ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐಎಸ್ ಬಿಂದ್ರಾ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಹಲವು ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಿರುವುದರಿಂದ ಏಷ್ಯಾಕಪ್ ಫೈನಲ್ ಆಡಿದ ಪಂದ್ಯಕ್ಕೆ ಹೋಲಿಸಿದರೆ, ಭಾರತ ತಂಡದಲ್ಲಿ 5 ಬದಲಾವಣೆ ಮಾಡಲಾಗಿದೆ.

ಮೊಹಾಲಿ(ಸೆ.22): ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಇಲ್ಲಿನ ಐಎಸ್ ಬಿಂದ್ರಾ ಮೈದಾನ ಆತಿಥ್ಯವನ್ನು ವಹಿಸಿದೆ. ನಿರೀಕ್ಷೆಯಂತೆಯೇ ಹಲವು ಕ್ರಿಕೆಟಿಗರಿಗೆ ವಿಶ್ರಾಂತಿ ನೀಡಿರುವುದರಿಂದ ಏಷ್ಯಾಕಪ್ ಫೈನಲ್ ಆಡಿದ ಪಂದ್ಯಕ್ಕೆ ಹೋಲಿಸಿದರೆ, ಭಾರತ ತಂಡದಲ್ಲಿ 5 ಬದಲಾವಣೆ ಮಾಡಲಾಗಿದೆ. ನಿರೀಕ್ಷೆಯಂತೆಯೇ ರವಿಚಂದ್ರನ್ ಅಶ್ವಿನ್, ಆಡುವ ಹನ್ನೊಂದರ ಬಳಗ ಕೂಡಿಕೊಂಡಿದ್ದಾರೆ. ಇನ್ನುಳಿದಂತೆ ಮೊಹಮ್ಮದ್ ಶಮಿ, ಸೂರ್ಯಕುಮಾರ್ ಯಾದವ್, ರುತುರಾಜ್ ಗಾಯಕ್ವಾಡ್‌ ಹಾಗೂ ಶ್ರೇಯಸ್ ಅಯ್ಯರ್ ತಂಡಕ್ಕೆ ಕಮ್‌ಬ್ಯಾಕ್ ಮಾಡಿದ್ದಾರೆ.

ನಾಯಕ ಧೋನಿ ಜತೆಗಿನ ವಾಗ್ವಾದದ ಬಗ್ಗೆ ಮೊದಲ ಬಾರಿ ತುಟಿಬಿಟ್ಟಿದ ಎರಡು ವಿಶ್ವಕಪ್ ವಿಜೇತ ತಂಡದ ವೇಗಿ..!

ತಂಡಗಳು ಹೀಗಿವೆ:

ಭಾರತ: ಇಶಾನ್ ಕಿಶನ್‌, ಶುಭ್‌ಮನ್ ಗಿಲ್‌, ಶ್ರೇಯಸ್‌ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ ಎಲ್ ರಾಹುಲ್‌(ನಾಯಕ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್‌, ಮೊಹಮ್ಮದ್ ಶಮಿ, ಶಾರ್ದೂಲ್‌ ಠಾಕೂರ್, ಜಸ್ಪ್ರೀತ್ ಬೂಮ್ರಾ.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್‌, ಮಿಚೆಲ್ ಮಾರ್ಷ್‌, ಸ್ಟೀವ್ ಸ್ಮಿತ್‌, ಮಾರ್ನಸ್ ಲಬುಶೇನ್‌, ಜೋಶ್ ಇಂಗ್ಲಿಶ್, ಕ್ಯಾಮರೋನ್ ಗ್ರೀನ್‌, ಮಾರ್ಕಸ್ ಸ್ಟೋಯ್ನಿಸ್‌, ಪ್ಯಾಟ್ ಕಮಿನ್ಸ್‌, ಮ್ಯಾಥ್ಯೂ ಶಾರ್ಟ್, ಆಡಂ ಜಂಪಾ, ಶಾನ್ ಅಬ್ಬೋಟ್.

ಪಂದ್ಯ ಆರಂಭ: ಮಧ್ಯಾಹ್ನ 1.30ಕ್ಕೆ
ನೇರ ಪ್ರಸಾರ: ಸ್ಟೋರ್ಟ್ಸ್‌ 18, ಜಿಯೋ ಸಿನಿಮಾ

ಅಗ್ರಸ್ಥಾನಕ್ಕಾಗಿ ಸೆಣಸಾಟ!

3 ಪಂದ್ಯಗಳ ಸರಣಿ ಏಕದಿನ ವಿಶ್ವಕಪ್‌ಗೆ ನಂ.1 ತಂಡವಾಗಿ ಕಾಲಿಡುವವರು ಯಾರು ಎನ್ನುವುದನ್ನು ನಿರ್ಧರಿಸಲಿದೆ. ಭಾರತ ಮೊದಲ ಪಂದ್ಯ ಗೆದ್ದರೆ ವಿಶ್ವ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದು, ಅಗ್ರಸ್ಥಾನ ಉಳಿಸಿಕೊಳ್ಳಲು ಸರಣಿ ಗೆಲ್ಲಬೇಕಾಗುತ್ತದೆ. ಒಂದು ವೇಳೆ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆದ್ದರೆ, ಆಗ ಭಾರತ 3ನೇ ಸ್ಥಾನಕ್ಕೆ ಕುಸಿಯಲಿದ್ದು, ಆಸೀಸ್‌ 2ನೇ ಸ್ಥಾನಕ್ಕೇರಲಿದೆ. ಆಗ ಭಾರತ ಉಳಿದೆರಡು ಪಂದ್ಯಗಳನ್ನು ಗೆದ್ದು ನಂ.1 ಸ್ಥಾನಕ್ಕೇರಬಹುದು.

ಸದ್ಯ 115 ರೇಟಿಂಗ್‌ ಅಂಕ ಹೊಂದಿರುವ ಪಾಕಿಸ್ತಾನ ರ್‍ಯಾಂಕಿಂಗ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಅಷ್ಟೇ ಅಂಕಗಳನ್ನು ಹೊಂದಿರುವ ಭಾರತ 2ನೇ ಸ್ಥಾನದಲ್ಲಿದ್ದರೆ, 113 ಅಂಕಗಳೊಂದಿಗೆ ಆಸ್ಟ್ರೇಲಿಯಾ 3ನೇ ಸ್ಥಾನದಲ್ಲಿದೆ.