* ಚೆನ್ನೈನಲ್ಲಿ ಭಾರತ-ಆಸ್ಟ್ರೇಲಿಯಾ ಮೂರನೇ ಏಕದಿನ ಪಂದ್ಯ* ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ* ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ 

ಚೆನ್ನೈ(ಮಾ.22): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. 3 ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸಿವೆ.

ಇಲ್ಲಿನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು ಮೂರು ಪ್ರಮುಖ ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ಮೊದಲೆರಡು ಪಂದ್ಯಗಳಲ್ಲಿ ಹೊರಗುಳಿದಿದ್ದ ಸ್ಪೋಟಕ ಆರಂಭಿಕ ಬ್ಯಾಟರ್ ಡೇವಿಡ್ ವಾರ್ನರ್ ತಂಡ ಕೂಡಿಕೊಂಡಿದ್ದಾರೆ. ಇನ್ನು ತಾರಾ ಆಲ್ರೌಂಡರ್ ಆಸ್ಟನ್ ಏಗರ್‌ ಕೂಡಾ ಮೊದಲ ಬಾರಿಗೆ ಈ ಸರಣಿಯಲ್ಲಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಅನಾರೋಗ್ಯದಿಂದಾಗಿ ಆಲ್ರೌಂಡರ್ ಕ್ಯಾಮರೋನ್ ಗ್ರೀನ್ ತಂಡಕ್ಕೆ ಅಲಭ್ಯರಾಗಿದ್ದಾರೆ. ಇನ್ನು ನೇಥನ್ ಎಲ್ಲಿಸ್‌ಗೆ ವಿಶ್ರಾಂತಿ ನೀಡಲಾಗಿದೆ. ಗ್ಲೆನ್‌ ಮ್ಯಾಕ್ಸ್‌ವೆಲ್ ಕೂಡಾ ಮೂರನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದು, ಶಾನ್ ಅಬ್ಬೋಟ್ ತಂಡ ಕೂಡಿಕೊಂಡಿದ್ದಾರೆ. ಇನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಯನ್ನು ಮಾಡಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದ ತಂಡವೇ ಇದೀಗ ನಿರ್ಣಾಯಕ ಏಕದಿನ ಪಂದ್ಯದಲ್ಲಿಯೂ ಕಣಕ್ಕಿಳಿದಿದೆ.

ಇಂದು ಇಂಡೋ-ಆಸೀಸ್ ನಿರ್ಣಾಯಕ ಏಕದಿನ ಪಂದ್ಯ: ನಂ.1 ಪಟ್ಟ ಉಳಿಸಿಕೊಳ್ಳುತ್ತಾ ಭಾರತ?

ಚೆಪಾಕ್‌ ಕ್ರೀಡಾಂಗಣ ದೊಡ್ಡ ಮೊತ್ತಕ್ಕೆ ಹೆಸರುವಾಸಿಯಲ್ಲ. ಅಲ್ಲದೇ ಇಲ್ಲಿ 2019ರ ಬಳಿಕ ಮೊದಲ ಬಾರಿಗೆ ಏಕದಿನ ಪಂದ್ಯ ನಡೆಯಲಿದೆ. ಈ ಅಂಶಗಳು ಪಂದ್ಯವನ್ನು ಮತ್ತಷ್ಟು ರೋಚಕಗೊಳಿಸುವ ನಿರೀಕ್ಷೆಯಿದೆ. ಜೊತೆಗೆ ಈ ಪಂದ್ಯದ ಫಲಿತಾಂಶ ಏಕದಿನ ರ‍್ಯಾಂಕಿಂಗ್‌ನಲ್ಲಿ ಅಗ್ರಸ್ಥಾನಿಯನ್ನು ನಿರ್ಧರಿಸಲಿದೆ.

Scroll to load tweet…

ಭಾರತ ತಂಡ ಆಗಸ್ಟ್‌ನಲ್ಲಿ ವಿಂಡೀಸ್‌ ಪ್ರವಾಸಕ್ಕೆ ತೆರಳುವವರೆಗೂ ಇನ್ನು ಏಕದಿನ ಪಂದ್ಯವನ್ನಾಡುವುದಿಲ್ಲ. ಅಲ್ಲದೇ ವಿಶ್ವಕಪ್‌ಗೂ ಮುನ್ನ ತವರಿನಲ್ಲಿ ಹೆಚ್ಚೆಂದರೆ ಇನ್ನು 3 ಪಂದ್ಯಗಳನ್ನಾಡಬಹುದು. ಹೀಗಾಗಿ ತಂಡ ಸಂಯೋಜನೆಯಲ್ಲಿ ಸಮತೋಲನ ಕಂಡುಕೊಳ್ಳಲು ಸಿಗುವ ಸೀಮಿತ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಟೀಂ ಇಂಡಿಯಾ ಸಜ್ಜಾಗಿದೆ. 

ತಂಡಗಳು ಹೀಗಿವೆ ನೋಡಿ

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್ ಗಿಲ್‌, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ ಎಲ್ ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಕುಲ್ದೀಪ್‌ ಯಾದವ್, ಮೊಹಮದ್‌ ಶಮಿ, ಮೊಹಮ್ಮದ್ ಸಿರಾಜ್‌.

ಆಸ್ಪ್ರೇಲಿಯಾ: ಡೇವಿಡ್ ವಾರ್ನರ್‌, ಟ್ರಾವಿಸ್ ಹೆಡ್‌, ಸ್ಟೀವ್ ಸ್ಮಿತ್‌(ನಾಯಕ), ಮಾರ್ನಸ್ ಲಬುಶೇನ್, ಮಿಚೆಲ್ ಮಾರ್ಶ್, ಅಲೆಕ್ಸ್‌ ಕೇರಿ, ಮಾರ್ಕಸ್ ಸ್ಟೋಯ್ನಿಸ್‌, ಆಸ್ಟನ್ ಏಗಾರ್‌, ಶಾನ್ ಅಬ್ಬೋಟ್, ಮಿಚೆಲ್ ಸ್ಟಾರ್ಕ್, ಆಡಂ ಜಂಪಾ.

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್