ಭಾರತ ತಂಡದಲ್ಲಿ ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ ಈ ಪಂದ್ಯಕ್ಕೆ ಅಲಭ್ಯರಾಗಿದ್ದು, ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಶಾರ್ದೂಲ್ ಠಾಕೂರ್ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ತಂಡ ಕೂಡಿಕೊಂಡಿದ್ದಾರೆ.

ಧರ್ಮಶಾಲಾ(ಅ.22): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಂದು ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಉಭಯ ತಂಡಗಳು ತಲಾ 4 ಪಂದ್ಯಗಳನ್ನಾಡಿ 4 ಪಂದ್ಯದಲ್ಲೂ ಗೆಲುವಿನ ನಗೆ ಬೀರಿದ್ದು, ಇಂದು ಅಗ್ರಸ್ಥಾನಕ್ಕಾಗಿ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

ಭಾರತ ತಂಡದಲ್ಲಿ ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಹಾರ್ದಿಕ್ ಪಾಂಡ್ಯ ಗಾಯದ ಸಮಸ್ಯೆಯಿಂದ ಈ ಪಂದ್ಯಕ್ಕೆ ಅಲಭ್ಯರಾಗಿದ್ದು, ಪಾಂಡ್ಯ ಬದಲಿಗೆ ಸೂರ್ಯಕುಮಾರ್ ಯಾದವ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಶಾರ್ದೂಲ್ ಠಾಕೂರ್ ಬದಲಿಗೆ ಅನುಭವಿ ವೇಗಿ ಮೊಹಮ್ಮದ್ ಶಮಿ ತಂಡ ಕೂಡಿಕೊಂಡಿದ್ದಾರೆ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಭಾರತ ಕೊನೆಯ ಬಾರಿಗೆ ಐಸಿಸಿ ಟೂರ್ನಿಯಲ್ಲಿ ನ್ಯೂಜಿಲೆಂಡ್‌ ಸೋಲಿಸಿದ್ದಾಗ ಕೊಹ್ಲಿಗೆ ಕೇವಲ 14 ವರ್ಷ..!

ಎರಡೂ ತಂಡಗಳ ಬ್ಯಾಟರ್‌ಗಳೂ ಉತ್ಕೃಷ್ಟ ಲಯದಲ್ಲಿದ್ದಾರೆ. ಟೂರ್ನಿಯಲ್ಲಿ ಗರಿಷ್ಠ ರನ್‌ ಕಲೆಹಾಕಿರುವವರ ಪಟ್ಟಿಯಲ್ಲಿ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಡೆವೊನ್‌ ಕಾನ್‌ವೇ ಕ್ರಮವಾಗಿ 2, 3 ಹಾಗೂ 4ನೇ ಸ್ಥಾನಗಳಲ್ಲಿದ್ದಾರೆ. ಬ್ಯಾಟಿಂಗ್‌ ಅಷ್ಟು ಸುಲಭವಲ್ಲದ ಪಿಚ್‌ನಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿದೆ.

Scroll to load tweet…

ಕಳೆದೆರಡು ದಶಕದಿಂದಲೂ ಕಿವೀಸ್ ಎದುರು ಐಸಿಸಿ ಟೂರ್ನಿ ಗೆದ್ದಿಲ್ಲ ಭಾರತ: ಟೀಂ ಇಂಡಿಯಾ, ಐಸಿಸಿ ಟೂರ್ನಿಯಲ್ಲಿ ಕಳೆದೆರಡು ದಶಕಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಲು ಪರದಾಡುತ್ತಲೇ ಬಂದಿದೆ. 2003ರಲ್ಲಿ ಕೊನೆಯ ಬಾರಿಗೆ ಸೌರವ್ ಗಂಗೂಲಿ ನೇತೃತ್ವದ ಟೀಂ ಇಂಡಿಯಾ, ಐಸಿಸಿ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿತ್ತು. ಇದಾದ ಬಳಿಕ ಐಸಿಸಿ ಟೂರ್ನಿಯಲ್ಲಿ ಕಿವೀಸ್ ತಂಡವನ್ನು ಸೋಲಿಸಲು ಭಾರತಕ್ಕೆ ಸಾಧ್ಯವಾಗಿಲ್ಲ. ಇದೀಗ ಟೂರ್ನಿಯಲ್ಲಿ ಅಜೇಯ ಗೆಲುವಿನ ನಾಗಾಲೋಟ ಮುಂದುವರೆಸಿರುವ ಟೀಂ ಇಂಡಿಯಾ, ಕಿವೀಸ್ ಕಿವಿ ಹಿಂಡುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

ICC World Cup 2023: ಅಗ್ರಸ್ಥಾನಕ್ಕೆ ಭಾರತ vs ನ್ಯೂಜಿಲೆಂಡ್ ಸೆಣಸು..!

ತಂಡದ ಆಟಗಾರರ ಪಟ್ಟಿ ಹೀಗಿದೆ ನೋಡಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್‌ ಯಾದವ್, ಮೊಹಮ್ಮದ್ ಸಿರಾಜ್‌.

ನ್ಯೂಜಿಲೆಂಡ್‌: ಡೆವೊನ್‌ ಕಾನ್‌ವೇ, ವಿಲ್‌ ಯಂಗ್‌, ರಚಿನ್‌ ರವೀಂದ್ರ, ಟಾಮ್ ಲೇಥಮ್‌(ನಾಯಕ), ಡೇರಲ್ ಮಿಚೆಲ್‌, ಗ್ಲೆನ್ ಫಿಲಿಪ್ಸ್‌, ಮಾರ್ಕ್ ಚಾಪ್ಮನ್‌, ಮಿಚೆಲ್ ಸ್ಯಾಂಟ್ನರ್‌, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯೂಸನ್‌, ಟ್ರೆಂಟ್‌ ಬೌಲ್ಟ್‌.

ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್‌