ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೂರು ಬದಲಾವಣೆಗಳೊಂದಿಗೆ ಕಣಕ್ಕಿಳಿದಿರುವ ಆಸೀಸ್ ಸರಣಿ ಗೆಲ್ಲುವ ತವಕದಲ್ಲಿದ್ದರೆ, ಯಾವುದೇ ಬದಲಾವಣೆ ಇಲ್ಲದ ಟೀಂ ಇಂಡಿಯಾ ಸರಣಿ ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.
ಅಡಿಲೇಡ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ತಂಡದ ನಾಯಕ ಮಿಚೆಲ್ ಮಾರ್ಷ್ ಮತ್ತೊಮ್ಮೆ ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಆಸ್ಟ್ರೇಲಿಯಾ ತಂಡವು ಮೂರು ಮಹತ್ವದ ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಈಗಾಗಲೇ ಮೊದಲ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಆಸ್ಟ್ರೇಲಿಯಾ ತಂಡವು, ಎರಡನೇ ಪಂದ್ಯ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಳ್ಳಲು ಎದುರು ನೋಡುತ್ತಿದೆ. ಇನ್ನೊಂದೆಡೆ ಶುಭ್‌ಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ, ಈ ಪಂದ್ಯ ಗೆದ್ದು ಸರಣಿ ಜೀವಂತವಾಗಿಟ್ಟುಕೊಳ್ಳಲು ಕಾಯುತ್ತಿದೆ.
ಆಸೀಸ್ ತಂಡದಲ್ಲಿ ಮೂರು ಮೇಜರ್ ಚೇಂಜ್
ಹೌದು, ಆಸ್ಟ್ರೇಲಿಯಾ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದ್ದು, ಅಲೆಕ್ಸ್ ಕ್ಯಾರಿ, ಕ್ಸೇವಿಯರ್ ಬರ್ಟಲೆಟ್ ಹಾಗೂ ಆಡಂ ಜಂಪಾ ತಂಡ ಕೂಡಿಕೊಂಡಿದ್ದಾರೆ. ಹೀಗಾಗಿ ಜೋಶುವಾ ಫಿಲಿಪ್ಪಿ, ನೇಥನ್ ಎಲ್ಲೀಸ್ ಹಾಗೂ ಕನ್ಹೇಮನ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇನ್ನು ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇದೀಗ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯುತ್ತಿದೆ.
ಕುಲ್ದೀಪ್ ಯಾದವ್‌ಗೆ ಮತ್ತೆ ನಿರಾಸೆ:
ಆಸ್ಟ್ರೇಲಿಯಾ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳು ವಿಕೆಟ್ ಕಬಳಿಸಲು ಪರದಾಡಿದ್ದರು. ಹೀಗಾಗಿ ಒಳ್ಳೆಯ ಫಾರ್ಮ್‌ನಲ್ಲಿರುವ ತಂಡದಲ್ಲಿರುವ ತಜ್ಞ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಎರಡನೇ ಪಂದ್ಯದಲ್ಲಿ ಕಣಕ್ಕಿಳಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಇನ್ನು ಕಳೆದ ಪಂದ್ಯದಲ್ಲಿ ದುಬಾರಿಯಾಗಿದ್ದ ಹರ್ಷಿತ್ ರಾಣಾಗೆ ಮತ್ತೊಮ್ಮೆ ತಂಡದಲ್ಲಿ ಮಣೆ ಹಾಕಲಾಗಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ:
ಭಾರತ: ರೋಹಿತ್ ಶರ್ಮಾ, ಶುಭ್ ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಅಕ್ಷರ್ ಪಟೇಲ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಮೊಹಮ್ಮದ್ ಸಿರಾಜ್, ಅರ್ಶ್‌ದೀಪ್ ಸಿಂಗ್.
ಆಸ್ಟ್ರೇಲಿಯಾ: ಟ್ರ್ಯಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮ್ಯಾಟ್ ಶಾರ್ಟ್, ಮ್ಯಾಟ್ ರೆನ್‌ಶೋ, ಅಲೆಕ್ಸ್ ಕ್ಯಾರಿ, ಮಿಚ್ ಓವನ್, ಕೂಪರ್ ಕಾನೊಲಿ, ಮಿಚೆಲ್ ಸ್ಟಾರ್ಕ್, ಕ್ಸೇವಿಯರ್ ಬೆರ್ಟೆಲ್ಟ್, ಆಡಂ ಜಂಪಾ, ಜೋಶ್ ಹೇಜಲ್‌ವುಡ್.
ಪಂದ್ಯ ಆರಂಭ: ಬೆಳಗ್ಗೆ 9ಕ್ಕೆ, ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್/ಜಿಯೋ-ಹಾಟ್‌ಸ್ಟಾರ್
