ಬ್ರಿಸ್ಬೇನ್ ಮೈದಾನದಲ್ಲಿಂದು ಇಂಗ್ಲೆಂಡ್-ನ್ಯೂಜಿಲೆಂಡ್ ಸೆಣಸಾಟಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ಕೆಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಇಂಗ್ಲೆಂಡ್

ಬ್ರಿಸ್ಬೇನ್(ನ.01): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 33ನೇ ಪಂದ್ಯದಲ್ಲಿಂದು ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಉಭಯ ತಂಡಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ದ ಗಾಬಾ ಮೈದಾನ ಆತಿಥ್ಯವನ್ನು ವಹಿಸಿದೆ. ಸೆಮೀಸ್‌ ಕನಸನ್ನು ಜೀವಂತವಾಗಿರಿಸಿಕೊಳ್ಳಬೇಕಿದ್ದರೇ ಇಂಗ್ಲೆಂಡ್ ತಂಡದ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿಕೊಂಡಿದೆ. ಇನ್ನೊಂದೆಡೆ ನ್ಯೂಜಿಲೆಂಡ್‌ ತಂಡವು ಈ ಪಂದ್ಯ ಗೆದ್ದು ಸೆಮೀಸ್‌ಗೆ ಲಗ್ಗೆಯಿಡುವ ಲೆಕ್ಕಾಚಾರದಲ್ಲಿದೆ. 

Scroll to load tweet…

100ನೇ ಪಂದ್ಯವನ್ನಾಡುತ್ತಿರುವ ಬಟ್ಲರ್: ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್, ಇಂಗ್ಲೆಂಡ್ ಪರ ಇಂದು 100ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡುತ್ತಿದ್ದು, ಈ ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕುವ ಮೂಲಕ ಈ ಪಂದ್ಯವನ್ನು ಸ್ಮರಣೀಯವಾಗಿರಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಜೋಸ್ ಬಟ್ಲರ್ ಇದುವರೆಗೂ ಇಂಗ್ಲೆಂಡ್ ಪರ 99 ಟಿ20 ಪಂದ್ಯಗಳನ್ನಾಡಿ 33.26ರ ಬ್ಯಾಟಿಂಗ್ ಸರಾಸರಿಯಲ್ಲಿ 1 ಶತಕ ಹಾಗೂ 17 ಅರ್ಧಶತಕ ಸಹಿತ 2,395 ರನ್ ಬಾರಿಸಿದ್ದಾರೆ. ಇಂಗ್ಲೆಂಡ್ ಪಾಲಿಗೆ ಈ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿರುವುದರಿಂದ ಜೋಸ್ ಬಟ್ಲರ್ ಅವರ ಮೇಲೆ ಇದೀಗ ಬೆಟ್ಟದಷ್ಟು ನಿರೀಕ್ಷೆಯಿದೆ.

T20 World Cup: ಆಫ್ಘಾನ್ ಎದುರು ಜಯ ತಂದುಕೊಟ್ಟ ಧನಂಜಯ..! ಲಂಕಾ ಸೆಮೀಸ್ ಕನಸು ಜೀವಂತ

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು 2021ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕೊನೆಯ ಬಾರಿಗೆ ಟಿ20 ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಅಬುದಾಬಿಯಲ್ಲಿ ನಡೆದ 2021ರ ಐಸಿಸಿ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ಎದುರು ನ್ಯೂಜಿಲೆಂಡ್ ತಂಡವು ರೋಚಕ ಗೆಲುವು ದಾಖಲಿಸುವ ಮೂಲಕ ಫೈನಲ್‌ಗೆ ಲಗ್ಗೆಯಿಟ್ಟಿತ್ತು. ಇದೀಗ ಕೇನ್‌ ವಿಲಿಯಮ್ಸನ್ ನೇತೃತ್ವದ ಕಿವೀಸ್ ತಂಡವು ಅಂತಹದ್ದೇ ಪ್ರದರ್ಶನ ತೋರುವ ಮೂಲಕ ಮೊದಲ ತಂಡವಾಗಿ ಸೆಮಿಫೈನಲ್‌ಗೆ ಲಗ್ಗೆಯಿಡುವ ಕನವರಿಕೆಯಲ್ಲಿದೆ.

ತಂಡಗಳು ಹೀಗಿವೆ ನೋಡಿ

ನ್ಯೂಜಿಲೆಂಡ್: ಫಿನ್ ಅಲೆನ್, ಡೆವೊನ್ ಕಾನ್‌ವೇ, ಕೇನ್ ವಿಲಿಯಮ್ಸನ್(ನಾಯಕ), ಗ್ಲೆನ್ ಫಿಲಿಫ್ಸ್, ಡೇರಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಲಾಕಿ ಫರ್ಗ್ಯೂಸನ್, ಟ್ರೆಂಟ್ ಬೌಲ್ಟ್.

ಇಂಗ್ಲೆಂಡ್: ಅಲೆಕ್ಸ್ ಹೇಲ್ಸ್, ಜೋಸ್ ಬಟ್ಲರ್(ನಾಯಕ), ಡೇವಿಡ್ ಮಲಾನ್, ಬೆನ್ ಸ್ಟೋಕ್ಸ್‌, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೋಯಿನ್ ಅಲಿ, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್‌, ಆದಿಲ್ ರಶೀದ್, ಮಾರ್ಕ್‌ ವುಡ್.

ಪಂದ್ಯ: ಮಧ್ಯಾಹ್ನ 1.30ಕ್ಕೆ
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್