T20 World Cup ಪಾಕಿಸ್ತಾನ ಎದುರು ಟಾಸ್ ಗೆದ್ದ ನೆದರ್‌ಲೆಂಡ್ಸ್ ಬ್ಯಾಟಿಂಗ್ ಆಯ್ಕೆ
* ನೆದರ್‌ಲೆಂಡ್ಸ್-ಪಾಕಿಸ್ತಾನ ನಡುವಿನ ಕಾದಾಟಕ್ಕೆ ಕ್ಷಣಗಣನೆ
* ಟಾಸ್ ಗೆದ್ದ ನೆದರ್‌ಲೆಂಡ್ಸ್ ತಂಡ ಬ್ಯಾಟಿಂಗ್ ಆಯ್ಕೆ
* ಮೊದಲ ಗೆಲುವಿನ ನಿರೀಕ್ಷೆಯಲ್ಲಿ ಉಭಯ ತಂಡಗಳು
ಪರ್ತ್(ಅ.30): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ 29ನೇ ಪಂದ್ಯದಲ್ಲಿಂದು ನೆದರ್‌ಲೆಂಡ್ಸ್ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ನೆದರ್‌ಲೆಂಡ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಉಭಯ ತಂಡಗಳು ಈಗಾಗಲೇ ತಲಾ ಎರಡು ಪಂದ್ಯಗಳನ್ನಾಡಿದ್ದು, ಎರಡೂ ಪಂದ್ಯಗಳಲ್ಲೂ ಸೋಲಿನ ಕಹಿಯೊಂಡಿದ್ದು, ಇದೀಗ ಮೊದಲ ಗೆಲುವಿನ ನಿರೀಕ್ಷೆಯಲ್ಲಿವೆ.
ಪಾಕಿಸ್ತಾನ ಹಾಗೂ ನೆದರ್‌ಲೆಂಡ್ಸ್ ತಂಡಗಳ ನಡುವಿನ ಕಾದಾಡಕ್ಕೆ ಇಲ್ಲಿನ ಪರ್ತ್ ಕ್ರಿಕೆಟ್ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ಪಾಕಿಸ್ತಾನ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಹೈದರ್ ಅಲಿ ಬದಲಿಗೆ ಫಖರ್ ಜಮಾನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ನೆದರ್‌ಲೆಂಡ್ಸ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿದೆ.
T20 World Cup ಬಾಬರ್ ಅಜಂ ನೇತೃತ್ವದ ಪಾಕಿಸ್ತಾನಕ್ಕಿಂದು Do or Die ಪಂದ್ಯ..!
ಬ್ಯಾಟಿಂಗ್ ಆಧಾರಸ್ತಂಭ ಎನಿಸಿರುವ ಬಾಬರ್ ಹಾಗೂ ಮೊಹಮದ್ ರಿಜ್ವಾನ್ ಮಂಕಾಗಿರುವುದು ತಂಡದ ಹಿನ್ನಡೆಗೆ ಪ್ರಮುಖ ಕಾರಣ. ವೇಗಿ ಶಾಹೀನ್ ಅಫ್ರಿದಿ ಮೊನಚು ಕಳೆದುಕೊಂಡಿರುವುದು ಕೂಡ ತಂಡದ ತಲೆನೋವು ಹೆಚ್ಚಿಸಿದೆ. ಮತ್ತೊಂದೆಡೆ ನೆದರ್‌ಲೆಂಡ್ಸ್ ಆಚ್ಚರಿ ಫಲಿತಾಂಶ ನೀಡಬಲ್ಲ ಸಾಮರ್ಥ್ಯ ಹೊಂದಿದೆ. ಇದೇ ವರ್ಷ ಆಗಸ್ಟಲ್ಲಿ ನಡೆದ ಏಕದಿನ ಸರಣಿಯಲ್ಲಿ ಪಾಕಿಸ್ತಾನಕ್ಕೆ ಡಚ್ ತಂಡ ಪ್ರಬಲ ಪೈಪೋಟಿ ನೀಡಿತ್ತು ಎನ್ನುವುದನ್ನು ಮರೆಯುವಂತಿಲ್ಲ.
ತಂಡಗಳು ಹೀಗಿವೆ ನೋಡಿ
ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್(ವಿಕೆಟ್ ಕೀಪರ್), ಬಾಬರ್ ಅಜಂ(ನಾಯಕ), ಫಖರ್ ಜಮಾನ್, ಶಾನ್ ಮಸೂದ್, ಇಫ್ತಿಕಾರ್ ಅಹಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸೀಂ ಜೂನಿಯರ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ.
ನೆದರ್‌ಲೆಂಡ್ಸ್: ವಿಕ್ರಂಜಿತ್ ಸಿಂಗ್, ಮ್ಯಾಕ್ಸ್ ಒ'ಡೌಡ್, ಬಾಸ್ ಡೆ ಲೀಡೆ, ಕಾಲಿನ್ ಅಕರ್‌ಮನ್, ಟಾಮ್ ಕೂಪರ್, ಸ್ಕಾಟ್ ಎಡ್ವರ್ಡ್ಸ್(ನಾಯಕ&ವಿಕೆಟ್ ಕೀಪರ್), ಟಿಮ್ ಪ್ರಿಂಗಲ್, ಲೊಗನ್ ವ್ಯಾನ್ ಬೀಕ್, ಶೆರಿಜ್ ಅಹಮದ್, ಫ್ರೆಡ್ ಕ್ಲಾಸೇನ್, ಪೌಲ್ ವ್ಯಾನ್ ಮೀಕ್ರೆನ್.