ಬುಮ್ರಾಗೆ ರೆಸ್ಟ್ ಕೊಡಿ, ಬಾಂಗ್ಲಾ ಎದುರು ಈತನಿಗೆ ಮಣೆ ಹಾಕಿ ಎಂದ ಸುನಿಲ್ ಗವಾಸ್ಕರ್..!
ಟೀಂ ಇಂಡಿಯಾ ಅನುಭವಿ ವೇಗಿಯಾಗಿರುವ ಮೊಹಮ್ಮದ್ ಶಮಿ, 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬುಮ್ರಾ ಅಥವಾ ಸಿರಾಜ್‌ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಶಮಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗುತ್ತದೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.
ಪುಣೆ(ಅ.19): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಪಂದ್ಯಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ. 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿ ಬೀಗುತ್ತಿರುವ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಇದೀಗ ಪುಣೆಯಲ್ಲಿ ನೆರೆಯ ಬಾಂಗ್ಲಾದೇಶದ ಸವಾಲು ಸ್ವೀಕರಿಸಲು ಸಜ್ಜಾಗಿದೆ. ಹೀಗಿರುವಾಗಲೇ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಬಾಂಗ್ಲಾದೇಶ ಎದುರಿನ ಪಂದ್ಯಕ್ಕೆ ಮಾರಕ ವೇಗಿ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ನೀಡುವಂತೆ ಸಲಹೆ ನೀಡಿದ್ದಾರೆ.
ಹೌದು, ಅಕ್ಟೋಬರ್ 19ರಂದು ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಭಾರತ ತಂಡವು ಆಡುವ ಹನ್ನೊಂದರ ಬಳಗದಲ್ಲಿ ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುವ ಸಲಹೆ ನೀಡಿದ್ದಾರೆ. India Today ವಾಹಿನಿಯಲ್ಲಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸುನಿಲ್ ಗವಾಸ್ಕರ್, "ನನ್ನ ಪ್ರಕಾರ ಬಾಂಗ್ಲಾದೇಶ ಎದುರಿನ ಪಂದ್ಯಕ್ಕೆ ಮೊಹಮ್ಮದ್ ಶಮಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಬೇಕು. ಯಾಕೆಂದರೆ ಮುಂದಿನ ಪಂದ್ಯವು ಧರ್ಮಶಾಲಾದಲ್ಲಿ ನಡೆಯಲಿದೆ. ಈ ವಾತಾವಾರಣವು ವೇಗಿಗಳಿಗೆ ಹೆಚ್ಚು ನೆರವು ನೀಡುತ್ತದೆ. ಆ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ 100% ರೆಡಿ ಇರಬೇಕಾಗುತ್ತದೆ. ಇದರ ಜತೆಗೆ ಬಾಂಗ್ಲಾದೇಶ ಹಾಗೂ ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ಎದುರಿನ ಪಂದ್ಯಕ್ಕೂ ಕೆಲವೇ ದಿನಗಳ ಅಂತರವಿದೆ. ಇನ್ನು ವಾತಾವರಣದಲ್ಲೂ ಸಾಕಷ್ಟು ವ್ಯತ್ಯಾಸವಿದೆ. ಹೀಗಾಗಿ ಬಾಂಗ್ಲಾದೇಶ ಎದುರಿನ ಪಂದ್ಯದಲ್ಲಿ ಬುಮ್ರಾಗೆ ರೆಸ್ಟ್ ನೀಡಿ ಮೊಹಮ್ಮದ್ ಶಮಿಗೆ ಸ್ಥಾನ ನೀಡುವುದು ಸೂಕ್ತ ತೀರ್ಮಾನವಾಗಲಿದೆ" ಎಂದು ಸನ್ನಿ ಅಭಿಪ್ರಾಯಪಟ್ಟಿದ್ದಾರೆ.
ಬಾಂಗ್ಲಾ ಎದುರಿನ ಪಂದ್ಯಕ್ಕೂ ಮುನ್ನ ಬಿಗ್ ಶಾಕ್: ರೋಹಿತ್ ಶರ್ಮಾ ಮೇಲೆ ಪೊಲೀಸರಿಂದ 3 ಪ್ರತ್ಯೇಕ ಕೇಸ್ ದಾಖಲು..!
'ಶಮಿ ತಂಡ ಕೂಡಿಕೊಳ್ಳುವುದರಿಂದ ಏನನ್ನೂ ಕಳೆದುಕೊಳ್ಳುವುದಿಲ್ಲ. ಈ ಬಗ್ಗೆ ಭಾರತ ಕ್ರಿಕೆಟ್ ತಂಡದ ಚಿಂತಕರ ಚಾವಡಿಯು ಸಾಕಷ್ಟು ಯೋಚನೆ ಮಾಡಬೇಕಾದ ಅಗತ್ಯವಿದೆ' ಎನ್ನುವ ಕಿವಿ ಮಾತನ್ನು ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಟೀಂ ಇಂಡಿಯಾ ಅನುಭವಿ ವೇಗಿಯಾಗಿರುವ ಮೊಹಮ್ಮದ್ ಶಮಿ, 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯಲು ವಿಫಲವಾಗಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಬುಮ್ರಾ ಅಥವಾ ಸಿರಾಜ್‌ಗೆ ವಿಶ್ರಾಂತಿ ನೀಡಿ ಮೊಹಮ್ಮದ್ ಶಮಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡಲಾಗುತ್ತದೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.
ICC World Cup 2023: ಬಾಂಗ್ಲಾ ಹುಲಿಗಳ ಬೇಟೆಗೆ ಭಾರತ ರೆಡಿ..!
ಸಂಭವನೀಯ ಆಟಗಾರರ ಪಟ್ಟಿ
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ/,ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಬಾಂಗ್ಲಾ: ತನ್ಜಿದ್, ಲಿಟನ್ ದಾಸ್, ನಜ್ಮುಲ್ ಹೊಸೈನ್, ಶಕೀಬ್ ಅಲ್ ಹಸನ್(ನಾಯಕ), ತೌಹಿದ್, ಮುಷ್ಫಿಕುರ್ ರಹೀಂ, ಮೆಹಿದಿ ಹಸನ್, ಮಹ್ಮುದುಲ್ಲಾ, ಟಸ್ಕಿನ್ ಅಹಮ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಾಫಿಜುರ್ ರೆಹಮಾನ್.
ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್