ವಿಶ್ವದ ಎರಡು ಬಲಾಢ್ಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡೆನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಹರಿಣಗಳ ನಾಯಕ ಬವುಮಾ ಸಂಪೂರ್ಣ ಫಿಟ್ ಆಗಿರದೇ ಇದ್ದರೂ ತಂಡವನ್ನು ಮುನ್ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಲುಂಗಿ ಎಂಗಿಡಿ ಬದಲಿಗೆ ತಬ್ರೀಜ್ ಶಮ್ಸಿ ತಂಡ ಕೂಡಿಕೊಂಡಿದ್ದಾರೆ.

ಕೋಲ್ಕತಾ(ನ.16): 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್‌ನಲ್ಲಿಂದು 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ತೆಂಬಾ ಬವುಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ವಿಶ್ವದ ಎರಡು ಬಲಾಢ್ಯ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐತಿಹಾಸಿಕ ಈಡೆನ್ ಗಾರ್ಡನ್ಸ್ ಮೈದಾನ ಆತಿಥ್ಯ ವಹಿಸಿದೆ. ಹರಿಣಗಳ ನಾಯಕ ಬವುಮಾ ಸಂಪೂರ್ಣ ಫಿಟ್ ಆಗಿರದೇ ಇದ್ದರೂ ತಂಡವನ್ನು ಮುನ್ನಡೆಸುತ್ತಿದ್ದಾರೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಲುಂಗಿ ಎಂಗಿಡಿ ಬದಲಿಗೆ ತಬ್ರೀಜ್ ಶಮ್ಸಿ ತಂಡ ಕೂಡಿಕೊಂಡಿದ್ದಾರೆ.

ಇನ್ನೊಂದೆಡೆ ಆಸ್ಟ್ರೇಲಿಯಾ ತಂಡದಲ್ಲೂ ಪ್ರಮುಖ ಬದಲಾವಣೆಗಳಾಗಿದ್ದು, ಮಾರ್ಕಸ್ ಸ್ಟೋನಿಸ್ ಹಾಗೂ ಶಾನ್ ಅಬ್ಬೋಟ್ ಹೊರಬಿದ್ದಿದ್ದು, ಮಿಚೆಲ್ ಸ್ಟಾರ್ಕ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ತಂಡ ಕೂಡಿಕೊಂಡಿದ್ದಾರೆ

ಮೊದಲೆರಡು ಸೋಲು ಮೂಲಕ ಆಘಾತಕಾರಿ ಆರಂಭದ ಬಳಿಕ ಆಸೀಸ್ ಸತತ 7 ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನಿಯಾಗಿ ನಾಕೌಟ್‌ಗೇರಿದರೆ, ಅತ್ತ ಸೌತ್‌ ಆಫ್ರಿಕಾ ಆಸೀಸ್‌ನಷ್ಟೇ ಅಂಕ ಗಳಿಸಿದ್ದರೂ ನೆಟ್ ರನ್‌ರೇಟ್ ಆಧಾರದಲ್ಲಿ 2ನೇ ಸ್ಥಾನಿಯಾಗಿ ಸೆಮೀಸ್ ಪ್ರವೇಶಿಸಿತು. ಈ ವರೆಗಿನ ಇತಿಹಾಸ ಗಮನಿಸಿದರೆ ಆಸ್ಟ್ರೇಲಿಯಾವೇ ಈ ಬಾರಿಯೂ ಮೇಲುಗೈ ಸಾಧಿಸಬಹುದು ಎನ್ನುವುದು ಕ್ರಿಕೆಟ್ ಪಂಡಿತರ ಲೆಕ್ಕಾಚಾರವಾಗಿದೆ. ತಂಡ ವಿಶ್ವಕಪ್‌ನಲ್ಲಿ 8 ಬಾರಿ ಸೆಮೀಸ್ ಆಡಿದ್ದು, 7ರಲ್ಲಿ ಫೈನಲ್‌ಗೇರಿ 5 ಬಾರಿ ಪ್ರಶಸ್ತಿ ಗೆದ್ದಿದೆ.

ಆಟಗಾರರ ಪಟ್ಟಿ ಹೀಗಿದೆ:

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಶ್, ಗ್ಲೆನ್ ಮ್ಯಾಕ್ಸ್‌ವೆಲ್, ಪ್ಯಾಟ್ ಕಮಿನ್ಸ್‌(ನಾಯಕ), ಮಿಚೆಲ್ ಸ್ಟಾರ್ಕ್, ಆಡಂ ಜಂಪಾ, ಜೋಶ್ ಹೇಜಲ್‌ವುಡ್.

ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ತೆಂಬಾ ಬವುಮಾ(ನಾಯಕ), ವ್ಯಾನ್ ಡರ್ ಡುಸೇನ್, ಏಯ್ಡನ್ ಮಾರ್ಕ್‌ರಮ್, ಹೆನ್ರಿಚ್ ಕ್ಲಾಸೇನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕೋಟ್ಜೀ, ಕೇಶವ್ ಮಹರಾಜ್, ಕಗಿಸೋ ರಬಾಡ, ಲುಂಗಿ ಎಂಗಿಡಿ.

ಪಂದ್ಯ ಆರಂಭ: ಮಧ್ಯಾಹ್ನ 2ಕ್ಕೆ
ಸ್ಥಳ: ಈಡನ್ ಗಾರ್ಡನ್ಸ್, ಕೋಲ್ಕತಾ
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್‌, ಡಿಸ್ನಿ+ ಹಾಟ್‌ಸ್ಟಾರ್.