ನೀರಸ ಡ್ರಾನತ್ತ ಅಹಮದಾಬಾದ್ ಟೆಸ್ಟ್ ಪಂದ್ಯಕೊನೆಯ ದಿನದಾಟದ ಚಹಾ ವಿರಾಮದ ವೇಳೆಗೆ ಆಸೀಸ್ 67 ರನ್‌ಗಳ ಮುನ್ನಡೆಈಗಾಗಲೇ ಸರಣಿಯಲ್ಲಿ 2-1ರ ಮುನ್ನಡೆಯಲ್ಲಿರುವ ಟೀಂ ಇಂಡಿಯಾ
ಅಹಮದಾಬಾದ್(ಮಾ.13): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ನಾಲ್ಕನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಬ್ಯಾಟರ್‌ಗಳ ಪ್ರಾಬಲ್ಯ ಮತ್ತೆ ಮುಂದುವರೆದಿದೆ. ಅಹಮದಾಬಾದ್ ಟೆಸ್ಟ್ ಪಂದ್ಯದ ಕೊನೆಯ ದಿನದಾಟದ ಚಹಾ ವಿರಾಮದ ವೇಳೆಗೆ ಆಸ್ಟ್ರೇಲಿಯಾ ತಂಡವು ಎರಡನೇ ಇನಿಂಗ್ಸ್‌ನಲ್ಲಿ 2 ವಿಕೆಟ್ ಕಳೆದುಕೊಂಡು 158 ರನ್ ಬಾರಿಸಿದ್ದು, ಒಟ್ಟಾರೆ 67 ರನ್‌ಗಳ ಮುನ್ನಡೆ ಸಾಧಿಸಿದೆ. ಬಹುತೇಕ ಟೆಸ್ಟ್ ಡ್ರಾನಲ್ಲಿ ಅಂತ್ಯವಾಗುವ ಸಾಧ್ಯತೆ ನಿಚ್ಚಳವಾಗಿದೆ.
ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ 88 ರನ್‌ಗಳ ಇನಿಂಗ್ಸ್ ಹಿನ್ನಡೆಯೊಂದಿಗೆ ಕೊನೆಯ ದಿನದಾಟವನ್ನು ಆರಂಭಿಸಿದ ಆಸ್ಟ್ರೇಲಿಯಾ ತಂಡವು, ಆರಂಭದಲ್ಲೇ ನೈಟ್ ವಾಚ್‌ಮನ್ ಮ್ಯಾಥ್ಯೂ ಕುಹ್ನೆಮನ್ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಮಾರ್ನಸ್ ಲಬುಶೇನ್ ಹಾಗೂ ಟ್ರಾವಿಸ್ ಹೆಡ್ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಇನಿಂಗ್ಸ್ ಮುನ್ನಡೆ ಒದಗಿಸಿಕೊಡಲು ನೆರವಾದರು. ಎರಡನೇ ವಿಕೆಟ್‌ಗೆ ಈ ಜೋಡಿ 292 ಎಸೆತಗಳನ್ನು ಎದುರಿಸಿ 139 ರನ್‌ಗಳ ಜತೆಯಾಟವಾಡಿತು.
ಶತಕದ ಹೊಸ್ತಿಲಲ್ಲಿ ಮುಗ್ಗರಿಸಿದ ಟ್ರಾವಿಸ್ ಹೆಡ್: ಆಸ್ಟ್ರೇಲಿಯಾ ಪರ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆದಿರುವ ಆರಂಭಿಕ ಬ್ಯಾಟರ್ ಟ್ರಾವಿಸ್ ಹೆಡ್ ಮತ್ತೊಮ್ಮೆ ಆಕರ್ಷಕ ಅರ್ಧಶತಕ ಸಿಡಿಸಿ ತಂಡಕ್ಕೆ ಆಸರೆಯಾದರು. ಆದರೆ ಕೇವಲ 10 ರನ್ ಅಂತರದಲ್ಲಿ ಶತಕ ಸಿಡಿಸುವ ಅವಕಾಶವನ್ನು ಕೈಚೆಲ್ಲಿದರು. ಭಾರತೀಯ ಬೌಲರ್‌ಗಳನ್ನು ದಿಟ್ಟವಾಗಿಯೇ ಎದುರಿಸಿದ ಟ್ರಾವಿಸ್ ಹೆಡ್ 163 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ 90 ರನ್ ಬಾರಿಸಿ ಅಕ್ಷರ್ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.
ರೋಚಕವಾಗಿ ಲಂಕಾ ಮಣಿಸಿದ ಕಿವೀಸ್, ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ ಸಲೀಸು..!
ಲಯಕ್ಕೆ ಮರಳಿದ ಮಾರ್ನಸ್ ಲಬುಶೇನ್: ಟೆಸ್ಟ್ ನಂ.1 ಬ್ಯಾಟರ್ ಮಾರ್ನಸ್ ಲಬುಶೇನ್, ಭಾರತ ಎದುರಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಫಾರ್ಮ್‌ಗೆ ಮರಳುವಲ್ಲಿ ಯಶಸ್ವಿಯಾದರು. 150 ಎಸೆತಗಳನ್ನು ಎದುರಿಸಿದ ಲಬುಶೇನ್ ಈ ಸರಣಿಯಲ್ಲಿ ಮೊದಲ ಹಾಗೂ ಟೆಸ್ಟ್ ವೃತ್ತಿಜೀವನದ 15ನೇ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. ಸದ್ಯ ಮಾರ್ನಸ್ ಲಬುಶೇನ್ 174 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 56 ರನ್ ಬಾರಿಸಿ ಅಜೇಯರಾಗಿದ್ದರೆ, ಸ್ಟೀವ್ ಸ್ಮಿತ್ ಖಾತೆ ತೆರೆಯುವ ವಿಶ್ವಾಸದಲ್ಲಿದ್ದಾರೆ.
