Ind vs Aus: ಭಾರತ ಎದುರು ಟಾಸ್ ಗೆದ್ದ ಆಸೀಸ್ ಬ್ಯಾಟಿಂಗ್ ಆಯ್ಕೆ, ಉಭಯ ತಂಡದಲ್ಲೂ ಮೇಜರ್ ಚೇಂಜ್
ವಿಶ್ವಕಪ್ ಟೂರ್ನಿಗೂ ಮುನ್ನ ಉಭಯ ತಂಡಗಳು ಆಡುತ್ತಿರುವ ಕೊನೆಯ ಅಂತಾರಾಷ್ಟ್ರೀಯ ಏಕದಿನ ಪಂದ್ಯ ಇದಾಗಿದ್ದು, ನಿರೀಕ್ಷೆಯಂತೆಯೇ ಎರಡೂ ತಂಡಗಳಲ್ಲೂ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಮೊದಲೆರಡು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಕುಲ್ದೀಪ್ ಯಾದವ್ ತಂಡ ಕೂಡಿಕೊಂಡಿದ್ದಾರೆ.
ರಾಜ್‌ಕೋಟ್(ಸೆ.27): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈಗಾಗಲೇ ಮೊದಲೆರಡು ಪಂದ್ಯ ಗೆದ್ದ ಏಕದಿನ ಸರಣಿಯನ್ನು ಕೈವಶ ಮಾಡಿಕೊಂಡಿರುವ ಭಾರತ, ಇದೀಗ ಕಾಂಗರೂ ಪಡೆ ಎದುರು ಮೊದಲ ಬಾರಿಗೆ ಏಕದಿನ ಸರಣಿಯನ್ನು ವೈಟ್‌ವಾಷ್ ಮಾಡಲು ಎದುರು ನೋಡುತ್ತಿದೆ
ವಿಶ್ವಕಪ್ ಟೂರ್ನಿಗೂ ಮುನ್ನ ಉಭಯ ತಂಡಗಳು ಆಡುತ್ತಿರುವ ಕೊನೆಯ ಅಂತಾರಾಷ್ಟ್ರೀಯ ಏಕದಿನ ಪಂದ್ಯ ಇದಾಗಿದ್ದು, ನಿರೀಕ್ಷೆಯಂತೆಯೇ ಎರಡೂ ತಂಡಗಳಲ್ಲೂ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಮೊದಲೆರಡು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಕುಲ್ದೀಪ್ ಯಾದವ್ ತಂಡ ಕೂಡಿಕೊಂಡಿದ್ದಾರೆ. ಇನ್ನು ಇಂಟ್ರೆಸ್ಟಿಂಗ್ ಸಂಗತಿಯೆಂದರೆ ಕೊನೆಯ ಏಕದಿನ ಪಂದ್ಯದಿಂದ ಅನುಭವಿ ಆಫ್‌ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಹೊರಬಿದ್ದಿದ್ದಾರೆ. ತಮಿಳುನಾಡು ಮೂಲದ ಸ್ಪಿನ್ನರ್ ವಾಷಿಂಗ್ಟನ್ ಸುಂದರ್ ತಂಡ ಕೂಡಿಕೊಂಡಿದ್ದಾರೆ. ಇಶಾನ್ ಕಿಶನ್ ವೈರಲ್ ಫೀವರ್‌ನಿಂದ ಬಳಲುತ್ತಿದ್ದು ಕೊನೆಯ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
Ind vs Aus: ಟೀಂ ಇಂಡಿಯಾಕ್ಕೆ ಐತಿಹಾಸಿಕ ಕ್ಲೀನ್ ಸ್ವೀಪ್ ಗುರಿ..!
ಇನ್ನು ಅಸ್ಟ್ರೇಲಿಯಾ ಕ್ರಿಕೆಟ್ ತಂಡದಲ್ಲೂ ಕೆಲವು ಬದಲಾವಣೆಗಳಾಗಿದ್ದು, ಪ್ಯಾಟ್ ಕಮಿನ್ಸ್ ನಾಯಕನಾಗಿ ತಂಡಕ್ಕೆ ವಾಪಸ್ಸಾಗಿದ್ದಾರೆ. ಆಸ್ಟ್ರೇಲಿಯಾ ತಂಡದಲ್ಲಿ 5 ಬದಲಾವಣೆ ಮಾಡಲಾಗಿದೆ. ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಆಡಂ ಜಂಪಾ ಹೊರಬಿದ್ದಿದ್ದು, ತನ್ವೀರ್ ಸಂಗಾ ತಂಡ ಕೂಡಿಕೊಂಡಿದ್ದಾರೆ. ಇನ್ನುಳಿದಂತೆ ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್ ಹಾಗೂ ಮಿಚೆಲ್ ಸ್ಟಾರ್ಕ್ ತಂಡ ಕೂಡಿಕೊಂಡಿದ್ದಾರೆ.
ದಾಖಲೆ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಏಕದಿನ ಸರಣಿ ಕ್ಲೀನ್ ಸ್ವೀಪ್ ಮಾಡಲು ಟೀಂ ಇಂಡಿಯಾ ಎದುರು ನೋಡುತ್ತಿದೆ. ಈ ವರೆಗೂ ಆಸ್ಟ್ರೇಲಿಯಾ ವಿರುದ್ಧ ಭಾರತ, ಭಾರತ ವಿರುದ್ಧ ಆಸ್ಟ್ರೇಲಿಯಾ ಏಕದಿನದಲ್ಲಿ ಸರಣಿ ಕ್ಲೀನ್ ಸ್ವೀಪ್ ಮಾಡಿಲ್ಲ. ಪ್ರಚಂಡ ಲಯದಲ್ಲಿರುವ ಭಾರತಕ್ಕೆ ಆ ಅವಕಾಶವಿದ್ದು, ಅದರ ಸಂಪೂರ್ಣ ಬಳಕೆ ಮಾಡಿಕೊಳ್ಳಲು ಕಾಯುತ್ತಿದೆ.
ತಂಡಗಳು ಹೀಗಿವೆ ನೋಡಿ:
ಭಾರತ:
ರೋಹಿತ್ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ:
ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಅಲೆಕ್ಸ್ ಕ್ಯಾರಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮರೋನ್ ಗ್ರೀನ್, ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್(ನಾಯಕ), ತನ್ವೀರ್ ಸಂಗಾ, ಜೋಶ್ ಹೇಜಲ್‌ವುಡ್.
ಪಿಚ್ ರಿಪೋರ್ಟ್:
ರಾಜ್‌ಕೋಟ್ ಪಿಚ್ ಅನ್ನು ಸದಾ ಹೈವೇಗೆ ಹೋಲಿಸಲಾಗುತ್ತದೆ. ಹೀಗಾಗಿ ಮತ್ತೊಮ್ಮೆ ಬೃಹತ್ ಮೊತ್ತ ದಾಖಲಾಗಬಹುದು. ಇಲ್ಲಿ ಈವರೆಗೂ ನಡೆದಿರುವ 3 ಏಕದಿನ ಪಂದ್ಯಗಳ 4 ಇನಿಂಗ್ಸ್‌ಗಳಲ್ಲಿ 300+ ರನ್ ದಾಖಲಾಗಿದೆ.
ಪಂದ್ಯ ಆರಂಭ: 1.30ಕ್ಕೆ
ನೇರ ಪ್ರಸಾರ: ಸ್ಪೋರ್ಟ್ಸ್ 18, ಜಿಯೋ ಸಿನಿಮಾ.