ಐಸಿಸಿ ನೂತನವಾಗಿ ಟೆಸ್ಟ್ ಶ್ರೇಯಾಂಕವನ್ನು ಪ್ರಕಟಿಸಿದ್ದು, ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟ್ಸ್‌ಮನ್ ಚೇತೇಶ್ವರ್ ಪೂಜಾರ 6ನೇ ಸ್ಥಾನಕ್ಕೇರಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ದುಬೈ(ಜ.31): ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ಶನಿವಾರ ನೂತನವಾಗಿ ಬಿಡುಗಡೆಯಾದ ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದಿದ್ದಾರೆ. ಇನ್ನು ಟೆಸ್ಟ್ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ 6ನೇ ಸ್ಥಾನಕ್ಕೇರಿದ್ದಾರೆ.

ಭಾರತೀಯ ಬ್ಯಾಟ್ಸ್‌ಮನ್‌ಗಳ ಪೈಕಿ ಕೊಹ್ಲಿ ಉನ್ನತ ಸ್ಥಾನ ಹೊಂದಿದ್ದಾರೆ. ಭರವಸೆ ಬ್ಯಾಟ್ಸ್‌ಮನ್‌ ಚೇತೇಶ್ವರ್‌ ಪೂಜಾರ 6ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಕೊಹ್ಲಿ (862), ಪೂಜಾರ (760) ರೇಟಿಂಗ್‌ ಹೊಂದಿದ್ದಾರೆ. ಉಪ ನಾಯಕ ಅಜಿಂಕ್ಯ ರಹಾನೆ (748) ರೇಟಿಂಗ್‌ ಪಡೆದಿದ್ದು 8ನೇ ಸ್ಥಾನದಲ್ಲಿದ್ದಾರೆ. ಅಗ್ರ 10ರ ಪೈಕಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ಬ್ಯಾಟ್ಸ್‌ಮನ್‌ಗಳ ಟಾಪ್ 5 ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ನ್ಯೂಜಿಲೆಂಡ್‌ ನಾಯಕ ಕೇನ್‌ ವಿಲಿಯಮ್ಸನ್ ಮೊದಲ ಸ್ಥಾನದಲ್ಲಿದ್ದರೆ, ಸ್ಟೀವ್‌ ಸ್ಮಿತ್, ಮಾರ್ನಸ್ ಲಬುಶೇನ್‌, ವಿರಾಟ್ ಕೊಹ್ಲಿ ಹಾಗೂ ಜೋ ರೂಟ್ ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿ ಭದ್ರವಾಗಿದ್ದಾರೆ.

Scroll to load tweet…

ಕರಾಚಿ ಟೆಸ್ಟ್: ದಕ್ಷಿಣ ಆಫ್ರಿಕಾ ವಿರುದ್ಧ ಪಾಕ್‌ಗೆ 7 ವಿಕೆಟ್‌ಗಳ ಭರ್ಜರಿ ಜಯ

ಇನ್ನು ಬೌಲಿಂಗ್‌ನಲ್ಲೂ ಸಹಾ ವಿಭಾಗದಲ್ಲಿ ಸಹ ಯಾವುದೇ ಬದಲಾವಣೆಗಳಾಗಿಲ್ಲ. ಪ್ಯಾಟ್‌ ಕಮಿನ್ಸ್‌ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, ಸ್ಟುವರ್ಟ್ ಬ್ರಾಡ್‌, ನೀಲ್‌ ವ್ಯಾಗ್ನರ್, ಜೋಸ್‌ ಹೇಜಲ್‌ವುಡ್‌ ಹಾಗೂ ಟಿಮ್ ಸೌಥಿ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಬೌಲಿಂಗ್‌ ವಿಭಾಗದಲ್ಲಿ ಆರ್‌. ಅಶ್ವಿನ್‌ 8ನೇ, ಬುಮ್ರಾ 9ನೇ ಸ್ಥಾನ ಪಡೆದಿದ್ದಾರೆ.

Scroll to load tweet…