Asianet Suvarna News Asianet Suvarna News

ಟೆಸ್ಟ್ ರ‍್ಯಾಂಕಿಂಗ್‌: ಮೊದಲ ಬಾರಿಗೆ ಟಾಪ್‌ 10ನಲ್ಲಿ ಪಂತ್‌ಗೆ ಸ್ಥಾನ

ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕದಲ್ಲಿ ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಇದೇ ಮೊದಲ ಬಾರಿಗೆ ಟಾಪ್ 10 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ICC Test Rankings Team India Wicket keeper Batsman Rishabh Pant moves to 6th spot kvn
Author
Dubai - United Arab Emirates, First Published May 6, 2021, 9:14 AM IST

ದುಬೈ(ಮೇ.05): ಟೀಂ ಇಂಡಿಯಾ ವಿಕೆಟ್ ಕೀಪರ್‌ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಐಸಿಸಿ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಮೊದಲ ಬಾರಿಗೆ ಟಾಪ್ 10ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ಟಾಪ್‌ 10ನೊಳಗೆ ಸ್ಥಾನ ಪಡೆದ ಭಾರತದ ಮೊದಲ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಎನ್ನುವ ಶ್ರೇಯ ಪಂತ್ ಪಾಲಾಗಿದೆ.

ಇಂಗ್ಲೆಂಡ್ ವಿರುದ್ದ ತವರಿನಲ್ಲಿ ಮಾರ್ಚ್‌ನಲ್ಲಿ ನಡೆದ ಟೆಸ್ಟ್‌ನಲ್ಲಿ ಶತಕ ಬಾರಿಸುವ ಮೂಲಕ ಟೀಂ ಇಂಡಿಯಾ ಸರಣಿ ಗೆಲುವಿನಲ್ಲಿ ರಿಷಭ್ ಪಂತ್ ಪ್ರಮುಖ ಪಾತ್ರವಹಿಸಿದ್ದರು. ಇದರೊಂದಿಗೆ ಪಂತ್ ಇದೀಗ ತಮ್ಮ ವೃತ್ತಿಜೀವನದ ಶ್ರೇಷ್ಠ 6ನೇ ಸ್ಥಾನ ಪಡೆದಿದ್ದಾರೆ. ಇನ್ನುಳಿದಂತೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲೇ ಮುಂದುವರೆದಿದ್ದರೆ, ಹಿಟ್‌ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಒಂದು ಸ್ಥಾನ ಏರಿಕೆ ಕಂಡು ಪಂತ್ ಜತೆ ಜಂಟಿ 6ನೇ ಸ್ಥಾನ ಹಂಚಿಕೊಂಡಿದ್ದಾರೆ.

ಸೆಪ್ಟೆಂಬರ್ ತಿಂಗಳಲ್ಲಿ ಆಯೋಜನೆಯಾಗುತ್ತಾ ರದ್ದಾಗಿರುವ ಐಪಿಎಲ್ ಟೂರ್ನಿ?

ಇನ್ನುಳಿದಂತೆ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಮೊದಲ ಸ್ಥಾನದಲ್ಲೇ ಮುಂದುವರೆದಿದ್ದರೆ, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್ ಹಾಗೂ ಜೋ ರೂಟ್‌ ಕ್ರಮವಾಗಿ ಮೊದಲ 4ರ ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಪ್ಯಾಟ್ ಕಮಿನ್ಸ್‌ ಮೊದಲ ಸ್ಥಾನದಲ್ಲಿದ್ದರೆ, ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲಿದ್ದಾರೆ. ನೀಲ್ ವ್ಯಾಗ್ನರ್, ಆಂಡರ್‌ಸನ್ ಹಾಗೂ ಜೋಸ್ ಹೇಜಲ್‌ವುಡ್ ಟಾಪ್ 5 ಪಟ್ಟಿಯೊಳಗೆ ಸ್ಥಾನ ಪಡೆದಿದ್ದಾರೆ.
 

Follow Us:
Download App:
  • android
  • ios