ಆಸೀಸ್ ನೀವೂ ಚೆನ್ನಾಗಿ ಆಡಿ, ಆದ್ರೆ, 239 ಇದಕ್ಕಿಂತ ಜಾಸ್ತಿ ರನ್ ಮಾಡ್ಬೇಡಿ!
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಶುಭ್‌ಮನ್ ಗಿಲ್ ಕೇವಲ 4 ರನ್ ಗಳಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು.
ಅಹಮದಾಬಾದ್(ನ.19): ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಬ್ಯಾಟರ್‌ಗಳು ರನ್ ಗಳಿಸಲು ಪರದಾಡಿದ್ದಾರೆ. ವಿರಾಟ್ ಕೊಹ್ಲಿ(54), ಕೆ ಎಲ್ ರಾಹುಲ್(66) ಹಾಗೂ ರೋಹಿತ್ ಶರ್ಮಾ(47) ಕೊಂಚ ಪ್ರತಿರೋಧ ತೋರಿದ್ದು ಬಿಟ್ಟರೆ ಉಳಿದ್ಯಾವ ಬ್ಯಾಟರ್‌ಗಳು ಕನಿಷ್ಠ ವೈಯುಕ್ತಿಕ ಸ್ಕೋರ್ 20 ರನ್ ದಾಟಲಿಲ್ಲ. ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 240 ರನ್ ಬಾರಿಸಿ ಸರ್ವಪತನ ಕಂಡಿದೆ. ಭಾರತ ಮೂರನೇ ಬಾರಿಗೆ ವಿಶ್ವಕಪ್ ಗೆಲ್ಲಬೇಕಿದ್ದರೆ, ಆಸ್ಟ್ರೇಲಿಯಾ ತಂಡವನ್ನು 239 ರನ್‌ಗಳಿಗೆ ಕಟ್ಟಿಹಾಕಬೇಕಿದೆ. ಹೀಗಾಗಿ ಟೀಂ ಇಂಡಿಯಾ ಫ್ಯಾನ್ಸ್, ಆಸೀಸ್ ನೀವು ಚೆನ್ನಾಗಿ ಆಡಿ, ಆದ್ರೆ 239 ರನ್‌ಗಿಂತ ಜಾಸ್ತಿ ಮಾಡಬೇಡಿ ಎಂದು ಪ್ರಾರ್ಥಿಸಲಾರಂಭಿಸಿದ್ದಾರೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಟೀಂ ಇಂಡಿಯಾ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಶುಭ್‌ಮನ್ ಗಿಲ್ ಕೇವಲ 4 ರನ್ ಗಳಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು. ಇನ್ನೊಂದೆಡೆ ಸ್ಪೋಟಕ ಆಟವಾಡಿದ ನಾಯಕ ರೋಹಿತ್ ಶರ್ಮಾ ಕೇವಲ 31 ಎಸೆತಗಳನ್ನು ಎದುರಿಸಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 47 ರನ್ ಬಾರಿಸಿ ಗ್ಲೆನ್ ಮ್ಯಾಕ್ಸ್‌ವೆಲ್‌ಗೆ ವಿಕೆಟ್ ಒಪ್ಪಿಸಿದರು. ಇನ್ನು ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಕೇವಲ 4 ರನ್ ಗಳಿಸಿ ಪ್ಯಾಟ್ ಕಮಿನ್ಸ್‌ಗೆ ವಿಕೆಟ್ ಒಪ್ಪಿಸಿದರು.
ಮೊಹಮ್ಮದ್ ಶಮಿ ತಾಯಿ ಆಸ್ಪತ್ರೆ ದಾಖಲು, ಫೈನಲ್ ಆರಂಭಗೊಂಡ ಬೆನ್ನಲ್ಲೇ ಅನಾರೋಗ್ಯ!
ಕೊಹ್ಲಿ-ರಾಹುಲ್ ಆಸರೆ: ಕೇವಲ 81 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಆಘಾತಕ್ಕೊಳಗಾಗಿದ್ದ ಭಾರತ ತಂಡಕ್ಕೆ 4ನೇ ವಿಕೆಟ್‌ಗೆ ಕೆ ಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಎಚ್ಚರಿಕೆಯ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಈ ಜೋಡಿ 109 ಎಸೆತಗಳನ್ನು ಎದುರಿಸಿ 67 ರನ್‌ಗಳ ಜತೆಯಾಟವಾಡಿತು. ಸಮಯೋಚಿತ ಬ್ಯಾಟಿಂಗ್ ನಡೆಸಿದ ವಿರಾಟ್ ಕೊಹ್ಲಿ 63 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 54 ರನ್ ಬಾರಿಸಿ ಮುನ್ನುಗ್ಗುತ್ತಿದ್ದಾಗ ದಾಳಿಗಿಳಿದ ಪ್ಯಾಟ್ ಕಮಿನ್ಸ್, ವಿರಾಟ್ ಕೊಹ್ಲಿಯನ್ನು ಕ್ಲೀನ್ ಬೌಲ್ಡ್ ಮಾಡುವಲ್ಲಿ ಯಶಸ್ವಿಯಾದರು.
ರಾಹುಲ್ ಎಚ್ಚರಿಕೆಯ ಫಿಫ್ಟಿ: ವಿರಾಟ್ ಕೊಹ್ಲಿ ಜತೆ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸಿದ ವಿಕೆಟ್ ಕೀಪರ್ ಬ್ಯಾಟರ್ ಕೆ ಎಲ್ ರಾಹುಲ್ ಸಮಯೋಚಿತ ಅರ್ಧಶತಕ ಸಿಡಿಸುವ ಮೂಲಕ ತಂಡಕ್ಕೆ ಆಸರೆಯಾದರು. ಅತ್ಯಂತ ತಾಳ್ಮೆಯ ಬ್ಯಾಟಿಂಗ್ ನಡೆಸಿದ ಕೆ ಎಲ್ ರಾಹುಲ್ 107 ಎಸೆತಗಳನ್ನು ಎದುರಿಸಿ ಕೇವಲ ಒಂದು ಬೌಂಡರಿ ಸಹಿತ 66 ರನ್ ಬಾರಿಸಿ ಮಿಚೆಲ್ ಸ್ಟಾರ್ಕ್‌ಗೆ ವಿಕೆಟ್ ಒಪ್ಪಿಸಿದರು.
World Cup 2023 Final: ವಿಶ್ವಕಪ್ ಇತಿಹಾಸದಲ್ಲಿ ಹಿಂದೆಂದೂ ಮಾಡದ ದಾಖಲೆ ನಿರ್ಮಿಸಿದ ಕೊಹ್ಲಿ!
ಇನ್ನುಳಿದಂತೆ ಮಧ್ಯಮ ಕೆಳ ಕ್ರಮಾಂಕದಲ್ಲಿ ಆಲ್ರೌಂಡರ್ ರವೀಂದ್ರ ಜಡೇಜಾ 9 ರನ್ ಬಾರಿಸಿ ವಿಕೆಟ್ ಒಪ್ಪಿಸಿದರೆ, ಸೂರ್ಯಕುಮಾರ್ ಯಾದವ್ ಬ್ಯಾಟಿಂಗ್ ಕೇವಲ 18 ರನ್‌ಗಳಿಗೆ ಸೀಮಿತವಾಯಿತು. ಶಮಿ 6 ಹಾಗೂ ಬುಮ್ರಾ ಕೇವಲ ಒಂದು ರನ್ ಗಳಿಸಿ ಪೆವಿಲಿಯನ್ ಪೆರೇಡ್ ನಡೆಸಿದರು. ಕೊನೆಯಲ್ಲಿ ಕುಲ್ದೀಪ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್ ಜೋಡಿ ತಂಡದ ಮೊತ್ತವನ್ನು 240ರ ಗಡಿ ತಲುಪಿಸುವಲ್ಲಿ ಯಶಸ್ವಿಯಾಯಿತು.