೂಪರ್‌ 12 ಹಂತದಲ್ಲಿ ಆಡಿದ 4 ಪಂದ್ಯಗಳಲ್ಲೂ ಸೋಲು ಕಾಣುವ ಮೂಲಕ ನಿರಾಸೆ ಅನುಭವಿಸಿದೆ, ಇದಷ್ಟೇ ಅಲ್ಲದೇ ಸೆಮೀಸ್ ರೇಸ್‌ನಿಂದಲೂ ಅಧಿಕೃತವಾಗಿ ಹೊರಬಿದ್ದಿದೆ. ಟಿ20 ವಿಶ್ವಕಪ್‌ಗೂ ಮುನ್ನ ತವರಿನಲ್ಲಿ ನಡೆದ 5 ಪಂದ್ಯಗಳ ಟಿ20 ಸರಣಿಯಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಎದುರು ಬಾಂಗ್ಲಾದೇಶ ತಂಡವು 4-1 ಅಂತರದಲ್ಲಿ ಸರಣಿಯನ್ನು ಕೈವಶ ಮಾಡಿಕೊಂಡಿತ್ತು. ಇದೀಗ ಅದೇ ಹಳೆಯ ಹುರುಪಿನೊಂದಿಗೆ ಬಾಂಗ್ಲಾದೇಶ ತಂಡವು ಕಣಕ್ಕಿಳಿದಿದೆ.

ತಂಡಗಳು ಹೀಗಿವೆ ನೋಡಿ: 

ಆಸ್ಟ್ರೇಲಿಯಾ ಕ್ರಿಕೆಟ್ ತಂಡ:
ಡೇವಿಡ್ ವಾರ್ನರ್, ಆರೋನ್ ಫಿಂಚ್ (ನಾಯಕ), ಮಿಚೆಲ್ ಮಾರ್ಷ್‌, ಸ್ಟೀವ್ ಸ್ಮಿತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್‌, ಮಿಚೆಲ್ ಸ್ಟಾರ್ಕ್, ಆಡಂ ಜಂಪಾ, ಜೋಶ್ ಹೇಜಲ್‌ವುಡ್‌.

ಬಾಂಗ್ಲಾದೇಶ ಕ್ರಿಕೆಟ್ ತಂಡ: 
ಮೊಹಮ್ಮದ್ ನಯೀಮ್, ಲಿಟನ್ ದಾಸ್ (ವಿಕೆಟ್ ಕೀಪರ್), ಸೌಮ್ಯ ಸರ್ಕಾರ್, ಮುಷ್ಫಿಕುರ್ ರಹೀಮ್, ಮೊಹಮದುಲ್ಲಾ (ನಾಯಕ), ಅಫೀಫ್ ಹೊಸೈನ್, ಮೆಹದಿ ಹಸನ್, ಟಸ್ಕಿನ್ ಅಹಮ್ಮದ್, ಸೌರಿಫುಲ್ಲಾ ಇಸ್ಲಾಂ, ಮುಷ್ತಾಫಿಜುರ್ ರೆಹಮಾನ್

Follow Us:
Download App:
  • android
  • ios