Asianet Suvarna News Asianet Suvarna News

T20 World Cup: Ban vs Eng ಬಾಂಗ್ಲಾ ಎದುರು ಇಂಗ್ಲೆಂಡ್‌ಗೆ ಭರ್ಜರಿ ಜಯ

* ಬಾಂಗ್ಲಾದೇಶವನ್ನು 8 ವಿಕೆಟ್‌ಗಳಿಂದ ಮಣಿಸಿದ ಇಂಗ್ಲೆಂಡ್‌

* ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ತೋರಿದ ಇಂಗ್ಲೆಂಡ್

* ಸತತ 2 ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಇಂಗ್ಲೆಂಡ್

ICC T20 World Cup England Thrashed Bangladesh by 8 Wicket in Abu Dhabi kvn
Author
Abu Dhabi - United Arab Emirates, First Published Oct 27, 2021, 6:50 PM IST
  • Facebook
  • Twitter
  • Whatsapp

ಅಬುಧಾಬಿ(ಅ.27): ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ಬಾಂಗ್ಲಾದೇಶ ಎದುರು ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅಮೋಘ ಪ್ರದರ್ಶನ ತೋರಿದ ಇಂಗ್ಲೆಂಡ್ ತಂಡವು ಟೂರ್ನಿಯಲ್ಲಿ ಎರಡನೇ ಗೆಲುವು ದಾಖಲಿಸಿದೆ. ಬಾಂಗ್ಲಾದೇಶದ ಎದುರು ಇನ್ನೂ 35 ಎಸೆತಗಳು ಬಾಕಿ ಇರುವಂತೆಯೇ 8 ವಿಕೆಟ್‌ಗಳ ಗೆಲುವು ದಾಖಲಿಸಿ  ಇಯಾನ್‌ ಮಾರ್ಗನ್‌ (Eoin Morgan) ಪಡೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇನ್ನು ಸತತ 2 ಸೋಲು ಕಂಡ ಬಾಂಗ್ಲಾದೇಶ ಅಂಕಪಟ್ಟಿಯಲ್ಲಿ 5ನೇ ಸ್ಥಾನ ಪಡೆದಿದೆ. 

ಹೌದು, ಇಲ್ಲಿನ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ನೀಡಿದ್ದ 125 ರನ್‌ಗಳ ಸಾಧಾರಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ಕ್ರಿಕೆಟ್ ತಂಡ (England Cricket Team)ವು ನಿರೀಕ್ಷೆಯಂತೆಯೇ ಉತ್ತಮ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ ಜೇಸನ್ ರಾಯ್ (Jason Roy) ಹಾಗೂ ಜೋಸ್‌ ಬಟ್ಲರ್ (Jos Buttler) ಜೋಡಿ 4.5 ಓವರ್‌ಗಳಿಗೆ 39 ರನ್‌ಗಳ ಜತೆಯಾಟವಾಡಿತು. ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಜೋಸ್ ಬಟ್ಲರ್ 18 ಎಸೆತಗಳನ್ನು ಎದುರಿಸಿ ಒಂದು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 18 ರನ್ ಬಾರಿಸಿ ನಸುಮ್ ಅಹಮ್ಮದ್‌ಗೆ ವಿಕೆಟ್ ಒಪ್ಪಿಸಿದರು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಜೇಸನ್ ರಾಯ್ ಹಾಗೂ ಡೇವಿಡ್ ಮಲಾನ್ ಜೋಡಿ ಎರಡನೇ ವಿಕೆಟ್‌ಗೆ 73 ರನ್‌ಗಳ ಜತೆಯಾಟವಾಡುವ ಮೂಲಕ ತಂಡವನ್ನು ಸುಲಭವಾಗಿ ಗೆಲುವಿನತ್ತ ಕೊಂಡೊಯ್ದರು.

T20 World Cup: ಬಲಿಷ್ಠ ಇಂಗ್ಲೆಂಡ್ ಗೆಲ್ಲಲು ಸಾಧಾರಣ ಗುರಿ ನೀಡಿದ ಬಾಂಗ್ಲಾ

ಸ್ಪೋಟಕ ಬ್ಯಾಟಿಂಗ್ ನಡೆಸಿದ ಜೇಸನ್ ರಾಯ್ ಕೇವಲ 38 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 61 ರನ್‌ ಬಾರಿಸಿ ಶೊರಿಫುಲ್ಲಾ ಇಸ್ಲಾಂಗೆ ವಿಕೆಟ್‌ ಒಪ್ಪಿಸಿದರು. ಇನ್ನು ಡೇವಿಡ್ ಮಲಾನ್ ಅಜೇಯ 28 ಹಾಗೂ ಜಾನಿ ಬೇರ್‌ಸ್ಟೋವ್ 8 ರನ್‌ ಬಾರಿಸುವ ಮೂಲಕ ಸುಲಭವಾಗಿ ಇಂಗ್ಲೆಂಡ್ ತಂಡವನ್ನು ಗೆಲುವಿನ ದಡ ಸೇರಿಸಿದರು.

ಇದಕ್ಕೂ ಮೊದಲು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬಾಂಗ್ಲಾದೇಶ ತಂಡಕ್ಕೆ ಇಂಗ್ಲೆಂಡ್‌ ಸ್ಪಿನ್ನರ್ ಮೋಯಿನ್ ಅಲಿ (Moeen Ali) ಹಾಗೂ ಲಿಯಾಮ್‌ ಲಿವಿಂಗ್‌ಸ್ಟೋನ್ ಕಾಟ ಕೊಟ್ಟರು. ಪಂದ್ಯದ ಮೂರನೇ ಓವರ್‌ನಲ್ಲೇ ಮೋಯಿನ್ ಅಲಿ ಸತತ 2 ವಿಕೆಟ್ ಕಬಳಿಸಿ ಬಾಂಗ್ಲಾಗೆ ಆರಂಭಿಕ ಶಾಕ್ ನೀಡಿದರು. ಇನ್ನು ಶಕೀಬ್ ಅಲ್ ಹಸನ್(4) ಕೂಡಾ ಒಂದಂಕಿ ಮೊತ್ತಕ್ಕೆ ವಿಕೆಟ್ ಒಪ್ಪಿಸಿದರು. ಒಂದು ವೇಳೆ ಶಕೀಬ್ ಅಲ್‌ ಹಸನ್ (Shakib Al Hasan) ಮಧ್ಯಮ ಕ್ರಮಾಂಕದಲ್ಲಿ ಕೊಂಚ ಕಾಲ ನೆಲಕಚ್ಚಿ ಬ್ಯಾಟಿಂಗ್ ನಡೆಸಿದ್ದರೇ, ಬಲಿಷ್ಠ ಇಂಗ್ಲೆಂಡ್‌ಗೆ ಸವಾಲಿನ ಗುರಿ ನೀಡಬಹುದಿತ್ತು.

T20 World Cup: ಪಾಕ್ ಎದುರಿನ ಸೋಲಿನ ಬೆನ್ನಲ್ಲೇ ಕಿವೀಸ್‌ಗೆ ಮತ್ತೊಂದು ಶಾಕ್..?

ಇನ್ನು ಮಧ್ಯಮ ಕ್ರಮಾಂಕದಲ್ಲಿ ಮುಷ್ಫಿಕುರ್ ರಹೀಮ್(30) ಹಾಗೂ ಮೊಹಮದುಲ್ಲಾ(19) ಕೊಂಚ ಜತೆಯಾಟ ನಿಭಾಯಿಸುವ ಮೂಲಕ ತಂಡ ಮೂರಂಕಿ ಮೊತ್ತ ದಾಖಲಿಸಲು ನೆರವಾದರು. ಒಂದು ಹಂತದಲ್ಲಿ 83 ರನ್‌ಗಳಿಗೆ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಬಾಂಗ್ಲಾ ಕೆಳ ಕ್ರಮಾಂಕದ ಬ್ಯಾಟರ್‌ಗಳು ಉಪಯುಕ್ತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ರನ್‌ ಕಾಣಿಕೆ ನೀಡಿದರು. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟರ್ ನುರುಲ್ ಹಸನ್ 18 ಎಸೆತಗಳನ್ನು ಎದುರಿಸಿ 16 ರನ್‌ ಬಾರಿಸಿದರೆ, ಮೆಹದಿ ಹಸನ್ 10 ಎಸೆತಗಳಲ್ಲಿ 2 ಬೌಂಡರಿ ಸಹಿತ 11 ರನ್ ಗಳಿಸಿದರು. ಇನ್ನು ನಸುಮ್ ಅಹಮ್ಮದ್ 9 ಎಸೆತಗಳಲ್ಲಿ 1 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ ಅಜೇಯ 19 ರನ್‌ಗಳಿಸುವ ಮೂಲಕ ತಂಡದ ಮೊತ್ತವನ್ನು 120ರ ಗಡಿ ದಾಟಿಸಿದರು. 

Follow Us:
Download App:
  • android
  • ios