ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಇಂದು 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಕೋಲ್ಕತಾದಲ್ಲಿ ಕಿಂಗ್ ಕೊಹ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡುಲ್ಕರ್(49 ಶತಕ) ಅವರ ದಾಖಲೆಯನ್ನು ಸರಿಗಟ್ಟಲಿದ್ದಾರಾ ಎನ್ನುವ ಕುತೂಹಲ ಜೋರಾಗಿದೆ.

ಕೋಲ್ಕತಾ(ನ.05): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಹೈವೋಲ್ಟೇಜ್ ಪಂದ್ಯದಲ್ಲಿಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯವನ್ನು ಗೆಲ್ಲುವ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನದೊಂದಿಗೆ ಸೆಮೀಸ್ ಪ್ರವೇಶಿಸಲಿದ್ದು, ಗೆಲುವಿಗಾಗಿ ಉಭಯ ತಂಡಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸುವ ಸಾಧ್ಯತೆಯಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡನ್ ಗಾರ್ಡನ್ಸ್‌ ಮೈದಾನ ಆತಿಥ್ಯ ವಹಿಸಿದೆ. ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದುಮ ಕೋಟ್ಜಿ ಬದಲಿಗೆ ತಬ್ರೀಜ್ ಶಮ್ಸಿ ತಂಡ ಕೂಡಿಕೊಂಡಿದ್ದಾರೆ.

Scroll to load tweet…

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇದುವರೆಗೂ ತಾನಾಡಿದ 7 ಪಂದ್ಯಗಳನ್ನು ಗೆದ್ದು ಬೀಗುತ್ತಿದ್ದು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನು ಹರಿಣಗಳ ಪಡೆ ಭಾರತಕ್ಕೆ ತಿರುಗೇಟು ನೀಡಲು ಎದುರು ನೋಡುತ್ತಿದ್ದಾರೆ.

Ind vs SA: ಆ ಬೌಲರ್ ಕಂಡ್ರೆ ಟೀಂ ಇಂಡಿಯಾ ಬ್ಯಾಟರ್ಸ್‌ ಹೆದರೋದ್ಯಾಕೆ..?

ಕೊಹ್ಲಿ ಮೇಲೆ ಎಲ್ಲರ ಕಣ್ಣು: ಟೀಂ ಇಂಡಿಯಾ ರನ್ ಮಷೀನ್ ವಿರಾಟ್ ಕೊಹ್ಲಿ ಇಂದು 35ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ಕೋಲ್ಕತಾದಲ್ಲಿ ಕಿಂಗ್ ಕೊಹ್ಲಿ ಶತಕ ಸಿಡಿಸುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ ಸಚಿನ್ ತೆಂಡುಲ್ಕರ್(49 ಶತಕ) ಅವರ ದಾಖಲೆಯನ್ನು ಸರಿಗಟ್ಟಲಿದ್ದಾರಾ ಎನ್ನುವ ಕುತೂಹಲ ಜೋರಾಗಿದೆ.

ಈ ಪಂದ್ಯ ಭಾರತದ ಬಲಿಷ್ಠ ಬೌಲಿಂಗ್‌ ಪಡೆ ಹಾಗೂ ದಕ್ಷಿಣ ಆಫ್ರಿಕಾದ ಪ್ರಚಂಡ ಬ್ಯಾಟಿಂಗ್‌ ಪಡೆಯ ನಡುವಿನ ಗುದ್ದಾಟ ಎಂದೇ ಖ್ಯಾತಿ ಪಡೆದಿದೆ. ಭಾರತೀಯ ಬ್ಯಾಟರ್‌ಗಳಿಂದ ಅಮೋಘ ಪ್ರದರ್ಶನ ಮೂಡಿಬರುತ್ತಿದ್ದರೂ, ಬೌಲರ್‌ಗಳು ಹೆಚ್ಚು ಸದ್ದು ಮಾಡುತ್ತಿದ್ದಾರೆ. ಅದರಲ್ಲೂ ಮೊಹಮದ್‌ ಶಮಿ ಸೇರ್ಪಡೆ, ಭಾರತದ ವೇಗದ ಬೌಲಿಂಗ್‌ ಪಡೆಯನ್ನು ಮತ್ತಷ್ಟು ಸದೃಢಗೊಳಿಸಿದೆ.

ಹ್ಯಾಪಿ ಬರ್ತ್ ಡೇ ವಿರಾಟ್ ಕೊಹ್ಲಿ..! ಬರ್ತ್ ಡೇ ದಿನ ಬರುತ್ತಾ 49ನೇ ಶತಕ..?

ಹರಿಣಗಳ ಪಡೆ ಪರ ಈಗಾಗಲೇ ಟೂರ್ನಿಯಲ್ಲಿ 4 ಶತಕ ಸಿಡಿಸಿರುವ ಕ್ವಿಂಟನ್‌ ಡಿ ಕಾಕ್‌, ಸ್ಫೋಟಕ ಶತಕಗಳನ್ನು ಚಚ್ಚಿರುವ ಏಡನ್‌ ಮಾರ್ಕ್‌ರಮ್‌, ಹೆನ್ರಿಚ್‌ ಕ್ಲಾಸೆನ್‌, ಅಪಾಯಕಾರಿ ಡೇವಿಡ್‌ ಮಿಲ್ಲರ್‌ ಹೀಗೆ ಬ್ಯಾಟಿಂಗ್‌ ವೀರರ ದಂಡೇ ಇದೆ. ಇವುರುಗಳ ಜೊತೆ ರಬಾಡ, ಯಾನ್ಸನ್‌, ಎನ್‌ಗಿಡಿಯಂತಹ ಗುಣಮಟ್ಟದ ವೇಗಿಗಳ ಬಲವೂ ದ.ಆಫ್ರಿಕಾಕ್ಕಿದು ಈ ಪಂದ್ಯ ಅಭಿಮಾನಿಗಳಿಗೆ ಭರ್ಜರಿ ರಸದೌತಣ ಸಿಗುವ ಸಾಧ್ಯತೆಯಿದೆ.

ಆಟಗಾರರ ಪಟ್ಟಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ ಎಲ್ ರಾಹುಲ್‌, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲ್ದೀಪ್‌ ಯಾದವ್, ಮೊಹಮ್ಮದ್ ಸಿರಾಜ್‌.

ದ.ಆಫ್ರಿಕಾ: ಕ್ವಿಂಟನ್ ಡಿ ಕಾಕ್‌, ತೆಂಬಾ ಬವುಮಾ(ನಾಯಕ), ರಾಸ್ಸಿ ವ್ಯಾನ್ ಡರ್ ಡುಸ್ಸೆನ್‌, ಏಯ್ಡನ್ ಮಾರ್ಕ್‌ರಮ್‌, ಡೇವಿಡ್ ಮಿಲ್ಲರ್‌, ಹೆನ್ರಿಚ್ ಕ್ಲಾಸೆನ್‌, ಮಾರ್ಕೊ ಯಾನ್ಸನ್‌, ತಬ್ರೀಜ್ ಶಮ್ಸಿ, ಕೇಶವ್‌ ಮಹರಾಜ್, ಕಗಿಸೋ ರಬಾಡ, ಲುಂಗಿ ಎನ್‌ಗಿಡಿ.

ಪಂದ್ಯ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್‌