* ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭ* ಅಕ್ಟೋಬರ್ 24ರಂದು ಭಾರತ ಹಾಗೂ ಪಾಕಿಸ್ತಾನ ಸೆಣಸಾಟ ಸಾಧ್ಯತೆ* ಐಸಿಸಿಯಿಂದ ಇನ್ನೂ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ

ನವದೆಹಲಿ(ಆ.05): ಮುಂಬರುವ ಟಿ20 ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ- ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್‌ 24ರಂದು ನಡೆಯಲಿದೆ ಎಂದು ವರದಿಯಾಗಿದೆ.

ಅಕ್ಟೋಬರ್ 17ರಿಂದ ಟಿ20ವಿಶ್ವಕಪ್‌ ಆರಂಭವಾಗಲಿದ್ದು, ಕೆಲ ದಿನಗಳಲ್ಲೇ ಅಧಿಕೃತ ವೇಳಾಪಟ್ಟಿ ಬಿಡುಗಡೆಯಾಗಲಿದೆ. ಗುಂಪು 2ರಲ್ಲಿ ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್‌, ಆಫ್ಘಾನಿಸ್ತಾನ ತಂಡಗಳಿವೆ. ಈ ಪೈಕಿ ಭಾರತ- ಪಾಕ್‌ ನಡುವಿನ ಪಂದ್ಯ ಅ.24, ಭಾನುವಾರ ನಡೆಯುವ ಸಾಧ್ಯತೆ ಇದೆ. ವಾರಾಂತ್ಯವಾಗಿರುವುದರಿಂದ ಅಂದೇ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಹೈವೋಲ್ಟೇಜ್‌ ಪಂದ್ಯ ನಡೆಸಲು ಐಸಿಸಿ ಯೋಜನೆ ಹಾಕಿಕೊಂಡಿದೆ ಎಂದು ಗೊತ್ತಾಗಿದೆ.

ಟೀಂ ಇಂಡಿಯಾ ದಾಳಿಗೆ ಇಂಗ್ಲೆಂಡ್ ತತ್ತರ, 183 ರನ್‌ಗೆ ರೂಟ್ ಸೈನ್ಯ ಆಲೌಟ್

ಭಾರತದಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯು ಕೋವಿಡ್ ಕಾರಣದಿಂದಾಗಿ ಯುಎಇಗೆ ಸ್ಥಳಾಂತರವಾಗಿದೆ. ಟಿ20 ವಿಶ್ವಕಪ್ ಟೂರ್ನಿಗೆ ಬಿಸಿಸಿಐ ಆತಿಥ್ಯವನ್ನು ವಹಿಸಿದೆ. ಟಿ20 ವಿಶ್ವಕಪ್ ಟೂರ್ನಿಯುವ ಅಕ್ಟೋಬರ್ 17ರಿಂದ ನವೆಂಬರ್ 14ರವರೆಗೆ ನಡೆಯಲಿದೆ.