Asianet Suvarna News Asianet Suvarna News

T20 World Cup: ಟೀಂ ಇಂಡಿಯಾ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

* ಅಬುಧಾಬಿಯಲ್ಲಿಂದು ಭಾರತ-ನ್ಯೂಜಿಲೆಂಡ್ ಮುಖಾಮುಖಿ

* ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾದ ಉಭಯ ತಂಡಗಳು

* ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

ICC T20 World Cup New Zealand Won the toss and Elected to Bowl first against Team India in Dubai kvn
Author
Bengaluru, First Published Oct 31, 2021, 7:08 PM IST
  • Facebook
  • Twitter
  • Whatsapp

ದುಬೈ(ಅ.31): ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಎರಡು ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಸೂರ್ಯಕುಮಾರ್ ಯಾದವ್ (Suryakumar Yadav) ಹಾಗೂ ಭುವನೇಶ್ವರ್ ಕುಮಾರ್‌ಗೆ ವಿಶ್ರಾಂತಿ ನೀಡಲಾಗಿದ್ದು, ಇಶಾನ್ ಕಿಶನ್ (Ishan Kishan) ಹಾಗೂ ಶಾರ್ದೂಲ್ ಠಾಕೂರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು,ಟಿಮ್ ಸೈಫರ್ಟ್‌ ಬದಲಿಗೆ ಆಡಂ ಮಿಲ್ನೆ ತಂಡ ಕೂಡಿಕೊಂಡಿದ್ದಾರೆ.

T20 World Cup: ಟ್ರೆಂಟ್ ಬೌಲ್ಟ್‌ಗೆ ಎಚ್ಚರಿಕೆ ಕೊಟ್ಟ ವಿರಾಟ್ ಕೊಹ್ಲಿ..!

ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನಿಸಿದೆ. ಉಭಯ ತಂಡಗಳು ಮೊದಲ ಪಂದ್ಯದಲ್ಲಿ ಆಘಾತಕಾರಿ ಸೋಲು ಕಂಡಿದೆ. ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ (Team India) ತಾನಾಡಿದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ದ 10 ವಿಕೆಟ್‌ಗಳ ಅಂತರದ ರೋಚಕ ಸೋಲು ಕಂಡಿತ್ತು. ಇನ್ನು ನ್ಯೂಜಿಲೆಂಡ್ ವಿರುದ್ದ ಪಾಕಿಸ್ತಾನ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿತ್ತು.

ವಿಶ್ವಕಪ್ ಟೂರ್ನಿ ಇತಿಹಾಸದಲ್ಲಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ದ 18 ವರ್ಷಗಳ ಹಿಂದೆ ಗೆಲುವಿನ ನಗೆ ಬೀರಿತ್ತು. 2003ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ನ್ಯೂಜಿಲೆಂಡ್ ಎದುರು 7 ವಿಕೆಟ್‌ಗಳ ಜಯ ಸಾಧಿಸಿತ್ತು. ಇದಾದ ಬಳಿಕ ಟೀಂ ಇಂಡಿಯಾ ವಿಶ್ವಕಪ್‌ನಲ್ಲಿ ಕಿವೀಸ್ ಎದುರು ಗೆಲುವಿನ ನಗೆ ಬೀರಿದೆ.

T20 World Cup: ಇಂದು ಭಾರತ, ಕಿವೀಸ್‌ ‘ಕ್ವಾರ್ಟರ್‌ ಫೈನಲ್‌’!

ಇನ್ನು ಕಳೆದ ವರ್ಷ ಟೀಂ ಇಂಡಿಯಾ, ನ್ಯೂಜಿಲೆಂಡ್ ಪ್ರವಾಸ ಕೈಗೊಂಡಿದ್ದಾಗ, ಅವರ ನೆಲದಲ್ಲೇ ವಿರಾಟ್ ಕೊಹ್ಲಿ ಪಡೆ 5-0 ಅಂತರದಲ್ಲಿ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್‌ ಮಾಡಿತ್ತು. ಹೀಗಾಗಿ ಕೆ.ಎಲ್‌. ರಾಹುಲ್, ರೋಹಿತ್ ಶರ್ಮಾ ಉತ್ತಮ ಆರಂಭ ಒದಗಿಸಿಕೊಟ್ಟರೆ, ಮಧ್ಯಮ ಕ್ರಮಾಂಕದಲ್ಲಿ ಎಲ್ಲಾ ಆಟಗಾರರು ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದರೆ ಸ್ಪರ್ಧಾತ್ಮಕ ಮೊತ್ತ ಕಲೆಹಾಕಬಹುದಾಗಿದೆ. ಆಲ್ರೌಂಡರ್‌ಗಳಾದ ಜಡೇಜಾ ಹಾಗೂ ಹಾರ್ದಿಕ್ ಪಾಂಡ್ಯ ಮಿಂಚಿದರೆ ಕಿವೀಸ್ ಎದುರು ಭಾರತ ಪ್ರಾಬಲ್ಯ ಮೆರೆಯಬಹುದು.

ಸೂರ್ಯಕುಮಾರ್ ಯಾದವ್ ಅನುಪಸ್ಥಿತಿಯನ್ನು ಇಶಾನ್ ಕಿಶನ್ ಹಾಗೂ ಭುವನೇಶ್ವರ್ ಕುಮಾರ್ ಅನುಪಸ್ಥಿತಿಯನ್ನು ಶಾರ್ದೂಲ್ ಠಾಕೂರ್ ಯಾವ ರೀತಿ ಬಳಸಿಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಮಹತ್ವದ ಪಂದ್ಯದಲ್ಲಿ ಅಶ್ವಿನ್‌ ಅವರನ್ನು ಮತ್ತೊಮ್ಮೆ ಕಡೆಗಣಿಸಿ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಮಣೆಹಾಕಲಾಗಿದೆ. ನಾಯಕನ ನಂಬಿಕೆಯನ್ನು ವರುಣ್ ಚಕ್ರವರ್ತಿ ಉಳಿಸಿಕೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.

ತಂಡಗಳು ಹೀಗಿವೆ ನೋಡಿ

ಭಾರತ ಕ್ರಿಕೆಟ್ ತಂಡ: ರೋಹಿತ್ ಶರ್ಮಾ, ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ.

ನ್ಯೂಜಿಲೆಂಡ್ ಕ್ರಿಕೆಟ್ ತಂಡ:

ಮಾರ್ಟಿನ್ ಗಪ್ಟಿಲ್, ಡೇರಲ್ ಮಿಚೆಲ್, ಕೇನ್ ವಿಲಿಯಮ್ಸನ್‌, ಜೇಮ್ಸ್ ನೀಶಮ್, ಡೇವೊನ್ ಕಾನ್ವೆ, ಗ್ಲೆನ್ ಫಿಲಿಫ್ಸ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ಆಡಂ ಮಿಲ್ನೆ, ಟ್ರೆಂಟ್ ಬೌಲ್ಟ್

Follow Us:
Download App:
  • android
  • ios