ಅಡಿಲೇಡ್ ಓವಲ್ ಮೈದಾನದಲ್ಲಿಂದು ಭಾರತ-ಇಂಗ್ಲೆಂಡ್ ಕದನಹೈವೋಲ್ಟೇಜ್ ಪಂದ್ಯಕ್ಕೆ ಅಡಿಲೇಡ್ ಓವಲ್‌ ಮೈದಾನ ಆತಿಥ್ಯಇಂಗ್ಲೆಂಡ್‌ ತಂಡದಲ್ಲಿ ಮಹತ್ವದ ಬದಲಾವಣೆ

ಅಡಿಲೇಡ್(ನ.10): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಈ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಅಡಿಲೇಡ್ ಓವಲ್‌ ಮೈದಾನ ಆತಿಥ್ಯವನ್ನು ವಹಿಸಿದೆ.

ಇನ್ನು ನಿರೀಕ್ಷೆಯಂತೆಯೇ ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಫಿಲ್ ಸಾಲ್ಟ್ ಹಾಗೂ ಕ್ರಿಸ್ ಜೋರ್ಡನ್ ತಂಡ ಕೂಡಿಕೊಂಡಿದ್ದಾರೆ. ಇಂಗ್ಲೆಂಡ್ ತಂಡದ ತಾರಾ ಬ್ಯಾಟರ್ ಡೇವಿಡ್ ಮಲಾನ್ ಹಾಗೂ ಮಾರಕ ವೇಗಿ ಮಾರ್ಕ್ ವುಡ್ ಗಾಯದ ಸಮಸ್ಯೆಯಿಂದಾಗಿ ಇಂದಿನ ಪಂದ್ಯಕ್ಕೆ ಅಲಭ್ಯರಾಗಿದ್ದು, ಫಿಲ್ ಸಾಲ್ಟ್ ಹಾಗೂ ಕ್ರಿಸ್ ಜೋರ್ಡನ್‌ಗೆ ಮಣೆ ಹಾಕಲಾಗಿದೆ. ಇನ್ನೊಂದಡೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ವಿಕೆಟ್ ಕೀಪರ್ ರೂಪದಲ್ಲಿ ದಿನೇಶ್ ಕಾರ್ತಿಕ್ ಬದಲಿಗೆ ರಿಷಭ್ ಪಂತ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

Scroll to load tweet…

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಸೂಪರ್ 12 ಹಂತದಲ್ಲಿ 4 ಗೆಲುವು ಸಾಧಿಸುವ ಮೂಲಕ ಗ್ರೂಪ್ 2 ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ಮೂಲಕ ಆತ್ಮವಿಶ್ವಾಸದಿಂದ ಬೀಗುತ್ತಿದ್ದು, ಇದೀಗ ಅದೇ ಲಯವನ್ನು ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದೆ. 

T20 World Cup: ಇಂಗ್ಲೆಂಡ್ ಎದುರಿನ ಸೆಮೀಸ್‌ಗೆ ಭಾರತ ಸಂಭಾವ್ಯ ತಂಡ..! ಡಿಕೆ/ಪಂತ್ ಯಾರಿಗೆ ಸಿಗುತ್ತೆ ಸ್ಥಾನ?

ಅಡಿಲೇಡ್‌ನಲ್ಲಿ ಮತ್ತೆ ವಿರಾಟ್‌ ಕೊಹ್ಲಿ ಶೋ?

ಅಡಿಲೇಡ್‌ ಭಾರತದಾಚೆ ವಿರಾಟ್‌ ಕೊಹ್ಲಿಯ ನೆಚ್ಚಿನ ಕ್ರೀಡಾಂಗಣ. ಇಲ್ಲಿ ಅವರು 14 ಅಂ.ರಾ. ಇನ್ನಿಂಗ್ಸಲ್ಲಿ 900ಕ್ಕೂ ಹೆಚ್ಚು ರನ್‌ ಗಳಿಸಿದ್ದಾರೆ. ಬಾಂಗ್ಲಾ ವಿರುದ್ಧದ ಮಹತ್ವದ ಪಂದ್ಯದಲ್ಲಿ ಕೊಹ್ಲಿ ಅರ್ಧಶತಕ ಸಿಡಿಸಿದ್ದು. ಅಡಿಲೇಡ್‌ ಓವಲ್‌ನಲ್ಲಿ ಕೊಹ್ಲಿಯಿಂದ ಭಾರತ ಮತ್ತೊಂದು ಆಕರ್ಷಕ ಇನ್ನಿಂಗ್ಸ್‌ ನಿರೀಕ್ಷೆ ಮಾಡುತ್ತಿದೆ.

ತಂಡಗಳು ಹೀಗಿವೆ ನೋಡಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಕೆ ಎಲ್ ರಾಹುಲ್‌, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್‌ ಪಾಂಡ್ಯ, ದಿನೇಶ್ ಕಾರ್ತಿಕ್‌/ ರಿಷಭ್ ಪಂತ್‌, ಅಕ್ಷರ್‌ ಪಟೇಲ್, ರವಿಚಂದ್ರನ್ ಅಶ್ವಿನ್‌, ಭುವನೇಶ್ವರ್‌ ಕುಮಾರ್, ಮೊಹಮ್ಮದ್ ಶಮಿ, ಆರ್ಶದೀಪ್‌ ಸಿಂಗ್.

ಇಂಗ್ಲೆಂಡ್‌: ಜೋಸ್ ಬಟ್ಲರ್‌(ನಾಯಕ), ಅಲೆಕ್ಸ್ ಹೇಲ್ಸ್‌, ಫಿಲ್ ಸಾಲ್ಟ್‌, ಬೆನ್ ಸ್ಟೋಕ್ಸ್‌, ಹ್ಯಾರಿ ಬ್ರೂಕ್‌, ಲಿಯಾಮ್ ಲಿವಿಂಗ್‌ಸ್ಟೋನ್‌, ಮೋಯಿನ್ ಅಲಿ, ಸ್ಯಾಮ್ ಕರ್ರನ್‌, ಕ್ರಿಸ್ ವೋಕ್ಸ್‌, ಕ್ರಿಸ್ ಜೋರ್ಡನ್‌, ಆದಿಲ್ ರಶೀದ್‌.

ಪಂದ್ಯ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌