ಬ್ಲೂಮ್‌ಫಾಂಟೈನ್‌(ಜ.24): ಐಸಿಸಿ ಅಂಡರ್‌-19 ವಿಶ್ವಕಪ್‌ನಲ್ಲಿ ಈಗಾಗಲೇ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿರುವ ಭಾರತ ಹಾಗೂ ನ್ಯೂಜಿಲೆಂಡ್‌ ತಂಡಗಳು, ‘ಎ’ ಗುಂಪಿನಲ್ಲಿ ಅಗ್ರಸ್ಥಾನ ಪಡೆಯಲು ಪೈಪೋಟಿ ನಡೆಸಲಿವೆ. 

U19 ವಿಶ್ವಕಪ್: ಭಾರತದ ದಾಳಿಗೆ ಎದುರಾಳಿ 41 ರನ್‌ಗೆ ಆಲೌಟ್!

ಶ್ರೀಲಂಕಾ ವಿರುದ್ಧ ಮೊದಲ ಪಂದ್ಯದಲ್ಲಿ 90 ರನ್‌ಗಳಿಂದ ಗೆದ್ದಿದ್ದ ಭಾರತ, 2ನೇ ಪಂದ್ಯದಲ್ಲಿ ಜಪಾನ್‌ ತಂಡವನ್ನು 10 ವಿಕೆಟ್‌ಗಳಿಂದ ಬಗ್ಗುಬಡಿದಿತ್ತು. 2 ಪಂದ್ಯಗಳಿಂದ 4 ಅಂಕ ಗಳಿಸಿ ತಂಡ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. 

ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಅತಿದೊಡ್ಡ ಆಘಾತ..!

ಮತ್ತೊಂದೆಡೆ ಜಪಾನ್‌ ವಿರುದ್ಧದ ಪಂದ್ಯ ಮಳೆಯಿಂದ ರದ್ದಾದ ಕಾರಣ 1 ಅಂಕ ಪಡೆದಿದ್ದ ನ್ಯೂಜಿಲೆಂಡ್‌, 2ನೇ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿ, ಅಂತಿಮ 8ರಲ್ಲಿ ಸ್ಥಾನ ಖಚಿತಪಡಿಸಿಕೊಂಡಿತ್ತು. ಈ ಪಂದ್ಯವನ್ನು ಗೆದ್ದು ಅಜೇಯವಾಗಿ ಕ್ವಾರ್ಟರ್‌ ಫೈನಲ್‌ಗೆ ಕಾಲಿಡುವುದು ಹಾಲಿ ಚಾಂಪಿಯನ್‌ ಭಾರತದ ಗುರಿಯಾಗಿದೆ.

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್ 3