ಸಿಡ್ನಿ(ಫೆ.21): ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಉದ್ಘಾಟನಾ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದೆ. ಭಾರತ ಮೊದಲು ಬ್ಯಾಟಿಂಗ್ ಮಾಡಲಿದೆ.

ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತವರಿನಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡಲು ಎದುರು ನೋಡುತ್ತಿದೆ. ಇನ್ನು ಆತಿಥೇಯರಿಗೆ ಶಾಕ್ ನೀಡಲು ಹರ್ಮನ್‌ಪ್ರೀತ್ ಕೌರ್ ಪಡೆ ಸಜ್ಜಾಗಿದೆ. ಉಭಯ ತಂಡಗಳು ಸಾಕಷ್ಟು ಬಲಶಾಲಿಗಳಾಗಿದ್ದು ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ.

ಮಹಿಳಾ ಟಿ20 ವಿಶ್ವಕಪ್‌: ಭಾರತಕ್ಕಿಂದು ಆಸೀಸ್‌ ಸವಾಲು

ಭಾರತ ತಂಡ ಬ್ಯಾಟಿಂಗ್ ಹಾಗೂ ಬೌಲಿಂಗ್ ಸದೃಢವಾಗಿದ್ದು ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿದಿದೆ. ಇನ್ನು ಕರ್ನಾಟಕದ ಆಟಗಾರ್ತಿಯರಾದ ವೇದಾ ಕೃಷ್ಣಮೂರ್ತಿ ಹಾಗೂ ರಾಜೇಶ್ವರಿ ಗಾಯಕ್ವಾಡ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಸ್ಪಿನ್ ಸ್ನೇಹಿ ಪಿಚ್ ಆಗಿರುವುದರಿಂದ ಭಾರತ ತಂಡವು ಮೂವರು ಸ್ಪಿನ್ನರ್ ಹಾಗೂ ಇಬ್ಬರು ವೇಗಿಗಳೊಂದಿಗೆ ಕಣಕ್ಕಿಳಿದಿದೆ. 

ತಂಡಗಳು ಹೀಗಿವೆ:

ಭಾರತ: 

ಆಸ್ಟ್ರೇಲಿಯಾ