Asianet Suvarna News Asianet Suvarna News

ICC Womem's World Cup: ಪಾಕ್ ಎದುರು ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

* ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿ

* ಟಾಸ್ ಗೆದ್ದ ಭಾರತ ತಂಡದ ನಾಯಕಿ ಮಿಥಾಲಿ ರಾಜ್ ಬ್ಯಾಟಿಂಗ್ ಆಯ್ಕೆ

* ಪಾಕ್ ಎದುರು ಮತ್ತೊಮ್ಮೆ ಪ್ರಾಬಲ್ಯ ಮೆರೆಯಲು ಮುಂದಾದ ಭಾರತ

ICC Womems World Cup Mithali Raj led India won the toss and elected to bat first against Pakistan kvn
Author
Bengaluru, First Published Mar 6, 2022, 6:38 AM IST

ಮೌಂಟ್‌ ಮಾಂಗನುಯಿ(ಮಾ.06): ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಂದು (ICC Women's World Cup) ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ (India vs Pakistan) ತಂಡಗಳು ಎದುರಾಗಿದ್ದು, ಟಾಸ್ ಗೆದ್ದ ಭಾರತ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ (Mithali Raj) ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಇದೀಗ ಭಾರತ ತಂಡವು 2022ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ದ ತನ್ನ ಅಭಿಯಾನವನ್ನು ಆರಂಭಿಸಿದೆ.

ಇಲ್ಲಿನ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ತಂಡವು ಸಾಕಷ್ಟು ಪೂರ್ವ ತಯಾರಿಯೊಂದಿಗೆ ಕಣಕ್ಕಿಳಿದಿದೆ. ವಿಶ್ವಕಪ್ ಟೂರ್ನಿಗೂ ಮುನ್ನ ನಡೆದ ಎರಡು ಅಭ್ಯಾಸ ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿರುವ ಮಿಥಾಲಿ ರಾಜ್ ಪಡೆ, ಇದೀಗ ವಿಶ್ವಕಪ್ ಟೂರ್ನಿಯಲ್ಲೂ ಅಂತಹದ್ದೇ ಪ್ರದರ್ಶನ ತೋರಲು ಎದುರು ನೋಡುತ್ತಿದೆ. ಭಾರತ ತಂಡವು ಮೇಲ್ನೋಟಕ್ಕೆ ಸಾಕಷ್ಟು ಬಲಿಷ್ಠವಾಗಿಯೇ ಗುರುತಿಸಿಕೊಂಡಿದೆ. ಸ್ಮೃತಿ ಮಂಧನಾ ಹಾಗೂ ಶಫಾಲಿ ವರ್ಮಾ ಉತ್ತಮ ಆರಂಭ ಒದಗಿಸಿಕೊಡಲು ಎದುರು ನೋಡುತ್ತಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ದೀಪ್ತಿ ಶರ್ಮಾ, ಹರ್ಮನ್‌ಪ್ರೀತ್ ಕೌರ್, ಮಿಥಾಲಿ ರಾಜ್ ಹಾಗೂ ರಿಚಾ ಘೋಷ್ ಉತ್ತಮ ರನ್‌ ಕಾಣಿಕೆ ನೀಡಬಲ್ಲರು. ಆಲ್ರೌಂಡರ್ ವಿಭಾಗದಲ್ಲಿ ಸ್ನೆಹ್ ರಾಣಾ ಹಾಗೂ ಬೌಲಿಂಗ್ ವಿಭಾಗದಲ್ಲಿ ಜೂಲನ್ ಗೋಸ್ವಾಮಿ, ಮೆಘನಾ ಸಿಂಗ್, ಪೂಜಾ ವಸ್ತ್ರಾಕರ್ ಹಾಗೂ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಪಾಕ್ ಬ್ಯಾಟರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.

ICC Women's World Cup‌: ಸೂಪರ್‌ ಸಂಡೆಯಲ್ಲಿ ಭಾರತ-ಪಾಕ್‌ ಸೆಣಸಾಟ

ಏಕದಿನದಲ್ಲಿ ಉಭಯ ತಂಡಗಳು ಈವರೆಗೆ 10 ಬಾರಿ ಮುಖಾಮುಖಿಯಾಗಿದ್ದು, ಎಲ್ಲಾ 10 ಪಂದ್ಯಗಳಲ್ಲೂ ಭಾರತ ಗೆಲುವು ಸಾಧಿಸಿದೆ. 2009, 2017ರ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಗೆದ್ದಿರುವ ಭಾರತ ಅಜೇಯ ಓಟ ಮುಂದುವರಿಸುವ ತವಕದಲ್ಲಿದೆ. ಟೂರ್ನಿಯ ಬಲಿಷ್ಠ ತಂಡಗಳಲ್ಲಿ ಒಂದು ಎನಿಸಿರುವ ಮಿಥಾಲಿ ರಾಜ್ ಪಡೆ ಟೂರ್ನಿಯಲ್ಲಿ ಶುಭಾರಂಭ ಮಾಡಲು ಎದುರು ನೋಡುತ್ತಿದೆ. 

ತಂಡಗಳು ಹೀಗಿವೆ ನೋಡಿ

ಭಾರತ ಮಹಿಳಾ ಕ್ರಿಕೆಟ್ ತಂಡ:
ಸ್ಮೃತಿ ಮಂಧನಾ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಹರ್ಮನ್‌ಪ್ರೀತ್ ಕೌರ್, ಮಿಥಾಲಿ ರಾಜ್(ನಾಯಕಿ), ರಿಚಾ ಘೋಷ್(ವಿಕೆಟ್ ಕೀಪರ್), ಸ್ನೆಹ್ ರಾಣಾ, ಜೂಲನ್ ಗೋಸ್ವಾಮಿ, ಪೂಜಾ ವಸ್ತ್ರಾಕರ್, ರಾಜೇಶ್ವರಿ ಗಾಯಕ್ವಾಡ್.

ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡ:
ಜಾವೆರಿಯಾ ಖಾನ್, ಸಿದ್ರಾ ಅಮೀನ್, ಬಿಸ್ಮತ್ ಮಹರೂಪ್(ನಾಯಕಿ), ಓಮೈಮಾ ಸೋಹಿಲ್, ನಿಧಾ ದಾರ್, ಆಲಿಯಾ ರಿಯಾಜ್, ಫಾತಿಮಾ ಸನಾ, ಸಿದ್ರಾ ನವಾಜ್(ವಿಕೆಟ್ ಕೀಪರ್), ಡಯಾನಾ ಬೇಗ್, ನಾಸ್ರಾ ಸಂಧು, ಆನಮ್ ಆಮಿನ್

2022ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವೇಳಾಪಟ್ಟಿ ಹೀಗಿದೆ ನೋಡಿ

ಭಾರತ vs ಪಾಕಿಸ್ತಾನ – 6ನೇ ಮಾರ್ಚ್‌ – 6:30 am  

ಭಾರತ vs ನ್ಯೂಜಿಲೆಂಡ್ – 10ನೇ ಮಾರ್ಚ್‌ – 6:30 am  

ಭಾರತ vs ವೆಸ್ಟ್ ಇಂಡೀಸ್ – 12ನೇ ಮಾರ್ಚ್ – 6:30 am 

ಭಾರತ vs ಇಂಗ್ಲೆಂಡ್ – 16ನೇ ಮಾರ್ಚ್‌ – 6:30 am

ಭಾರತ vs ಆಸ್ಟ್ರೇಲಿಯಾ – 19ನೇ ಮಾರ್ಚ್‌ – 6:30 am 

ಭಾರತ vs ಬಾಂಗ್ಲಾದೇಶ – 22ನೇ ಮಾರ್ಚ್‌ – 6:30 am 

ಭಾರತ vs ದಕ್ಷಿಣ ಆಫ್ರಿಕಾ – 27ನೇ ಮಾರ್ಚ್‌ – 6:30 am 
 

Follow Us:
Download App:
  • android
  • ios