ಗುರುವಾರ ಮೈದಾನಕ್ಕಿಳಿದ ಗಿಲ್‌ ಸುಮಾರು ಒಂದು ಗಂಟೆಗಳ ಕಾಲ ನೆಟ್ಸ್‌ನಲ್ಲಿ ಬೆವರಿಳಿಸಿದರು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದರೂ ಅ.14ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಬಹುನಿರೀಕ್ಷಿತ ಪಂದ್ಯದಲ್ಲಿ ಆಡುವ ಬಗ್ಗೆ ತಂಡದ ಆಡಳಿತ ಸಮಿತಿ ಇನ್ನಷ್ಟೇ ನಿರ್ಧರಿಸಬೇಕಿದೆ.

ಅಹಮದಾಬಾದ್‌(ಅ.13): ವಿಶ್ವಕಪ್‌ ಆರಂಭಕ್ಕೂ ಮುನ್ನವೇ ಡೆಂಘಿ ಜ್ವರದಿಂದ ಬಳಲುತ್ತಿದ್ದ ಭಾರತದ ತಾರಾ ಬ್ಯಾಟರ್‌ ಶುಭ್‌ಮನ್‌ ಗಿಲ್‌ ಗುರುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ಗಿಲ್‌ ಈ ವರೆಗೆ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ರಾತ್ರಿ ಚೆನ್ನೈನಿಂದ ಅಹಮದಾಬಾದ್‌ಗೆ ಆಗಮಿಸಿದ್ದರು. ಗುರುವಾರ ಮೈದಾನಕ್ಕಿಳಿದ ಗಿಲ್‌ ಸುಮಾರು ಒಂದು ಗಂಟೆಗಳ ಕಾಲ ನೆಟ್ಸ್‌ನಲ್ಲಿ ಬೆವರಿಳಿಸಿದರು. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದರೂ ಅ.14ರಂದು ನಡೆಯಲಿರುವ ಪಾಕಿಸ್ತಾನ ವಿರುದ್ಧದ ಬಹುನಿರೀಕ್ಷಿತ ಪಂದ್ಯದಲ್ಲಿ ಆಡುವ ಬಗ್ಗೆ ತಂಡದ ಆಡಳಿತ ಸಮಿತಿ ಇನ್ನಷ್ಟೇ ನಿರ್ಧರಿಸಬೇಕಿದೆ.

ಪಾಕ್‌ ಪಂದ್ಯಕ್ಕಾಗಿ ಭಾರತ ತಂಡ ಅಹಮದಾಬಾದ್‌ಗೆ

ಅಹಮದಾಬಾದ್‌: ಸಾಂಪ್ರದಾಯಿಕ ಬದ್ಧವೈರಿ ಪಾಕಿಸ್ತಾನ ವಿರುದ್ಧ ಅ.14ರಂದು ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್‌ನ ಬಹುನಿರೀಕ್ಷಿತ ಪಂದ್ಯಕ್ಕಾಗಿ ಟೀಂ ಇಂಡಿಯಾ ಆಟಗಾರರು ಗುರುವಾರ ಅಹಮದಾಬಾದ್‌ಗೆ ಆಗಮಿಸಿದರು. ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ಟೂರ್ನಿಯ ಮೊದಲ ಪಂದ್ಯವಾಡಿದ್ದ ಭಾರತ, ನವದೆಹಲಿಯ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ಅಫ್ಘಾನಿಸ್ತಾನ ವಿರುದ್ಧ ಸೆಣಸಾಡಿತ್ತು. ಗುರುವಾರ ಬೆಳಗ್ಗೆ ಆಟಗಾರರು ನವದೆಹಲಿಯಿಂದ ಅಹಮದಾಬಾದ್‌ಗೆ ತೆರಳಿದರು.

ಡೆಂಗ್ಯೂವಿನಿಂದ ಬಳಲುತ್ತಿರುವ ಶುಭಮನ್ ಗಿಲ್‌ಗೆ ಮಹತ್ವದ ಸಲಹೆ ನೀಡಿದ ಯುವರಾಜ್ ಸಿಂಗ್!

ಭಾರತದ ಗೆಲುವಿನ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ‘ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದ ಸ್ಮರಣೀಯ ಗೆಲುವಿನ ಬಳಿಕ ಭಾರತ ತಂಡ ಆಫ್ಘನ್‌ ವಿರುದ್ಧವೂ ಪ್ರಾಬಲ್ಯ ಸಾಧಿಸಿ ಗೆಲುವು ಪಡೆದಿದೆ. ಅತ್ಯುತ್ತಮ ಪ್ರದರ್ಶನ ಮುಂದುವರಿಸುತ್ತಿರುವ ಟೀಂ ಇಂಡಿಯಾಕ್ಕೆ ಅಭಿನಂದನೆಗಳು’ ಎಂದು ತಿಳಿಸಿದ್ದಾರೆ.

ಭಾರತ-ಪಾಕ್‌ ಪಂದ್ಯಕ್ಕೆ 11000 ಭದ್ರತಾ ಸಿಬ್ಬಂದಿ!

ಅಹಮದಾಬಾದ್‌: ಅಕ್ಟೋಬರ್ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ವಿಶ್ವಕಪ್‌ ಪಂದ್ಯಕ್ಕೆ 11 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 

ಮಗಳು ಸನಾ ಎಜುಕೇಷನ್‌ಗೆ ಸೌರವ್ ಗಂಗೂಲಿ ಖರ್ಚು ಮಾಡಿದ ಹಣ ಎಷ್ಟು ಗೊತ್ತಾ? ಇಲ್ಲಿದೆ ಇಂಟ್ರೆಸ್ಟಿಂಗ್ ಡೀಟೈಲ್ಸ್

ಪಂದ್ಯಕ್ಕೆ ಉಗ್ರರ ದಾಳಿ ಭೀತಿಯಿದ್ದು, ಈ ಹಿನ್ನೆಲೆಯಲ್ಲಿ ಗುಜರಾತ್‌ನ 7,000 ಪೊಲೀಸರ ಜೊತೆಗೆ ಸುಮಾರು 4,000 ಎನ್‌ಎಸ್‌ಜಿ, ಆರ್‌ಎಎಫ್‌ ಹಾಗೂ ಹೋಮ್‌ ಗಾರ್ಡ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ. ಕ್ರೀಡಾಂಗಣ, ಆಟಗಾರರು ತಂಗುವ ಹೋಟೆಲ್‌, ಸಂಚರಿಸುವ ರಸ್ತೆಯುದ್ದಕ್ಕೂ ಭದ್ರತಾ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದೆ.