Asianet Suvarna News Asianet Suvarna News

Ind vs Ban ಬಾಂಗ್ಲಾದೇಶ ಎದುರಿನ ಎರಡನೇ ಟೆಸ್ಟ್‌ನಿಂದ ರೋಹಿತ್ ಶರ್ಮಾ, ನವದೀಪ್ ಸೈನಿ ಔಟ್..!

ಬಾಂಗ್ಲಾದೇಶ ಎದುರಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಪರಿಷ್ಕೃತ ಭಾರತ ತಂಡ ಪ್ರಕಟ
ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಬಿದ್ದ ರೋಹಿತ್ ಶರ್ಮಾ, ನವದೀಪ್ ಸೈನಿ
ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಉಭಯ ಆಟಗಾರರು

Ind vs Ban Rohit Sharma Navdeep Saini Ruled Out Of 2nd Test against Bangladesh kvn
Author
First Published Dec 20, 2022, 4:16 PM IST

ಢಾಕಾ(ಡಿ.20): ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ವೇಗಿ ನವದೀಪ್ ಸೈನಿ, ಬಾಂಗ್ಲಾದೇಶ ಎದುರಿನ ಎರಡನೇ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ. ರೋಹಿತ್ ಶರ್ಮಾ, ಬಾಂಗ್ಲಾದೇಶ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಹೆಬ್ಬೆರಿಳಿನ ಗಾಯಕ್ಕೊಳಗಾಗಿದ್ದರು. ಇನ್ನು ಸಂಪೂರ್ಣ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಎರಡನೇ ಟೆಸ್ಟ್ ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿಯಲಿದ್ದಾರೆ ಹಾಗೂ ವೇಗಿ ನವದೀಪ್ ಸೈನಿ ಕೂಡಾ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ. ಎರಡನೇ ಟೆಸ್ಟ್ ಪಂದ್ಯಕ್ಕೂ ರೋಹಿತ್ ಶರ್ಮಾ ಅಲಭ್ಯರಾಗಿರುವುದರಿಂದ ಕೆ ಎಲ್ ರಾಹುಲ್, ಮತ್ತೊಮ್ಮೆ ನಾಯಕನಾಗಿ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ.

ಎಡಗೈ ಹೆಬ್ಬೆರಳಿನ ಗಾಯಕ್ಕೊಳಗಾಗಿರುವ ರೋಹಿತ್ ಶರ್ಮಾ ಅವರು ಬಿಸಿಸಿಐ ವೈದ್ಯಕೀಯ ಸಿಬ್ಬಂದಿಯ ತಂಡದ ನಿಗಾದಲ್ಲಿದ್ದಾರೆ. ಢಾಕಾದಲ್ಲಿ ನಡೆದ ಬಾಂಗ್ಲಾದೇಶ ಎದುರಿನ ಎರಡನೇ ಏಕದಿನ ಪಂದ್ಯದಲ್ಲಿ ಅವರು ಗಾಯಗೊಂಡಿದ್ದರು ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಗಾಯದಿಂದ ಸಂಪೂರ್ಣ ಗುಣಮುಖರಾಗಿ ಪೂರ್ಣ ಪ್ರಮಾಣದಲ್ಲಿ ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ಮಾಡಬೇಕಿದ್ದರೇ ಅವರಿಗೆ ಇನ್ನಷ್ಟು ಕಾಲಾವಕಾಶದ ಅಗತ್ಯವಿದೆ. ಅವರು ಸದ್ಯ ಮತ್ತೆ ಪುನಶ್ಚೇತನ ಕಾರ್ಯದಲ್ಲಿ ತೊಡಗಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ಇನ್ನು ವೇಗಿ ನವದೀಪ್ ಸೈನಿ ಕೂಡಾ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಕಿಬ್ಬೊಟ್ಟೆಯ ಸ್ನಾಯು ಸೆಳೆತದಿಂದ ಬಳಲುತ್ತಿದ್ದು, ಈ ಸಮಸ್ಯೆಯಿಂದ ಹೊರಬರಲು ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಗೆ ವರದಿ ಮಾಡಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

Ind vs Ban ಭಾರತ ಎದುರಿನ ಎರಡನೆ ಟೆಸ್ಟ್ ಪಂದ್ಯಕ್ಕೆ 15 ಆಟಗಾರರನ್ನೊಳಗೊಂಡ ಬಾಂಗ್ಲಾದೇಶ ತಂಡ ಪ್ರಕಟ

ಭಾರತ ಕ್ರಿಕೆಟ್ ತಂಡವು ಮುಂಬರುವ ದಿನಗಳಲ್ಲಿ ಮಹತ್ವದ ಸರಣಿಗಳನ್ನು ಆಡಲಿದೆ. ಹೀಗಾಗಿ ಬಿಸಿಸಿಐ ಹಾಗೂ ಆಯ್ಕೆ ಸಮಿತಿಯು ಯಾವುದೇ ಅಪಾಯವನ್ನು ಮೈಮೇಲೆ ಎಳೆದುಕೊಳ್ಳಲು ರೆಡಿಯಿಲ್ಲ. ಸದ್ಯ ರೋಹಿತ್ ಶರ್ಮಾ, ಬ್ಯಾಟಿಂಗ್ ಮಾಡಲು ಸಂಪೂರ್ಣವಾಗಿ ಸಿದ್ದರಿದ್ದಾರೆ. ಆದರೆ ಕ್ಷೇತ್ರರಕ್ಷಣೆ ಮಾಡುವ ಸಂದರ್ಭದಲ್ಲಿ ತೊಂದರೆಯಾಗುವ ಸಾಧ್ಯತೆಯಿದೆ. ಹೀಗಾಗಿ ಎರಡನೇ ಟೆಸ್ಟ್ ಪಂದ್ಯದಿಂದಲೂ ರೋಹಿತ್ ಶರ್ಮಾ ಹೊರಗುಳಿಯಲಿದ್ದಾರೆ. ಇನ್ನು ರೋಹಿತ್ ಶರ್ಮಾ, ಜನವರಿ 03ರಿಂದ ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಟಿ20 ಹಾಗೂ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕೂಡಿಕೊಳ್ಳುವ ಸಾಧ್ಯತೆಯಿದೆ ಎಂದು ವರದಿಯಾಗಿತ್ತು.

ಛಟ್ಟೋಗ್ರಾಮ್ ಸ್ಟೇಡಿಯಂನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ ಎದುರು ಟೀಂ ಇಂಡಿಯಾ 188 ರನ್‌ಗಳ ಅಂತರದ ಭರ್ಜರಿ ಗೆಲುವು ಸಾಧಿಸುವ ಮೂಲಕ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿಯನ್ನು ಕ್ಲೀನ್‌ ಸ್ವೀಪ್ ಮಾಡುವ ಲೆಕ್ಕಾಚಾರದಲ್ಲಿ ಕೆ ಎಲ್ ರಾಹುಲ್ ಪಡೆ.

ಬಾಂಗ್ಲಾದೇಶ ಎದುರಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಹೀಗಿದೆ:

ಕೆ.ಎಲ್ ರಾಹುಲ್(ನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ(ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ವಿಕೆಟ್ ಕೀಪರ್), ಕೆ.ಎಸ್ ಭರತ್(ವಿಕೆಟ್ ಕೀಪರ್), ರವಿಚಂದ್ರನ್ ಆಶ್ವಿನ್, ಅಕ್ಸರ್ ಪಟೇಲ್,  ಕುಲ್ದೀಪ್ ಯಾದವ್, ಶಾರ್ದೂಲ್ ಠಾಕೂರ್, ಜಯದೇವ್‌ ಉನಾದ್ಕತ್‌, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ಸೌರಬ್ ಕುಮಾರ್.

Follow Us:
Download App:
  • android
  • ios