* ಐಸಿಸಿ ನೂತನ ಟೆಸ್ಟ್‌ ಶ್ರೇಯಾಂಕ ಪ್ರಕಟ* ಕೇನ್‌ ವಿಲಿಯಮ್ಸನ್‌ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಜೋ ರೂಟ್‌* ವಿರಾಟ್ ಕೊಹ್ಲಿ ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ ಜೋ ರೂಟ್‌

ದುಬೈ(ಸೆ.02): ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಇಂಗ್ಲೆಂಡ್‌ ನಾಯಕ ಜೋ ರೂಟ್‌ ನಂ.1 ಸ್ಥಾನಕ್ಕೇರಿದ್ದಾರೆ. ಭಾರತ ವಿರುದ್ಧ ಸರಣಿಯಲ್ಲಿ ರೂಟ್‌ 3 ಶತಕಗಳೊಂದಿಗೆ 500ಕ್ಕೂ ಹೆಚ್ಚು ರನ್‌ ಕಲೆಹಾಕಿದ್ದಾರೆ. ನ್ಯೂಜಿಲೆಂಡ್‌ ನಾಯಕ ಕೇನ್‌ ವಿಲಿಯಮ್ಸನ್‌ 2ನೇ ಸ್ಥಾನಕ್ಕಿಳಿದಿದ್ದಾರೆ. 

ಇನ್ನು ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್‌ಮನ್‌ ರೋಹಿತ್‌ ಶರ್ಮಾ, ಭಾರತದ ನಾಯಕ ವಿರಾಟ್‌ ಕೊಹ್ಲಿಯನ್ನು ಹಿಂದಿಕ್ಕಿ 5ನೇ ಸ್ಥಾನಕ್ಕೇರಿದ್ದಾರೆ. 2016ರ ಬಳಿಕ ವಿರಾಟ್ ಕೊಹ್ಲಿ ಟೆಸ್ಟ್ ಶ್ರೇಯಾಂಕದಲ್ಲಿ ಮೊದಲ ಬಾರಿಗೆ 6ನೇ ಸ್ಥಾನಕ್ಕೆ ಕುಸಿದಿದ್ದಾರೆ. ಬ್ಯಾಟ್ಸ್‌ಮನ್‌ಗಳ ವಿಭಾಗದಲ್ಲಿ ರೂಟ್‌ ಬಳಿಕ ಕೇನ್‌ ವಿಲಿಯಮ್ಸ್‌, ಸ್ಟೀವ್‌ ಸ್ಮಿತ್, ಮಾರ್ನಸ್‌ ಲಬುಶೇನ್‌ ಹಾಗೂ ರೋಹಿತ್ ಶರ್ಮಾ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Ind vs Eng ಓವಲ್‌ ಟೆಸ್ಟ್‌ನಲ್ಲಿ ಪುಟಿದೇಳುತ್ತಾ ಟೀಂ ಇಂಡಿಯಾ?

Scroll to load tweet…

ಬೌಲರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್‌ 2ನೇ ಸ್ಥಾನದಲ್ಲಿ ಮುಂದುವರಿದರೆ, ಜಸ್‌ಪ್ರೀತ್‌ ಬುಮ್ರಾ 10ನೇ ಸ್ಥಾನದಲ್ಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್‌ ಅಗ್ರಸ್ಥಾನದಲ್ಲೇ ಮುಂದುವರೆದಿದ್ದಾರೆ. ಇನ್ನುಳಿದಂತೆ ಅಶ್ವಿನ್‌, ಟಿಮ್ ಸೌಥಿ, ಜೋಸ್‌ ಹೇಜಲ್‌ವುಡ್‌ ಕ್ರಮವಾಗಿ ಟಾಪ್ 4 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಇನ್ನು ಇಂಗ್ಲೆಂಡ್ ಅನುಭವಿ ವೇಗಿ ಜೇಮ್ಸ್‌ ಆಂಡರ್‌ಸನ್‌ ಒಂದು ಸ್ಥಾನ ಜಿಗಿತ ಕಂಡು ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಆಲ್ರೌಂಡರ್‌ಗಳ ಪಟ್ಟಿಯಲ್ಲಿ ಅಶ್ವಿನ್‌ ಹಾಗೂ ಜಡೇಜಾ ಕ್ರಮವಾಗಿ 2 ಹಾಗೂ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ.