ICC World Cup 2023: ಇಂಗ್ಲೆಂಡ್ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ಫೀಲ್ಡಿಂಗ್ ಆಯ್ಕೆ..!

ಸಣ್ಣ ಪ್ರಮಾಣದ ಗಾಯದ ಸಮಸ್ಯೆ ಎದುರಿಸುತ್ತಿರುವ ತಾರಾ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.  ಇನ್ನು ವಿಶ್ವಕಪ್‌ಗೂ ಮುನ್ನ ಈ ಎರಡು ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಕಿವೀಸ್ ವಿರುದ್ಧ ಇಂಗ್ಲೆಂಡ್ ಮೇಲುಗೈ ಸಾಧಿಸಿತ್ತು.

ICC World Cup 2023 Tom Latham led New Zealand win the toss elect bowl first against England kvn

ಅಹಮದಾಬಾದ್‌(ಅ.05): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಧಿಕೃತ ಚಾಲನೆ ಸಿಕ್ಕಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ ಎದುರು ಟಾಸ್ ಗೆದ್ದ ನ್ಯೂಜಿಲೆಂಡ್ ತಂಡವು ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. 

2019ರ ಫೈನಲ್‌ನಲ್ಲಿ ಅನುಭವಿಸಿದ್ದ ಸೋಲಿಗೆ ಸೇಡು ತೀರಿಸಿಕೊಳ್ಳಲು ಕಿವೀಸ್ ಕಾಯುತ್ತಿದ್ದು, ಇಂಗ್ಲೆಂಡ್‌ಗೆ ಆರಂಭಿಕ ಶಾಕ್ ನೀಡಲು ಎದುರು ನೋಡುತ್ತಿದೆ. ಹಾಲಿ ವಿಶ್ವ ಟಿ20 ಚಾಂಪಿಯನ್ ಸಹ ಆಗಿರುವ ಇಂಗ್ಲೆಂಡ್ ತಂಡದ ತುಂಬಾ ಆಲ್ರೌಂಡರ್‌ಗಳೇ ತುಂಬಿಕೊಂಡಿದ್ದು, ಹಲವು ಆಟಗಾರರು ಏಕಾಂಗಿಯಾಗಿ ಪಂದ್ಯ ಗೆಲ್ಲಿಸಬಲ್ಲ ಸಾರ್ಮಥ್ಯ ಹೊಂದಿದ್ದಾರೆ.

ICC World Cup 2023 ಮೋದಿ ಸ್ಟೇಡಿಯಂನಲ್ಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ಗೆ ಕಿವೀಸ್ ಚಾಲೆಂಜ್‌

ಸ್ಟೋಕ್ಸ್ ಇಲ್ಲ: ಸಣ್ಣ ಪ್ರಮಾಣದ ಗಾಯದ ಸಮಸ್ಯೆ ಎದುರಿಸುತ್ತಿರುವ ತಾರಾ ಆಲ್ರೌಂಡರ್ ಬೆನ್ ಸ್ಟೋಕ್ಸ್ ಈ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.  ಇನ್ನು ವಿಶ್ವಕಪ್‌ಗೂ ಮುನ್ನ ಈ ಎರಡು ತಂಡಗಳು ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಿದ್ದವು. ಕಿವೀಸ್ ವಿರುದ್ಧ ಇಂಗ್ಲೆಂಡ್ ಮೇಲುಗೈ ಸಾಧಿಸಿತ್ತು.

ಕೇನ್, ಸೌಥಿ, ಲಾಕಿ ಅಲಭ್ಯ: ನ್ಯೂಜಿಲೆಂಡ್‌ಗೆ ಈ ಪಂದ್ಯದಲ್ಲಿ ನಾಯಕ ಕೇನ್ ವಿಲಿಯಮ್ಸನ್ ಹಾಗೂ ವೇಗಿ ಟಿಮ್ ಸೌಥಿ ಹಾಗೂ ಲಾಕಿ ಫರ್ಗ್ಯೂಸನ್ ಸೇವೆಯೂ ಲಭ್ಯವಾಗಿಲ್ಲ. ವಿಲಿಯಮ್ಸನ್ ಅಭ್ಯಾಸ ಪಂದ್ಯಗಳಲ್ಲಿ ಆಡಿದರೂ, ಗಾಯದ ಪ್ರಮಾಣ ಉಲ್ಬಣಿಸದೆ ಇರಲಿದೆ ಎನ್ನುವ ಕಾರಣಕ್ಕೆ ಈ ಪಂದ್ಯಕ್ಕೆ ಗೈರಾಗಲು ನಿರ್ಧರಿಸಿದ್ದಾರೆ. ಲಾಕಿ ಫರ್ಗ್ಯೂಸನ್ ಹಾಗೂ ಟಿಮ್ ಸೌಥಿ ಉದ್ಘಾಟನಾ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಡ್ಯಾರೆಲ್ ಮಿಚೆಲ್, ಡೆವೊನ್ ಕಾನ್‌ವೇ, ಟಾಮ್ ಲೇಥಮ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್‌ರಂತಹ ಬಲಿಷ್ಠ ಬ್ಯಾಟರ್‌ಗಳ ಬಲ ಕಿವೀಸ್‌ಗಿದ್ದು, ವೇಗಿಗಳಾದ ಮ್ಯಾಟ್ ಹೆನ್ರಿ,  ಮೇಲೆ ತಂಡ ಹೆಚ್ಚಿನ ನಿರೀಕ್ಷೆ ಇರಿಸಿದೆ.

ICC World Cup 2023: ಕ್ರಿಕೆಟ್ ವಿಶ್ವ ಸಮರಕ್ಕೆ ಇಂದು ಅಧಿಕೃತ ಚಾಲನೆ..!

ತಂಡದ ಆಟಗಾರರ ಪಟ್ಟಿ ಹೀಗಿದೆ ನೋಡಿ:

ಇಂಗ್ಲೆಂಡ್: ಜಾನಿ ಬೇರ್‌ಸ್ಟೋವ್, ಡೇವಿಡ್ ಮಲಾನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್(ನಾಯಕ&ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಮೋಯಿನ್ ಅಲಿ ಕ್ರಿಸ್ ವೋಕ್ಸ್, ಮಾರ್ಕ್‌ ವುಡ್‌, ರಶೀದ್ ಖಾನ್.

ನ್ಯೂಜಿಲೆಂಡ್: ವಿಲ್ ಯಂಗ್, ಡೆವೊನ್ ಕಾನ್‌ವೇ, ಡ್ಯಾರೆಲ್ ಮಿಚೆಲ್, ಗ್ಲೆನ್ ಫಿಲಿಫ್ಸ್, ಟಾಮ್ ಲೇಥಮ್(ನಾಯಕ), ಮಾರ್ಕ್ ಚಾಂಪ್ಮನ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಮ್ಯಾಟ್ ಹೆನ್ರಿ, ಟ್ರೆಂಟ್ ಬೌಲ್ಟ್.

ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್
 

Latest Videos
Follow Us:
Download App:
  • android
  • ios