Asianet Suvarna News Asianet Suvarna News

Ind vs Ban: ಕೆ ಎಲ್ ರಾಹುಲ್ ಮತ್ತೆ ಫೇಲ್‌, ಶತಕದತ್ತ ಶುಭ್‌ಮನ್ ಗಿಲ್‌ ದಾಪುಗಾಲು..!

ಎರಡನೇ ಇನಿಂಗ್ಸ್‌ನಲ್ಲೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಕೆ ಎಲ್ ರಾಹುಲ್‌
ಅಜೇಯ 80 ರನ್ ಬಾರಿಸಿ ಶತಕದತ್ತ ಕೆ ಎಲ್ ರಾಹುಲ್ ದಾಪುಗಾಲು
ಚಹಾ ವಿರಾಮದ ವೇಳೆಗೆ 394 ರನ್ ಮುನ್ನಡೆ ಸಾಧಿಸಿದ ಟೀಂ ಇಂಡಿಯಾ

Ind vs Ban KL Rahul fail again and Shubman Gill Nears Ton kvn
Author
First Published Dec 16, 2022, 1:54 PM IST

ಚಿತ್ತಗಾಂಗ್(ಡಿ.16): ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಪಂದ್ಯದ ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ ಬಿಗಿಹಿಡಿತ ಮತ್ತಷ್ಟು ಬಲವಾಗಿದೆ. ನಾಯಕ ಕೆ ಎಲ್ ರಾಹುಲ್ ಎರಡನೇ ಇನಿಂಗ್ಸ್‌ನಲ್ಲಿಯೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ಮೂರನೇ ದಿನದಾಟದ ಚಹಾ ವಿರಾಮದ ವೇಳೆಗೆ ಟೀಂ ಇಂಡಿಯಾ ಎರಡನೇ ಇನಿಂಗ್ಸ್‌ನಲ್ಲಿ ಕೇವಲ ಒಂದು ವಿಕೆಟ್‌ ಕಳೆದುಕೊಂಡು 140 ರನ್ ಬಾರಿಸಿದ್ದು, ಒಟ್ಟಾರೆ 394 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿದೆ. 

ಮೊದಲ ಇನಿಂಗ್ಸ್‌ನಲ್ಲಿ 254 ರನ್‌ಗಳ ಬೃಹತ್ ಮುನ್ನಡೆಯೊಂದಿಗೆ ಎರಡನೇ ಇನಿಂಗ್ಸ್‌ ಆರಂಭಿಸಿದ ಟೀಂ ಇಂಡಿಯಾ, ಎಚ್ಚರಿಕೆಯ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್‌ಗೆ ಕೆ ಎಲ್ ರಾಹುಲ್ ಹಾಗೂ ಶುಭ್‌ಮನ್ ಗಿಲ್ 70 ರನ್‌ಗಳ ಜತೆಯಾಟ ಒದಗಿಸಿಕೊಟ್ಟರು. ನಾಯಕ ಕೆ ಎಲ್ ರಾಹುಲ್‌ 63 ಎಸೆತಗಳನ್ನು ಎದುರಿಸಿ 3 ಬೌಂಡರಿ ಸಹಿತ 23 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು. ತಮಗೆ ಸಿಕ್ಕ ಉತ್ತಮ ಆರಂಭವನ್ನು ದೊಡ್ಡ ಮೊತ್ತವನ್ನಾಗಿ ಪರಿವರ್ತಿಸಲು ರಾಹುಲ್ ಮತ್ತೊಮ್ಮೆ ವಿಫಲವಾದರು. ಮೊದಲ ಇನಿಂಗ್ಸ್‌ನಲ್ಲಿ 22 ರನ್‌ ಬಾರಿಸಿ ವಿಕೆಟ್ ಒಪ್ಪಿಸಿದ್ದ ಕೆ ಎಲ್ ರಾಹುಲ್‌, ಎರಡನೇ ಇನಿಂಗ್ಸ್‌ನಲ್ಲಿ 23 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು.

ಶುಭ್‌ಮನ್‌ ಗಿಲ್‌ ಆಕರ್ಷಕ ಫಿಫ್ಟಿ: ಇನ್ನು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಆರಂಭಿಕನಾಗಿ ತಂಡದಲ್ಲಿ ಸ್ಥಾನ ಪಡೆದ ಪ್ರತಿಭಾನ್ವಿತ ಬ್ಯಾಟರ್‌ ಶುಭ್‌ಮನ್‌ ಗಿಲ್, ಎರಡನೇ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಸಿಡಿಸುವ ಮೂಲಕ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮೊದಲ ಇನಿಂಗ್ಸ್‌ನಲ್ಲಿ ಕೇವಲ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದ್ದ ಶುಭ್‌ಮನ್‌ ಗಿಲ್‌, ಎರಡನೇ ಇನಿಂಗ್ಸ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ. ಗಿಲ್‌ 84 ಎಸೆತಗಳನ್ನು ಎದುರಿಸಿ ವೃತ್ತಿಜೀವನದ 5ನೇ ಅರ್ಧಶತಕ ಬಾರಿಸಿ ಸಂಭ್ರಮಿಸಿದರು. ಇದೀಗ ಶುಭ್‌ಮನ್‌ ಗಿಲ್‌ ಶತಕದತ್ತ ದಾಪುಗಾಲಿಡುತ್ತಿದ್ದಾರೆ. ಸದ್ಯ ಶುಭ್‌ಮನ್‌ ಗಿಲ್‌ 120 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 80 ರನ್ ಬಾರಿಸಿದ್ದಾರೆ.

Ind vs Ban: ಟೀಂ ಇಂಡಿಯಾ ಬಿಗಿ ಹಿಡಿತದಲ್ಲಿ ಬಾಂಗ್ಲಾದೇಶ

ಇನ್ನು ಶುಭ್‌ಮನ್‌ ಗಿಲ್‌ಗೆ ಅತ್ಯುತ್ತಮ ಸಾಥ್ ನೀಡಿರುವ ಚೇತೇಶ್ವರ್ ಪೂಜಾರ 55 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ 33 ರನ್‌ ಬಾರಿಸಿದ್ದಾರೆ. ಎರಡನೇ ವಿಕೆಟ್‌ಗೆ ಪೂಜಾರ ಹಾಗೂ ಗಿಲ್ ಜೋಡಿ 99 ಎಸೆತಗಳನ್ನು ಎದುರಿಸಿ ಮುರಿಯದ 70 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. 

Follow Us:
Download App:
  • android
  • ios