Asianet Suvarna News Asianet Suvarna News

Ind vs Ban: ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ, ಭಾರತ ಪರ ಕುಲ್ದೀಪ್ ಸೆನ್‌ ಪಾದಾರ್ಪಣೆ

ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಆಯ್ಕೆ
ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಪಂದ್ಯಕ್ಕೆ ಢಾಕಾ ಮೈದಾನ ಆತಿಥ್ಯ
ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ ಕುಲ್ದೀಪ್ ಸೆನ್

Ind vs Ban 1st ODI Bangladesh win the toss and chose to Bowl first against India kvn
Author
First Published Dec 4, 2022, 11:08 AM IST

ಢಾಕಾ(ಜ.04): ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡದ ನಾಯಕ ಲಿಟನ್ ದಾಸ್ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಪಂದ್ಯಕ್ಕೆ ಇಲ್ಲಿ  ಬಾಂಗ್ಲಾ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವನ್ನು ವಹಿಸಿದೆ.

ಬಾಂಗ್ಲಾದೇಶ ತಂಡವನ್ನು ಮುನ್ನಡೆಸುತ್ತಿರುವ ಲಿಟನ್ ದಾಸ್ ಐವರು ಬ್ಯಾಟರ್‌ಗಳು ಮೂವರು ವೇಗಿಗಳು ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿದಿದೆ.  ಇನ್ನು ಭಾರತ ತಂಡದ ಪರ ಯುವ ವೇಗಿ ಕುಲ್ದೀಪ್ ಸೆನ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಭಾರತ ತಂಡವು ನಾಲ್ಕು ಆಲ್ರೌಂಡರ್‌ಗಳೊಂದಿಗೆ ಕಣಕ್ಕಿಳಿದಿದೆ. 

ಕಳೆದ ತಿಂಗಳಷ್ಟೇ ಮುಕ್ತಾಯವಾದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಬಳಿಕ ಹಿರಿಯ ಆಟಗಾರರಾದ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ ಎಲ್ ರಾಹುಲ್ ವಿಶ್ರಾಂತಿಗೆ ಜಾರಿದ್ದರು. ಹೀಗಾಗಿ ನ್ಯೂಜಿಲೆಂಡ್ ಎದುರಿನ ಸರಣಿಯಿಂದ ಈ ಆಟಗಾರರು ಹೊರಗುಳಿದಿದ್ದರು. ಇದೀಗ ಈ ಎಲ್ಲಾ ಆಟಗಾರರು ಭಾರತ ತಂಡ ಕೂಡಿಕೊಂಡಿದ್ದು, ಬಾಂಗ್ಲಾದೇಶ ಎದುರಿನ ಸರಣಿಯಲ್ಲಿ ಮಿಂಚಲು ಸಜ್ಜಾಗಿದ್ದಾರೆ. 

Ind vs Ban ಇಂದು ಭಾರತ-ಬಾಂಗ್ಲಾದೇಶ ಮೊದಲ ಏಕದಿನ ಕದನ, ಶುಭಾರಂಭದ ನಿರೀಕ್ಷೆಯಲ್ಲಿ ರೋಹಿತ್ ಪಡೆ

ಶಿಖರ್ ಧವನ್ ಹಾಗೂ ರೋಹಿತ್ ಶರ್ಮಾ ಭಾರತ ಪರ ಇನಿಂಗ್ಸ್ ಆರಂಭಿಸಿದರೆ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕೆ ಎಲ್ ರಾಹುಲ್ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಜವಾಬ್ದಾರಿ ಹೊಂದಿದ್ದಾರೆ. ಇನ್ನು ಆಲ್ರೌಂಡರ್‌ಗಳ ರೂಪದಲ್ಲಿ ಶಹಜಾಬ್ ಅಹಮ್ಮದ್, ಶಾದೂರ್ಲ್ ಠಾಕೂರ್, ದೀಪಕ್ ಚಹರ್ ಹಾಗೂ ವಾಷಿಂಗ್ಟನ್ ಸುಂದರ್ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಕುಲ್ದೀಪ್ ಸೆನ್, ಮೊಹಮ್ಮದ್ ಸಿರಾಜ್  ತಜ್ಞ ವೇಗಿಗಳ ರೂಪದಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. 

ಅಕ್ಷರ್ ಪಟೇಲ್ ಅಲಭ್ಯ, ಪಂತ್ ಏಕದಿನ ಸರಣಿಯಿಂದ ಔಟ್: ಸ್ಟಾರ್ ಆಲ್ರೌಂಡರ್ ಅಕ್ಷರ್ ಪಟೇಲ್ ಗಾಯದ ಸಮಸ್ಯೆಯಿಂದಾಗಿ ಮೊದಲ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇನ್ನು ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಅವರನ್ನು ಏಕದಿನ ಸರಣಿಯಿಂದ ಕೈಬಿಡಲಾಗಿದ್ದು, ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಕೂಡಿಕೊಳ್ಳಲಿದ್ದಾರೆ. ಇದೀಗ ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಕೆ ಎಲ್ ರಾಹುಲ್ ವಿಕೆಟ್ ಕೀಪರ್ ಪಾತ್ರವನ್ನು ನಿಭಾಯಿಸಲಿದ್ದಾರೆ.

ತಂಡಗಳು ಹೀಗಿವೆ ನೋಡಿ

ಭಾರತ: ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ ಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಶಾಬಾಜ್ ಅಹಮ್ಮದ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಮೊಹಮ್ಮದ್ ಸಿರಾಜ್, ಕುಲ್ದೀಪ್ ಸೆನ್

ಬಾಂಗ್ಲಾದೇಶ: ನಜ್ಮುಲ್ ಹೊಸೈನ್ ಶಾಂಟೋ, ಲಿಟನ್ ದಾಸ್(ನಾಯಕ), ಅನಮುಲ್ ಹಕ್, ಶಕೀಬ್ ಅಲ್ ಹಸನ್, ಮುಷ್ಫಿಕುರ್ ರೆಹಮಾನ್(ವಿಕೆಟ್ ಕೀಪರ್), ಮೊಹಮದುಲ್ಲಾ, ಅಫಿಫ್ ಹೊಸೈನ್, ಮೆಹದಿ ಹಸನ್, ಹಸನ್ ಮಹಮೂದ್, ಎಬೊದತ್ ಹೊಸೈನ್, ಮುಷ್ತಾಫಿಜುರ್ ರೆಹಮಾನ್.

ಪಂದ್ಯ: ಬೆಳಗ್ಗೆ 11.30ಕ್ಕೆ
ಪ್ರಸಾರ: ಸೋನಿ ಸ್ಪೋರ್ಟ್ಸ್

Follow Us:
Download App:
  • android
  • ios