ICC World Cup 2023: ಬದ್ದ ಎದುರಾಳಿ ಕಾಳಗದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ..!
ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಪಾಕಿಸ್ತಾನ ಎದುರು 7-0 ಅಂತರದ ಪ್ರಾಬಲ್ಯ ಮೆರೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ.
ಅಹಮದಾಬಾದ್(ಅ.14): ಇಡೀ ಕ್ರಿಕೆಟ್ ಜಗತ್ತೇ ಕಾತರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಕ್ರಿಕೆಟ್ ಜಗತ್ತಿನ ಬದ್ದ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ತಂಡಗಳು 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಒಂದು ಬದಲಾವಣೆಯಾಗಿದ್ದು, ಶುಭ್‌ಮನ್ ಗಿಲ್ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ಇಶಾನ್ ಕಿಶನ್ ತಂಡದಿಂದ ಹೊರಬಿದ್ದಿದ್ದಾರೆ. ಇನ್ನುಳಿದಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇನ್ನು ಪಾಕಿಸ್ತಾನ ಕ್ರಿಕೆಟ್ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
1992ರಿಂದ 2019ರ ವರೆಗೂ ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ 7 ಪಂದ್ಯಗಳನ್ನಾಡಿರುವ ಭಾರತ, ಏಳೂ ಬಾರಿ ವಿಜಯಶಾಲಿಯಾಗಿ ಹೊರಹೊಮ್ಮಿದೆ. ಈ ವಿಶ್ವಕಪ್‌ನಲ್ಲಿ ಆಡುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ಬಲಾಬಲವನ್ನು ನೋಡಿದಾಗ, ಈ ಸಲವೂ ಭಾರತವೇ ಗೆಲ್ಲುವ ಫೇವರಿಟ್. ಭಾರತ 8ನೇ ಜಯಕ್ಕೆ ಹಪಹಪಿಸುತ್ತಿದೆ.
ICC World Cup 2023: ಸೆವೆನ್‌ಸ್ಟಾರ್ ಭಾರತಕ್ಕೆ 8-0 ಧ್ಯಾನ..! ಇಂದು ಬದ್ಧ ಎದುರಾಳಿಗಳ ಕದನ
ಪ್ರಸಕ್ತ ಆವೃತ್ತಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ತಲಾ ಎರಡು ಪಂದ್ಯಗಳನ್ನಾಡಿದ್ದು, ಉಭಯ ತಂಡಗಳು ಗೆಲುವಿನ ನಗೆ ಬೀರಿದ್ದು ಇದೀಗ ಎರಡೂ ತಂಡಗಳು ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿವೆ.
ತಂಡದ ಆಟಗಾರರ ಪಟ್ಟಿ ಹೀಗಿವೆ ನೋಡಿ:
ಭಾರತ: ರೋಹಿತ್ ಶರ್ಮಾ(ನಾಯಕ), ಶುಭ್‌ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್.
ಪಾಕಿಸ್ತಾನ: ಅಬ್ದುಲ್ಲಾ ಶಫೀಕ್, ಇಮಾಮ್ ಉಲ್ ಹಕ್, ಬಾಬರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕಾರ್ ಅಹಮ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ಹಸನ್/ವಸೀಂ, ಹ್ಯಾರಿಸ್ ರೌಫ್.
ಪಂದ್ಯ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಡಿಸ್ನಿ+ ಹಾಟ್‌ಸ್ಟಾರ್