Asianet Suvarna News Asianet Suvarna News

T20 World Cup: ಬಾಂಗ್ಲಾ ಎದುರು ಟಾಸ್ ಗೆದ್ದ ಆಫ್ರಿಕಾ ಬೌಲಿಂಗ್ ಆಯ್ಕೆ

* ಅಬುಧಾಬಿಯಲ್ಲಿಂದು ಬಾಂಗ್ಲಾ-ಆಫ್ರಿಕಾ ಮುಖಾಮುಖಿ

* ಸೆಮೀಸ್‌ ದೃಷ್ಠಿಯಿಂದ ಆಫ್ರಿಕಾ ಪಾಲಿಗಿಂದು ಮಹತ್ವದ ಪಂದ್ಯ

* ಟೂರ್ನಿಯಲ್ಲಿ ಹ್ಯಾಟ್ರಿಕ್ ಸೋಲು ಕಂಡಿರುವ ಬಾಂಗ್ಲಾದೇಶ

ICC T20 World Cup South Africa Won the toss and Elected to Bowl first against Bangladesh in Abu Dhabi kvn
Author
Bengaluru, First Published Nov 2, 2021, 3:11 PM IST

ಅಬುಧಾಬಿ(ನ.01): ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ (ICC T20 World Cup) ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಬೌಲಿಂಗ್‌ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಬಾಂಗ್ಲಾದೇಶ ಮೊದಲು ಬ್ಯಾಟಿಂಗ್ ಮಾಡಲಿಳಿಯಲಿದೆ

ಈ ಪಂದ್ಯಕ್ಕೆ ಅಬುಧಾಬಿಯ (Abu Dhabi) ಶೇಕ್ ಜಾಯೆದ್ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಬಾಂಗ್ಲಾದೇಶ ಕ್ರಿಕೆಟ್ ತಂಡದ (Bangladesh Cricket Team) ಸ್ಟಾರ್ ಆಲ್ರೌಂಡರ್ ಶಕೀಬ್ ಅಲ್ ಹಸನ್ (Shakib Al Hasan) ಗಾಯದ ಸಮಸ್ಯೆಯಿಂದಾಗಿ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಬದಲಿಗೆ ಶಮೀಮ್ ಹೊಸೈನ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಮುಷ್ತಾಫಿಜುರ್ ರೆಹಮಾನ್‌ಗೆ (Mustafizur Rahman) ವಿಶ್ರಾಂತಿ ನೀಡಲಾಗಿದೆ.

Yuvraj Singh Comeback ನಿವೃತ್ತಿ ವಾಪಾಸ್ ಪಡೆದು ಮೈದಾನಕ್ಕಿಳಿಯುವುದಾಗಿ ಘೋಷಿಸಿದ ಸಿಕ್ಸರ್‌ ಕಿಂಗ್ ಯುವರಾಜ್ ಸಿಂಗ್..!

ತೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡದ ಪಾಲಿಗೆ ಸೆಮೀಸ್ ಪ್ರವೇಶಿಸುವ ದೃಷ್ಠಿಯಿಂದ ಈ ಪಂದ್ಯ ಸಾಕಷ್ಟು ಮಹತ್ವ ಪಡೆದಿದೆ. ಸದ್ಯ ದಕ್ಷಿಣ ಆಫ್ರಿಕಾ ತಂಡವು 3 ಪಂದ್ಯಗಳನ್ನಾಡಿ 2 ಗೆಲುವು ಹಾಗೂ 1 ಸೋಲಿನೊಂದಿಗೆ 4 ಅಂಕಗಳ ಸಹಿತ ಗ್ರೂಪ್ 2 ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಮತ್ತೊಮ್ಮೆ ದೊಡ್ಡ ಅಂತರದ ಗೆಲುವು ದಾಖಲಿಸಿದರೆ ಸೆಮೀಸ್‌ ಹಾದಿ ಮತ್ತಷ್ಟು ಸುಗಮವಾಗಲಿದೆ

ಇನ್ನೊಂದೆಡೆ ಮೊಹದುಲ್ಲಾ ನೇತೃತ್ವದ ಬಾಂಗ್ಲಾದೇಶ ಕ್ರಿಕೆಟ್ ತಂಡವು ಆಡಿದ ಮೂರು ಪಂದ್ಯಗಳಲ್ಲೂ ಆಘಾತಕಾರಿ ಸೋಲು ಕಂಡಿದ್ದು, ಪ್ರತಿಷ್ಟೆಯ ಕದನಕ್ಕೆ ಸಜ್ಜಾಗಿದೆ. ಮುಷ್ತಾಫಿಜುರ್ ರೆಹಮಾನ್ ಹಾಗೂ ಶಕೀಬ್ ಅಲ್ ಹಸನ್ ಅನುಪಸ್ಥಿತಿ ತಂಡವನ್ನು ಕಾಡುವ ಸಾಧ್ಯತೆಯಿದೆ

ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಸೂಪರ್ 12 ಹಂತದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ದ 5 ವಿಕೆಟ್‌ಗಳ ಅಂತರದ ಸೋಲು ಅನುಭವಿಸಿತ್ತು. ಇದಾದ ಬಳಿಕ ದಕ್ಷಿಣ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ದ 8 ವಿಕೆಟ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತ್ತು. ಇನ್ನು ಶ್ರೀಲಂಕಾ ವಿರುದ್ದ ಶಾರ್ಜಾ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಡೇವಿಡ್ ಮಿಲ್ಲರ್ ಕೊನೆಯ ಓವರ್‌ನಲ್ಲಿ ಎರಡು ಸಿಕ್ಸರ್ ಸಿಡಿಸುವ ಮೂಲಕ ಹರಿಣಗಳ ತಂಡಕ್ಕೆ ರೋಚಕ ಗೆಲುವು ತಂದಿಟ್ಟಿದ್ದರು.

T20 World Cup: ದಕ್ಷಿಣ ಆಫ್ರಿಕಾಕ್ಕೆ ಸೆಮೀಸ್‌ ರೇಸಲ್ಲಿ ಉಳಿವ ಗುರಿ!

ಇನ್ನೊಂದೆಡೆ ಅರ್ಹತಾ ಸುತ್ತಿನಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸೂಪರ್ 12 ಹಂತಕ್ಕೆ ಲಗ್ಗೆಯಿಟ್ಟಿದ್ದ ಬಾಂಗ್ಲಾದೇಶ ತಂಡವು ಮಹತ್ವದ ಘಟ್ಟದಲ್ಲಿ ನಿರೀಕ್ಷಿತ ಪ್ರದರ್ಶನ ತೋರಲು ವಿಫಲವಾಗಿದೆ. ಶ್ರೀಲಂಕಾ ವಿರುದ್ದ ಬಾಂಗ್ಲಾದೇಶ ತಂಡವು 5 ವಿಕೆಟ್‌ಗಳ ಅಂತರದ ಸೋಲು ಕಂಡರೆ, ಬಲಿಷ್ಠ ಇಂಗ್ಲೆಂಡ್ ವಿರುದ್ದ 8 ವಿಕೆಟ್‌ಗಳ ಹೀನಾಯ ಸೋಲು ಅನುಭಸಿತ್ತು. ಇನ್ನು ವೆಸ್ಟ್ ಇಂಡೀಸ್ ವಿರುದ್ದ ಸಹಾ 3 ರನ್‌ಗಳ ರೋಚಕ ಸೋಲು ಕಾಣುವ ಮೂಲಕ ಹ್ಯಾಟ್ರಿಕ್ ಸೋಲು ಅನುಭವಿಸಿದೆ.

ತಂಡಗಳು ಹೀಗಿವೆ

ಬಾಂಗ್ಲಾದೇಶ ಕ್ರಿಕೆಟ್ ತಂಡ :
ಮೊಹಮ್ಮದ್ ನಯೀಮ್, ಲಿಟನ್ ದಾಸ್ (ವಿಕೆಟ್ ಕೀಪರ್), ಸೌಮ್ಯ ಸರ್ಕಾರ್, ಮುಷ್ಫಿಕುರ್ ರಹೀಮ್, ಮೊಹಮದುಲ್ಲಾ(ನಾಯಕ), ಅಫೀಫ್ ಹುಸೈನ್, ಮೆಹದಿ ಹಸನ್, ನಸುಮ್ ಅಹಮ್ಮದ್, ಶೌರಿಫುಲ್ಲಾ ಇಸ್ಲಾಂ

ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡ:
ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ತೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡರ್‌ ಡುಸೇನ್, ಏಯ್ಡನ್ ಮಾರ್ಕ್‌ರಮ್‌, ಡೇವಿಡ್‌ ಮಿಲ್ಲರ್, ಡ್ವೇನ್ ಪ್ರಿಟೋರಿಯಸ್‌, ಕಗಿಸೋ ರಬಾಡ, ಕೇಶವ್ ಮಹರಾಜ್, ಏನ್ರಿಚ್ ನೊಕಿಯೆ, ತಬ್ರೀಜ್ ಸಂಶಿ

Follow Us:
Download App:
  • android
  • ios