ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ 'ಬಿ' ಗುಂಪಿನಿಂದ ದಕ್ಷಿಣ ಆಫ್ರಿಕಾ ಹಾಗೂ ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಪ್ರವೇಶಿಸಿದೆ. ಈ ಕುರಿತಾದ ವಿವರ ಇಲ್ಲಿದೆ ನೋಡಿ.

ಸಿಡ್ನಿ(ಫೆ.02): ಐಸಿಸಿ ಮಹಿಳಾ ಟಿ20 ವಿಶ್ವಕಪ್‌ ಸೆಮಿಫೈನಲ್‌ಗೆ ‘ಬಿ’ ಗುಂಪಿನಿಂದ ಇಂಗ್ಲೆಂಡ್‌ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಪ್ರವೇಶ ಪಡೆದಿವೆ. 

Scroll to load tweet…

ಭಾನುವಾರ ನಡೆದ ವೆಸ್ಟ್‌ಇಂಡೀಸ್‌ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್‌ 46 ರನ್‌ಗಳ ಗೆಲುವು ಸಾಧಿಸಿ, ‘ಬಿ’ ಗುಂಪಿನಲ್ಲಿ ಅಗ್ರಸ್ಥಾನಕ್ಕೇರಿತು. ಇಂಗ್ಲೆಂಡ್‌ 5 ವಿಕೆಟ್‌ಗೆ 143 ರನ್‌ ಗಳಿಸಿದರೆ, ವಿಂಡೀಸ್‌ 17.1 ಓವರಲ್ಲಿ 97 ರನ್‌ಗೆ ಆಲೌಟ್‌ ಆಯಿತು. ಪಾಕಿಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ದ.ಆಫ್ರಿಕಾ 17 ರನ್‌ಗಳಿಂದ ಜಯಿಸಿತು. ದ.ಆಫ್ರಿಕಾ 6 ವಿಕೆಟ್‌ಗೆ 136 ರನ್‌ ಕಲೆಹಾಕಿತ್ತು. ಪಾಕಿಸ್ತಾನ 5 ವಿಕೆಟ್‌ಗೆ 119 ರನ್‌ ಗಳಿಸಲಷ್ಟೇ ಶಕ್ತವಾಯಿತು. ಸತತ 3 ಗೆಲುವು ಸಾಧಿಸಿರುವ ದ.ಆಫ್ರಿಕಾಕ್ಕೆ ಇನ್ನೊಂದು ಪಂದ್ಯ ಬಾಕಿ ಇದ್ದು, ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಅಪ್ಪ ತರಕಾರಿ ವ್ಯಾಪಾರಿ, ಮಗಳು ಭಾರತ ಕ್ರಿಕೆಟ್ ತಂಡದ ವೀರ ನಾರಿ!

Scroll to load tweet…

ಸೋಮವಾರ ಆಸ್ಪ್ರೇಲಿಯಾ, ನ್ಯೂಜಿಲೆಂಡ್‌ ತಂಡಗಳು ಮುಖಾಮುಖಿಯಾಗಲಿದ್ದು ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ ಪ್ರವೇಶಿಸಲಿದೆ. ಇದೀಗ ನ್ಯೂಜಿಲೆಂಡ್ ತಂಡ ಟಾಸ್ ಗೆದ್ದು ಆಸ್ಟ್ರೇಲಿಯಾವನ್ನು ಫೀಲ್ಡಿಂಗ್ ಮಾಡಲು ಆಹ್ವಾನಿಸಿದೆ. ‘ಎ’ ಗುಂಪಿನಲ್ಲಿ ಭಾರತ ಅಗ್ರಸ್ಥಾನ ಖಚಿತಪಡಿಸಿಕೊಂಡಿದ್ದು, ‘ಬಿ’ ಗುಂಪಿನಲ್ಲಿ 2ನೇ ಸ್ಥಾನ ಪಡೆಯುವ ತಂಡದ ವಿರುದ್ಧ ಸೆಮೀಸ್‌ನಲ್ಲಿ ಸೆಣಸಲಿದೆ.