ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಚೆಪಾಕ್ ಮೈದಾನ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡವು ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದೆ. ವಿಶ್ವಕಪ್ ಆರಂಭಕ್ಕೆ ಕೆಲವೇ ದಿನ ಮುನ್ನ ಡೆಂಘಿ ಜ್ವರಕ್ಕೆ ತುತ್ತಾಗಿದ್ದು, ಆಸೀಸ್ ಎದುರಿನ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಚೆನ್ನೈ(ಅ.08): 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆತಿಥೇಯ ಟೀಂ ಇಂಡಿಯಾ ಇಂದು ಅಭಿಯಾನ ಆರಂಭಿಸಿದೆ. ಇದೀಗ ಭಾರತಕ್ಕೆ 5 ಬಾರಿಯ ಆಸ್ಟ್ರೇಲಿಯಾ ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಚೆಪಾಕ್ ಮೈದಾನ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡವು ಶುಭ್‌ಮನ್ ಗಿಲ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿದಿದೆ. ವಿಶ್ವಕಪ್ ಆರಂಭಕ್ಕೆ ಕೆಲವೇ ದಿನ ಮುನ್ನ ಡೆಂಘಿ ಜ್ವರಕ್ಕೆ ತುತ್ತಾಗಿದ್ದು, ಆಸೀಸ್ ಎದುರಿನ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ನಾಯಕ ರೋಹಿತ್ ಶರ್ಮಾ ಜತೆ ಇಶಾನ್ ಕಿಶನ್ ಇನಿಂಗ್ಸ್‌ ಆರಂಭಿಸಲಿದ್ದಾರೆ.

ICC World Cup 2023 ಇಂದು ಭಾರತ vs ಆಸ್ಟ್ರೇಲಿಯಾ ಹೈವೋಲ್ಟೇಜ್ ಕದನ..!

Scroll to load tweet…

ಭಾರತ ತಂಡವು 5 ತಜ್ಞ ಬ್ಯಾಟರ್‌, ಎರಡು ಆಲ್ರೌಂಡರ್, ಇಬ್ಬರು ವೇಗಿಗಳು ಹಾಗೂ ಇಬ್ಬರು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕಿಳಿದಿದ್ದು, ಆಸ್ಟ್ರೇಲಿಯಾ ಬ್ಯಾಟರ್‌ಗಳನ್ನು ಕಟ್ಟಿಹಾಕಲು ಎದುರು ನೋಡುತ್ತಿದೆ. ಇನ್ನು ಆಸ್ಟ್ರೇಲಿಯಾ ತಂಡವು ಮೇಲ್ನೋಟಕ್ಕೆ ಬಲಾಢ್ಯವಾಗಿಯೇ ಗುರುತಿಸಿಕೊಂಡಿದೆ. ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್ ಬ್ಯಾಟಿಂಗ್‌ನಲ್ಲಿ ದೊಡ್ಡ ಮೊತ್ತ ಕಲೆಹಾಕುವ ವಿಶ್ವಾಸದಲ್ಲಿದ್ದಾರೆ. ಇನ್ನು ಆಲ್ರೌಂಡರ್‌ಗಳಾದ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ವೇಗಿಗಳಾದ ಮಿಚೆಲ್ ಸ್ಟಾರ್ಕ್ ಹಾಗೂ ಜೋಶ್ ಹೇಜಲ್‌ವುಡ್‌ ಮಾರಕ ದಾಳಿ ನಡೆಸಲು ಸಜ್ಜಾಗಿದ್ದು, ಕ್ರಿಕೆಟ್ ಅಭಿಮಾನಿಗಳಿಗೆ ಭರಪೂರ ಮನರಂಜನೆ ಸಿಗುವ ಸಾಧ್ಯತೆಯಿದೆ.

ಉಭಯ ತಂಡಗಳ ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಇಶಾನ್ ಕಿಶನ್‌, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್‌, ಕುಲ್ದೀಪ್‌ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್‌, ಮಿಚೆಲ್ ಮಾರ್ಷ್‌, ಸ್ಟೀವ್ ಸ್ಮಿತ್‌, ಮಾರ್ನಸ್ ಲಬುಶೇನ್‌, ಕ್ಯಾಮರೋನ್ ಗ್ರೀನ್‌, ಅಲೆಕ್ಸ್ ಕೇರ್ರಿ, ಗ್ಲೆನ್ ಮ್ಯಾಕ್ಸ್‌ವೆಲ್‌, ಮಿಚೆಲ್ ಸ್ಟಾರ್ಕ್‌, ಪ್ಯಾಟ್ ಕಮಿನ್ಸ್‌(ನಾಯಕ), ಜೋಶ್ ಹೇಜಲ್‌ವುಡ್‌, ಆಡಂ ಜಂಪಾ.

ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್‌

ಇಂಟ್ರೆಸ್ಟಿಂಗ್ ಅಂಕಿ-ಅಂಶ:

07 ಪಂದ್ಯಗಳು: ಚೆಪಾಕ್‌ ಕ್ರೀಡಾಂಗಣ ಈ ವರೆಗೂ 7 ವಿಶ್ವಕಪ್‌ ಪಂದ್ಯಗಳಿಗೆ ಆತಿಥ್ಯ ವಹಿಸಿದೆ.

03 ಗೆಲುವು: ಚೆನ್ನೈನಲ್ಲಿ ಆಸ್ಟ್ರೇಲಿಯಾ 3 ವಿಶ್ವಕಪ್‌ ಪಂದ್ಯಗಳನ್ನು ಆಡಿದ್ದು, 3ರಲ್ಲೂ ಗೆದ್ದಿದೆ.

12 ಪಂದ್ಯಗಳು: 2019ರ ವಿಶ್ವಕಪ್‌ ಬಳಿಕ ಭಾರತ ಹಾಗೂ ಆಸ್ಟ್ರೇಲಿಯಾ 12 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ತಲಾ 6 ಪಂದ್ಯಗಳನ್ನು ಗೆದ್ದಿವೆ.