Asianet Suvarna News Asianet Suvarna News

2020ರ ಮೊದಲ ಐಸಿಸಿ ಟೆಸ್ಟ್‌ ರ‍್ಯಾಂಕಿಂಗ್ ಪ್ರಕಟ

2020ರ ಮೊದಲ ಐಸಿಸಿ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಹಾಗೂ ಪ್ಯಾಟ್ ಕಮಿನ್ಸ್ ಬೌಲಿಂಗ್‌ನಲ್ಲಿ ನಂ.1 ಸ್ಥಾನ ಕಾಯ್ದುಕೊಂಡಿದ್ದಾರೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ...  

ICC Test Rankings Virat Kohli Pat Cummins retains top spot
Author
Dubai - United Arab Emirates, First Published Jan 9, 2020, 1:59 PM IST
  • Facebook
  • Twitter
  • Whatsapp

ದುಬೈ[ಜ.09]: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ, ಹೊಸ ವರ್ಷದಲ್ಲಿ ಪ್ರಕಟಗೊಂಡ ಐಸಿಸಿ ನೂತನ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ ಸ್ಥಾನ ಉಳಿಸಿಕೊಂಡಿದ್ದಾರೆ. 

ಐಸಿಸಿ ರ‍್ಯಾಂಕಿಂಗ್ ಪದ್ಧತಿ ಕಸದ ತೊಟ್ಟಿ: ವಾನ್‌

ಮೊದಲ ಸ್ಥಾನದಲ್ಲಿರುವ ಕೊಹ್ಲಿ 928 ರೇಟಿಂಗ್‌ ಅಂಕ ಹೊಂದಿದ್ದು, 2ನೇ ಸ್ಥಾನದಲ್ಲಿರುವ ಆಸ್ಪ್ರೇಲಿಯಾದ ಸ್ಟೀವ್‌ ಸ್ಮಿತ್‌ (911) ಜತೆ ಉತ್ತಮ ಅಂತರ ಕಾಯ್ದುಕೊಂಡಿದ್ದಾರೆ. ಚೇತೇಶ್ವರ್‌ ಪೂಜಾರ ಒಂದು ಸ್ಥಾನ ಕುಸಿದ ಕಂಡು 7ನೇ ಸ್ಥಾನ ಪಡೆದರೆ, ಅಜಿಂಕ್ಯ ರಹಾನೆ 2 ಸ್ಥಾನಗಳ ಕುಸಿದ ಕಂಡು 9ನೇ ಸ್ಥಾನದಲ್ಲಿದ್ದಾರೆ. ಆಸ್ಪ್ರೇಲಿಯಾದ ನೂತನ ರನ್‌ ಮಷಿನ್‌ ಎಂದೇ ಕರೆಸಿಕೊಳ್ಳುತ್ತಿರುವ ಮಾರ್ನಸ್‌ ಲಬುಶೇನ್‌ 3ನೇ ಸ್ಥಾನಕ್ಕೇರಿದ್ದಾರೆ.

ICC ಟೆಸ್ಟ್ ರ‍್ಯಾಂಕಿಂಗ್ ಪ್ರಕಟ; ಅಗ್ರಸ್ಥಾನ ಕಾಯ್ದುಕೊಂಡ ಕೊಹ್ಲಿ!

ಇನ್ನು ಬೌಲಿಂಗ್ ವಿಭಾಗದಲ್ಲಿ ಟಾಪ್ 10 ಪಟ್ಟಿಯಲ್ಲಿ ಮೂವರು ಭಾರತೀಯರು ಸ್ಥಾನ ಪಡೆದಿದ್ದಾರೆ. ಜಸ್ಪ್ರೀತ್ ಬುಮ್ರಾ 6ನೇ ಸ್ಥಾನದಲ್ಲಿದ್ದರೆ, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ ಕ್ರಮವಾಗಿ 9 ಹಾಗೂ 10ನೇ ಸ್ಥಾನದಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ ಮೊದಲ ಸ್ಥಾನದಲ್ಲಿದ್ದರೆ, ನೀಲ್ ವ್ಯಾಗ್ನರ್ ಹಾಗೂ ಜೇಸನ್ ಹೋಲ್ಡರ್ ಕ್ರಮವಾಗಿ ಟಾಪ್ 3 ಪಟ್ಟಿಯಲ್ಲಿ ಸ್ಥಾನದಲ್ಲಿದ್ದಾರೆ.  

Follow Us:
Download App:
  • android
  • ios