ಪಂದ್ಯದ ನಡುವೆ ಶಾರುಖ್ ಖಾನ್ ಚಲೆಯಾ ಹಾಡು ಹಾಡಿ ಸಿಗ್ನೇಚರ್ ಸ್ಟೆಪ್ಸ್ ಹಾಕಿದ ಕೊಹ್ಲಿ!
ಸೌತ್ ಆಫ್ರಿಕಾ ವಿರುದ್ಧದ ಪಂದ್ಯದ ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ ಡಾನ್ಸ್ ಹಾಗೂ ಹಾಡಿನ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಶಾರುಖ್ ಖಾನ್ ಚಲೆಯಾ ಹಾಡನ್ನು ಹಾಡಿದ ಕೊಹ್ಲಿ ಸಿಗ್ನೇಚರ್ ಸ್ಟೆಪ್ಸ್ ಹಾಕಿದ್ದಾರೆ.
ಕೋಲ್ಕತಾ(ನ.05) ಐಸಿಸಿ ವಿಶ್ವಕಪ್ ಟೂರ್ನಿಯ ಸೌತ್ ಆಫ್ರಿಕಾ ವಿರುದ್ಧದ ಪಂದ್ಯ ಟೀಂ ಇಂಡಿಯಾ ಅಭಿಮಾನಿಗಳು ಸಂಭ್ರಮ ಡಬಲ್ ಮಾಡಿದೆ. ಸೌತ್ ಆಫ್ರಿಕಾ ವಿರುದ್ಧ 243 ರನ್ ಭರ್ಜರಿ ಗೆಲುವು ದಾಖಲಿಸಿದ ಭಾರತ ಹಲವು ದಾಖಲೆ ನಿರ್ಮಿಸಿದೆ. ವಿಶೇಷವಾಗಿ ವಿರಾಟ್ ಕೊಹ್ಲಿ ತಮ್ಮ ಹುಟ್ಟು ಹಬ್ಬದ ದಿನವೇ ಸೆಂಚುರಿ ಸಿಡಿಸಿ ಸಂಭ್ರಮಿಸಿದ್ದಾರೆ. ಇನ್ನು ಫೀಲ್ಡಿಂಗ್ ವೇಳೆ ವಿರಾಟ್ ಕೊಹ್ಲಿ, ಶಾರುಖ್ ಖಾನ್ ಅಭಿನಯದ ಜವಾನ್ ಚಿತ್ರದ ಚಲೆಯಾ ಹಾಡನ್ನು ಹಾಡಿ, ಶಾರುಖ್ ಸಿಗ್ನೇಚರ್ ಸ್ಟೆಪ್ಸ್ ಹಾಕಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ವಿರಾಟ್ ಕೊಹ್ಲಿ ಸೆಂಚುರಿ ನೆರವಿನಿಂದ ಭಾರತ 326 ರನ್ ಸಿಡಿಸಿತ್ತು. ಈ ಮೊತ್ತ ಚೇಸ್ ಮಾಡಲು ಸೌತ್ ಆಫ್ರಿಕಾ ಕಣಕ್ಕಿಳಿದಿತ್ತು. ಭಾರತದ ಮಿಂಚಿನ ದಾಳಿ ಮುಂದೆ ಸೌತ್ ಆಫ್ರಿಕಾ ತತ್ತರಿಸಿತ್ತು. ಇದರ ನಡುವೆ ಸ್ಲಿಪ್ ಫೀಲ್ಡಿಂಗ್‌ನಲ್ಲಿದ್ದ ವಿರಾಟ್ ಕೊಹ್ಲಿ ಚಲೆಯಾ ಹಾಡುನ್ನು ಗುನುಗುತ್ತಿರುವ ವಿಡಿಯೋ ಭಾರಿ ಸಂಚಲನ ಸೃಷ್ಟಿಸಿದೆ. ಹಾಡು ಹಾಡಿದ್ದು ಮಾತ್ರವಲ್ಲ, ಶಾರುಖ್ ಖಾನ್ ಸಿಗ್ನೇಚರ್ ಸ್ಟೆಪ್ಸ್ ಹಾಕಿದ್ದಾರೆ.
INDvSA ಪಂದ್ಯದ ನಡುವೆ ಕೋಲ್ಕಾತದಲ್ಲಿ ಮೊಳಗಿದ ವಂದೇ ಮಾತರಂ, ವಿಡಿಯೋ ವೈರಲ್!
ಪಂದ್ಯದ ನಡುವೆ ಡ್ಯಾನ್ಸ್ ಮಾಡುವುದು ಕೊಹ್ಲಿಗೆ ಮೊದಲಲ್ಲ. ಹಲವು ಬಾರಿ ಈ ರೀತಿ ಡ್ಯಾನ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಇದೀಗ ಶಾರುಖ್ ಸಿಗ್ನೇಚರ್ ಸ್ಟೆಪ್ಸ್ ಮೂಲಕ ಅಭಿಮಾನಿಗಳಿಗೆ ಡಬಲ್ ಖುಷಿ ನೀಡಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 49ನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಮೂಲಕ ಏಕದಿನದಲ್ಲಿ ಗರಿಷ್ಠ ಶತಕ ಸಿಡಿಸಿದ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ. ಕೊಹ್ಲಿ 120 ಎಸೆತ ಎದುರಿಸಿ 10 ಬೌಂಡರಿ ಮೂಲಕ ಅಜೇಯ 101 ರನ್ ಸಿಡಿಸಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ 1,500 ರನ್ ಪೂರೈಸಿದ್ದಾರೆ. 2023ರ ವಿಶ್ವಕಪ್ ಟೂರ್ನಿಯಲ್ಲಿ ಕೊಹ್ಲಿ ಗರಿಷ್ಠ ಹಾಫ್ ಸೆಂಚುರಿ ಸಿಡಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಹ್ಲಿ ಈಗಾಗಲೇ 6 ಹಾಫ್ ಸೆಂಚುರಿ ಸಿಡಿಸಿದ್ದಾರೆ. ಇನ್ನು ಐಸಿಸಿ ಟೂರ್ನಿಗಳಲ್ಲಿ ಗರಿಷ್ಠ ಪಂದ್ಯ ಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಕ್ರಿಕೆಟಿಗ ಅನ್ನೋ ದಾಖಲೆಯನ್ನೂ ಕೊಹ್ಲಿ ಬರೆದಿದ್ದಾರೆ.
ಜಡೇಜಾ ಸ್ಪಿನ್ ಮೋಡಿಗೆ ಸೌತ್ ಆಫ್ರಿಕಾ ಉಡೀಸ್,243 ರನ್ ಗೆಲುವಿನ ದಾಖಲೆ ಬರೆದ ರೋಹಿತ್ ಬಾಯ್ಸ್!
ಸೌತ್ ಆಫ್ರಿಕಾ 27.1 ಓವರ್‌ಗಳಲ್ಲಿ ಕೇವಲ 83 ರನ್‌ಗೆ ಆಲೌಟ್ ಆಯಿತು. ರವೀಂದ್ರ ಜಡೇಜಾ 5 ವಿಕೆಟ್ ಕಬಳಿಸಿ ಮಿಂಚಿದರು.