Asianet Suvarna News Asianet Suvarna News

ICC T20 ರ‍್ಯಾಂಕಿಂಗ್: ಇಂಗ್ಲೆಂಡ್ ಮಣಿಸಿ ಅಗ್ರಸ್ಥಾನಕ್ಕೇರಿದ ಆಸೀಸ್..!

ಆಸ್ಟ್ರೇಲಿಯಾ-ಇಂಗ್ಲೆಂಡ್ ನಡುವಿನ ಟಿ20 ಸರಣಿ ಮುಕ್ತಾಯವಾದ ಬೆನ್ನಲ್ಲೇ ಐಸಿಸಿ ನೂತನ ಟಿ20 ಶ್ರೇಯಾಂಕ ಪ್ರಕಟಗೊಂಡಿದ್ದು, ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಆಸ್ಟ್ರೇಲಿಯಾ ಮೊದಲ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ  

ICC T20I Rankings Australia Push England to 2nd spot after final match 5 victory
Author
Dubai - United Arab Emirates, First Published Sep 9, 2020, 2:26 PM IST

ದುಬೈ(ಸೆ.09): ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯವನ್ನು ಆಸ್ಟ್ರೇಲಿಯಾ ತಂಡ 5  ವಿಕೆಟ್‌ಗಳಿಂದ ಜಯ ಸಾಧಿಸಿದೆ. ಇದರೊಂದಿಗೆ ವೈಟ್‌ವಾಷ್ ಮುಖಭಂಗದಿಂದ ಫಿಂಚ್ ಪಡೆ ಪಾರಾಗಿದೆ. ಇದರ ಬೆನ್ನಲ್ಲೇ ಐಸಿಸಿ ನೂತನ ಟಿ20 ರ‍್ಯಾಂಕಿಂಗ್ ಪ್ರಕಟಗೊಂಡಿದ್ದು, ಇಂಗ್ಲೆಂಡ್ ತಂಡವನ್ನು ಹಿಂದಿಕ್ಕಿ ಆಸ್ಟ್ರೇಲಿಯಾ ಅಗ್ರಸ್ಥಾನಕ್ಕೇರಿದೆ.

ಮೊದಲೆರಡು ಟಿ20 ಪಂದ್ಯಗಳನ್ನು ರೋಚಕವಾಗಿ ಗೆಲ್ಲುವುದರ ಮೂಲಕ ಸರಣಿ ಕೈವಶ ಮಾಡಿಕೊಳ್ಳುವುದರ ಜತೆಗೆ ಟಿ20 ಶ್ರೇಯಾಂಕದಲ್ಲಿ ಅಗ್ರಸ್ಥಾನವನ್ನು ಮತ್ತಷ್ಟು ಭದ್ರಪಡಿಸಿಕೊಂಡಿತ್ತು. ಆದರೆ ಕೊನೆಯ ಪಂದ್ಯದಲ್ಲಿ ಮುಗ್ಗರಿಸುವ ಮೂಲಕ ನಂ.1 ಸ್ಥಾನದಿಂದ ಇಂಗ್ಲೆಂಡ್ ಕೆಳಗಿಳಿದಿದೆ. ಇದೀಗ 275 ರೇಟಿಂಗ್ ಅಂಕಗಳೊಂದಿಗೆ ಆಸ್ಟ್ರೇಲಿಯಾ ಮೊದಲ ಸ್ಥಾನ ಅಲಂಕರಿಸಿದೆ. 

ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದರೆ, 271 ಅಂಕಗಳೊಂದಿಗೆ ಇಂಗ್ಲೆಂಡ್ ಎರಡನೇ ಹಾಗೂ 266 ಅಂಕಗಳೊಂದಿಗೆ ಭಾರತ ಮೂರನೇ ಸ್ಥಾನದಲ್ಲಿದೆ. ಇನ್ನುಳಿದಂತೆ ಪಾಕಿಸ್ತಾನ, ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ, ವೆಸ್ಟ್ ಇಂಡೀಸ್ ಹಾಗೂ ಆಫ್ಘಾನಿಸ್ತಾನ ತಂಡಗಳು ಕ್ರಮವಾಗಿ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿವೆ. 

ಇವರೇ ನೋಡಿ, ಆರೆಂಜ್ ಕ್ಯಾಪ್‌ ಗೆದ್ದ 12 ಸ್ಫೋಟಕ ಬ್ಯಾಟ್ಸ್‌ಮನ್‌ಗಳು..!

ಇಂಗ್ಲೆಂಡ್ ವಿರುದ್ಧ ಸರಣಿ ಸೋತರೂ ಆಸ್ಟ್ರೇಲಿಯಾ ಕೊನೆಯ ಪಂದ್ಯವನ್ನು ಗೆದ್ದು ನಂ.1 ಸ್ಥಾನಕ್ಕೇರಿ ತೃಪ್ತಿಪಟ್ಟುಕೊಳ್ಳುವಂತಹ ಸಾಧನೆ ಮಾಡಿದೆ.

ಟಿ20 ತಂಡಗಳ ಶ್ರೇಯಾಂಕ:

 
 
 
 
 
 
 
 
 
 
 
 
 

🥇 Australia are back on 🔝 🎆

A post shared by ICC (@icc) on Sep 8, 2020 at 3:30pm PDT

Follow Us:
Download App:
  • android
  • ios