Asianet Suvarna News Asianet Suvarna News

IND vs AUS ಭಾರತ ಹಾಗೂ ಆಸ್ಟ್ರೇಲಿಯಾ 2ನೇ T20 ಪಂದ್ಯದ ಟಾಸ್ ವಿಳಂಬ!

ನಿನ್ನೆ ರಾತ್ರಿ ಸುರಿದ ಮಳೆಯಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಟಿ20 ಪಂದ್ಯಕ್ಕೆ ಅಡ್ಡಿಯಾಗಿದೆ. ಕ್ರೀಡಾಂಗಣ ಒದ್ದೆಯಾಗಿರುವ ಕಾರಣ ದ್ವಿತೀಯ ಪಂದ್ಯದ ಟಾಸ್ ವಿಳಂಬವಾಗಿದೆ. 

IND vs AUS India vs Australia 2nd t20 match Toss delayed due to wet outfield nagpur ckm
Author
First Published Sep 23, 2022, 7:08 PM IST

ನಾಗ್ಪುರ(ಸೆ.23):  ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 2ನೇ ಟಿ20 ಪಂದ್ಯ ಅತ್ಯಂತ ಮಹತ್ವದ ಪಂದ್ಯ. ಕಾರಣ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಮುಗ್ಗರಿಸಿದೆ. ಹೀಗಾಗಿ ಸರಣಿ ಉಳಿಸಿಕೊಳ್ಳಲು ಈ ಪಂದ್ಯದಲ್ಲಿ ಭಾರತ ಗೆಲ್ಲಲಬೇಕು. ಆದರೆ ಮಹತ್ವದ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದ ಕ್ರೀಡಾಂಗಣ ಒದ್ದೆಯಾಗಿದೆ. ಸಿಬ್ಬಂದಿಗಳು ಮೈದಾನ ಸಜ್ಜುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಟಾಸ್ ವಿಳಂಬವಾಗಿದೆ . 7 ಗಂಟೆಗೆ ಅಂಪೈರ್ ಹಾಗೂ ಮ್ಯಾಚ್ ರೆಫ್ರಿ ಮೈದಾನ ಪರೀಶಿಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಪಂದ್ಯ ಆರಂಭಗೊಳ್ಳುವ ಸಾಧ್ಯತೆ ಇದೆ.

ಟಿ20 ವಿಶ್ವಕಪ್ ಟೂರ್ನಿಗೂ(T20 World Cup 2022) ಮುನ್ನ ಭಾರತ ಹಾಗೂ ಆಸ್ಟ್ರೇಲಿಯಾ(India vs Australia) ನಡುವಿನ ದ್ವಿಪಕ್ಷೀಯ ಸರಣಿ ಅತ್ಯಂತ ಮಹತ್ವದ್ದಾಗಿದೆ. ಈಗಾಗಲೇ ಏಷ್ಯಾಕಪ್ ಟೂರ್ನಿಯಲ್ಲಿ(Asia Cup 2022) ನಿರಾಸೆ ಅನುಭವಿಸಿರುವ ಟೀಂ ಇಂಡಿಯಾ(Team India) ಟಿ20 ವಿಶ್ವಕಪ್ ಟ್ರೋಫಿ ಗೆಲುವಿನ ಲೆಕ್ಕಾಚಾರದಲ್ಲಿದೆ. ಇದಕ್ಕಾಗಿ ಬಿಡುವಿಲ್ಲದ ಸರಣಿ ಆಡುತ್ತಿದೆ. ಈ ಮೂಲಕ ಟಿ20 ವಿಶ್ವಕಪ್ ಟೂರ್ನಿಗೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದೆ. ಆದರೆ ಈ ದ್ವಿಪಕ್ಷೀಯ ಸರಣಿಯಲ್ಲಿ ಭಾರತ ಹಿನ್ನಡೆ ಅನುಭವಿಸಿದೆ. 

ಆಸೀಸ್ ಎದುರಿನ ಎರಡನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ 3 ಮಹತ್ವದ ಬದಲಾವಣೆ..?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ 3 ಟಿ20 ಪಂದ್ಯದ ಸರಣಿಯಲ್ಲಿ(Cricket Series) ಭಾರತ ಮೊದಲ ಪಂದ್ಯ ಕೈಚೆಲ್ಲಿದೆ. ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 208 ರನ್ ಸಿಡಿಸಿ ಅಬ್ಬರಿಸಿತ್ತು. ಆದರೆ ಗೆಲುವು ಮಾತ್ರ ಸಿಗಲಿಲ್ಲ. ಟಿ20 ವಿಶ್ವಕಪ್‌ಗೆ ಒಂದು ತಿಂಗಳಷ್ಟೇ ಬಾಕಿ ಇದ್ದರೂ ಭಾರತದ ಬೌಲಿಂಗ್‌ ಸಮಸ್ಯೆಗೆ ಪರಿಹಾರ ಸಿಗುತ್ತಿಲ್ಲ. ಆಸ್ಪ್ರೇಲಿಯಾ ವಿರುದ್ಧ ಮಂಗಳವಾರ ನಡೆದ ಮೊದಲ ಟಿ20 ಪಂದ್ಯದಲ್ಲಿ ದೊಡ್ಡ ಮೊತ್ತ ಕಲೆಹಾಕಿದ ಹೊರತಾಗಿಯೂ ಕಳಪೆ ಬೌಲಿಂಗ್‌ನ ಪರಿಣಾಮ ಭಾರತ 5 ವಿಕೆಟ್‌ ಸೋಲು ಅನುಭವಿಸಿತು. 3 ಪಂದ್ಯಗಳ ಸರಣಿಯಲ್ಲಿ ಆಸ್ಪ್ರೇಲಿಯಾ 1-0 ಮುನ್ನಡೆ ಪಡೆಯಿತು. ಮೊದಲು ಬ್ಯಾಟ್‌ ಮಾಡಿ 20 ಓವರಲ್ಲಿ 6 ವಿಕೆಟ್‌ ನಷ್ಟಕ್ಕೆ 208 ರನ್‌ ಗಳಿಸಿದ ಭಾರತ, ಆಸ್ಪ್ರೇಲಿಯಾ ಬ್ಯಾಟರ್‌ಗಳ ಅಬ್ಬರವನ್ನು ನಿಯಂತ್ರಿಸುವಲ್ಲಿ ವಿಫಲವಾಯಿತು. ನಿರಂತರವಾಗಿ ಭಾರತೀಯ ಬೌಲರ್‌ಗಳ ಮೇಲೆ ಒತ್ತಡ ಹಾಕಿದ ಆಸೀಸ್‌ 00.0 ಓವರಲ್ಲಿ 5 ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು.

ಮೂರನೇ ಪಂದ್ಯದ ಟಿಕೆಟ್‌ ಖರೀದಿಸಿಲು ಹೈದರಾಬಾದ್‌ನಲ್ಲಿ ನೂಕು ನುಗ್ಗಲು..! ಲಾಠಿ ಚಾರ್ಜ್‌

ಎರಡನೇ ಟಿ20 ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಪಂದ್ಯ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಓವರ್ ಕಡಿತಗೊಳ್ಳುವ ಸಾಧ್ಯತೆಗಳಿವೆ. ಹೀಗಾದಲ್ಲಿ ಟೀಂ ಇಂಡಿಯಾಗೆ ಈ ಪಂದ್ಯ ಮತ್ತಷ್ಟು ಕಠಿಣವಾಗಲಿದೆ. ಇಷ್ಟೇ ಅಲ್ಲ ಈ ಪಂದ್ಯದಲ್ಲಿ ಟಾಸ್ ಪ್ರಮುಖ ಪಾತ್ರ ನಿರ್ವಹಿಸಲಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕೆಲ ಬದಲಾವಣೆಗಳನ್ನು ಮಾಡುವ ಸಾಧ್ಯತೆ ಗಳಿವೆ. ಈ ಮೂಲಕ ಭರ್ಜರಿಯಾಗಿ ಕಮ್‌ಬ್ಯಾಕ್ ಮಾಡಲು ಟೀಂ ಇಂಡಿಯಾ ಪ್ಲಾನ್ ಮಾಡಿಕೊಂಡಿದೆ. ಆದರೆ ಟೀಂ ಇಂಡಿಯಾ ಬೌಲಿಂಗ್ ಸಮಸ್ಯೆ ಇದೀಗ ತಲೆನೋವಾಗಿ ಪರಿಣಮಿಸಿದೆ.

Follow Us:
Download App:
  • android
  • ios