World Cup Final ಸೂರ್ಯನ ಬಗ್ಗೆ ಭವಿಷ್ಯ ನುಡಿದು ಟ್ರೋಲ್ ಆದ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್..!
ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, ಆರಂಭಿಕ ಆಘಾತ ಅನುಭವಿಸಿತು. ಹೀಗಿದ್ದೂ, ಮಾಜಿ ನಾಯಕ ವಿರಾಟ್ ಕೊಹ್ಲಿ(54) ಹಾಗೂ ಕೆ ಎಲ್ ರಾಹುಲ್(66) ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಆದರೆ ರವೀಂದ್ರ ಜಡೇಜಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಸೂರ್ಯಕುಮಾರ್ ಯಾದವ್ ಅವರ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು.
ಅಹಮದಾಬಾದ್(ನ.19): 2023ರ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಗಾಗಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಕಾದಾಡುತ್ತಿವೆ. ಹೀಗಿರುವಾಗಲೇ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಅವರು ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಅವರ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಭವಿಷ್ಯ ನುಡಿದು ಟ್ರೋಲ್ ಆಗಿದ್ದಾರೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದಲ್ಲಿ ಉಭಯ ತಂಡಗಳ ನಡುವೆ ಜಿದ್ದಾಜಿದ್ದಿನ ಪೈಪೋಟಿ ಏರ್ಪಟ್ಟಿದ್ದೆ. ಹೀಗಿರುವಾಗಲೇ ಸಂಖ್ಯಾಶಾಸ್ತ್ರಜ್ಷ ಆರ್ಯವರ್ಧನ್ ಅವರು ತಮ್ಮ Aryatalkನಲ್ಲಿ ಹಾಕಿದ ಪೋಸ್ಟ್ ಅನ್ನು ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡಲಾರಂಭಿಸಿದ್ದಾರೆ.
ಹೌದು, ಟಾಸ್ ಸೋತು ಬ್ಯಾಟಿಂಗ್ ಮಾಡಲಿಳಿದ ಟೀಂ ಇಂಡಿಯಾ, ಆರಂಭಿಕ ಆಘಾತ ಅನುಭವಿಸಿತು. ಹೀಗಿದ್ದೂ, ಮಾಜಿ ನಾಯಕ ವಿರಾಟ್ ಕೊಹ್ಲಿ(54) ಹಾಗೂ ಕೆ ಎಲ್ ರಾಹುಲ್(66) ಸಮಯೋಚಿತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಆದರೆ ರವೀಂದ್ರ ಜಡೇಜಾ ವಿಕೆಟ್ ಪತನದ ಬಳಿಕ ಕ್ರೀಸ್‌ಗಿಳಿದ ಸೂರ್ಯಕುಮಾರ್ ಯಾದವ್ ಅವರ ಮೇಲೆ ಸಾಕಷ್ಟು ನಿರೀಕ್ಷೆಯಿತ್ತು. ಸೂರ್ಯಕುಮಾರ್ ಯಾದವ್ ಕೊಂಚ ರಕ್ಷಣಾತ್ಮಕ ಆಟಕ್ಕೆ ಮೊರೆ ಹೋದರು. ಈ ಸಂದರ್ಭದಲ್ಲಿ ಆರ್ಯವರ್ಧನ್ ತಮ್ಮ Aryatalkನಲ್ಲಿ "ಭಾರತ ತಂಡದ ಗೆಲುವಿನಲ್ಲಿ ಪ್ರಮುಖಪಾತ್ರ ವಹಿಸಲಿದ್ದಾರೆ ಸೂರ್ಯ ಕುಮಾರ್ ಯಾದವ್ ಇಂದಿನ ಪಂದ್ಯದಲ್ಲಿ ಉತ್ತಮ ಆಟವನ್ನು ಆಡಲಿದ್ದಾರೆ" ಎಂದು ಭವಿಷ್ಯ ನುಡಿದಿದ್ದರು.
ಆಸೀಸ್ ನೀವೂ ಚೆನ್ನಾಗಿ ಆಡಿ, ಆದ್ರೆ, 239 ಇದಕ್ಕಿಂತ ಜಾಸ್ತಿ ರನ್ ಮಾಡ್ಬೇಡಿ!
ಆದರೆ ಸೂರ್ಯಕುಮಾರ್ ಯಾದವ್ ಕಮಾಲ್ ಮಾಡಲು ಸಾಧ್ಯವಾಗಲಿಲ್ಲ. 28 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ ಯಾದವ್ ಕೇವಲ ಒಂದು ಬೌಂಡರಿ ಸಹಿತ 18 ರನ್ ಬಾರಿಸಿ ವಿಕೆಟ್ ಒಪ್ಪಿಸುವ ಮೂಲಕ ನಿರಾಸೆ ಅನುಭವಿಸಿದರು. ಇದರ ಬೆನ್ನಲ್ಲೇ ನೆಟ್ಟಿಗರು ಆರ್ಯವರ್ಧನ್ ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ.
INDvAUS ಫೈನಲ್‌ನಲ್ಲಿ ಭಾರತದ ಬ್ಯಾಟಿಂಗ್‌ಗೆ ಜಯ್ ಶಾ, ಸೂರ್ಯಕುಮಾರ್ ಟ್ರೋಲ್!
ರೋಚಕಘಟ್ಟದತ್ತ ವಿಶ್ವಕಪ್ ಫೈನಲ್: ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ, ಆಸೀಸ್ ಬೌಲರ್‌ಗಳ ಸಂಘಟಿತ ದಾಳಿಗೆ ತತ್ತರಿಸಿ 240 ರನ್‌ಗಳಿಗೆ ಸರ್ವಪತನ ಕಂಡಿದೆ. 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿಯೇ ಫೈನಲ್‌ಗೆ ಲಗ್ಗೆಯಿಟ್ಟಿರುವ ಟೀಂ ಇಂಡಿಯಾ, ಇದೇ ಮೊದಲ ಬಾರಿಗೆ ಈ ವಿಶ್ವಕಪ್ ಟೂರ್ನಿಯಲ್ಲಿ ಆಲೌಟ್ ಆಗಿದೆ. ಇನ್ನು ಗುರಿ ಬೆನ್ನತ್ತಿರುವ ಆಸ್ಟ್ರೇಲಿಯಾ ಕೂಡಾ ಆರಂಭಿಕ ಆಘಾತ ಅನುಭವಿಸಿದೆ. ಮೊದಲ 15 ಓವರ್ ಅಂತ್ಯದ ವೇಳೆಗೆ ಆಸ್ಟ್ರೇಲಿಯಾ ತಂಡವು ಅಗ್ರಕ್ರಮಾಂಕದ 3 ವಿಕೆಟ್ ಕಳೆದುಕೊಂಡು