* ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಆರಂಭ* ಸದ್ಯ 3 ಪಂದ್ಯಗಳ ಏಕದಿನ ಸರಣಿಯಲ್ಲಿ 1-1ರ ಸಮಬಲ ಸಾಧಿಸಿರುವ ಉಭಯ ತಂಡಗಳು* 8 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆಲ್ಲುವ ಕನವರಿಕೆಯಲ್ಲಿ ಭಾರತ

ಮ್ಯಾಂಚೆಸ್ಟರ್‌(ಜು.17): ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ತಲಾ ಒಂದೊಂದು ಪಂದ್ಯ ಜಯಿಸುವ ಮೂಲಕ ಸರಣಿಯಲ್ಲಿ 1-1ರ ಸಮಬಲ ಸಾಧಿಸಿವೆ. ಹೀಗಾಗಿ ನಿರ್ಣಾಯಕ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು, ಈ ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ನಿರ್ಣಾಯಕ ಏಕದಿನ ಪಂದ್ಯಕ್ಕೆ ಇಲ್ಲಿನ ಓಲ್ಡ್ ಟ್ರಾಫರ್ಡ್‌ ಮೈದಾನ ಆತಿಥ್ಯವನ್ನು ವಹಿಸಿದೆ. ಇನ್ನು ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜಸ್ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಂಡಿದ್ದಾರೆ.ಇನ್ನು ಇಂಗ್ಲೆಂಡ್ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ವಿರಾಟ್ ಕೊಹ್ಲಿ ಮೇಲೆ ಎಲ್ಲರ ಚಿತ್ತ:

ಭಾರತದ ಮಾಜಿ ನಾಯಕ, ‘ರನ್‌ ಮಷಿನ್‌’ ವಿರಾಟ್‌ ಕೊಹ್ಲಿ ಶತಕದ ಬರ ಎದುರಿಸುತ್ತಿದ್ದು ಭಾನುವಾರ ಟ್ರೆಂಟ್‌ಬ್ರಿಡ್ಜ್‌ ಮೈದಾನದಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ 3ನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸದೆ ಇದ್ದರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಶತಕವಿಲ್ಲದೆ 1000 ದಿನಗಳನ್ನು ಪೂರೈಸುವುದು ಖಚಿತವಾಗಲಿದೆ. ಕೊಹ್ಲಿ ಕೊನೆಯ ಬಾರಿಗೆ ಶತಕ ಸಿಡಿಸಿದ್ದು 2019ರ ನವೆಂಬರ್‌ 23ರಂದು ಬಾಂಗ್ಲಾದೇಶ ವಿರುದ್ಧ ಟೆಸ್ಟ್‌ನಲ್ಲಿ. ಶತಕವಿಲ್ಲದೆ 966 ದಿನಗಳನ್ನು ಕಳೆದಿರುವ ಕೊಹ್ಲಿ, 3ನೇ ಏಕದಿನದ ಬಳಿಕ ವಿಶ್ರಾಂತಿಗೆ ತೆರಳಲಿದ್ದಾರೆ. ಹೀಗಾಗಿ ಇಂಗ್ಲೆಂಡ್ ಎದುರಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಸಿಡಿಸಿ ಫಾರ್ಮ್‌ಗೆ ಮರಳುತ್ತಾರಾ ಎನ್ನುವ ಕುತೂಹಲ ಜೋರಾಗಿದೆ.

Scroll to load tweet…

Ind vs Eng ಒನ್‌ ಡೇ ಸರಣಿ ಜಯಕ್ಕೆ ಭಾರತ-ಇಂಗ್ಲೆಂಡ್‌ ಫೈಟ್‌

8 ವರ್ಷಗಳ ಬಳಿಕ ಇಂಗ್ಲೆಂಡ್ ನೆಲದಲ್ಲಿ ಏಕದಿನ ಸರಣಿ ಗೆಲ್ಲುತ್ತಾ ಭಾರತ?

ಭಾರತ ತಂಡವು ಇಂಗ್ಲೆಂಡ್‌ ನೆಲದಲ್ಲಿ 10 ಏಕದಿನ ಸರಣಿಯನ್ನಾಡಿದ್ದು, ಇದುವರೆಗೂ ಕೇವಲ 3 ಸರಣಿಗಳಲ್ಲಿ ಮಾತ್ರ ಗೆಲುವಿನ ನಗೆ ಬೀರಿದೆ. ಭಾರತ ತಂಡವು 2014ರಲ್ಲಿ ಕೊನೆಯ ಬಾರಿಗೆ ಏಕದಿನ ಸರಣಿಯನ್ನು ಜಯಿಸಿತ್ತು. ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ಇಂಗ್ಲೆಂಡ್ ಎದುರು ಭಾರತ ತಂಡವು 3-1 ಅಂತರದಲ್ಲಿ ಏಕದಿನ ಸರಣಿಯನ್ನು ಜಯಿಸಿತ್ತು. ಇದಾದ ಬಳಿಕ ಟೀಂ ಇಂಡಿಯಾ, ಮತ್ತೊಮ್ಮೆ ಏಕದಿನ ಸರಣಿ ಗೆಲ್ಲಲು ತುದಿಗಾಲಿನಲ್ಲಿ ನಿಂತಿದೆ. 

ಮೂರನೇ ಏಕದಿನ ಪಂದ್ಯಕ್ಕೆ ತಂಡಗಳು ಹೀಗಿವೆ ನೋಡಿ

ಭಾರತ ಕ್ರಿಕೆಟ್ ತಂಡ: ರೋಹಿತ್ ಶರ್ಮಾ‌(ನಾಯಕ), ಶಿಖರ್ ಧವನ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್ ಯಾದವ್‌, ರಿಷಭ್‌ ಪಂತ್‌, ಹಾರ್ದಿಕ್ ಪಾಂಡ್ಯ‌, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಯುಜುವೇಂದ್ರ ಚಹಲ್‌, ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್‌ ಕ್ರಿಕೆಟ್ ತಂಡ: ಜೇಸನ್ ರಾಯ್‌, ಜಾನಿ ಬೇರ್‌ಸ್ಟೋವ್‌, ಜೋ ರೂಟ್‌, ಲಿಯಾಮ್ ಲಿವಿಂಗ್‌ಸ್ಟೋನ್‌, ಜೋಸ್ ಬಟ್ಲರ್‌(ನಾಯಕ), ಬೆನ್ ಸ್ಟೋಕ್ಸ್‌, ಮೋಯಿನ್ ಅಲಿ, ಡೇವಿಡ್ ವಿಲ್ಲಿ, ಕ್ರೇಗ್ ಓವರ್‌ಟನ್‌, ಬ್ರೈಡನ್ ಕಾರ್ಸ್‌, ರೀಸ್‌ ಟಾಪ್ಲಿ.

ಸ್ಥಳ: ಮ್ಯಾಂಚೆಸ್ಟರ್‌, 
ಪಂದ್ಯ: ಮಧ್ಯಾಹ್ನ 3.30ಕ್ಕೆ
ನೇರ ಪ್ರಸಾರ: ಸೋನಿ ಸಿಕ್ಸ್‌

ಪಿಚ್‌ ರಿಪೋರ್ಚ್‌

ಓಲ್ಡ್ ಟ್ರಾಫರ್ಡ್‌ ಪಿಚ್‌ ಬ್ಯಾಟಿಂಗ್‌ ಸ್ನೇಹಿಯಾಗಿದ್ದು, ಟಾಸ್‌ ಗೆಲ್ಲುವ ತಂಡಗಳು ಮೊದಲು ಬ್ಯಾಟ್‌ ಮಾಡುವ ಸಾಧ್ಯತೆ ಹೆಚ್ಚು. ಇಲ್ಲಿ ಮೊದಲ ಇನ್ನಿಂಗ್‌್ಸ ಸರಾಸರಿ ಮೊತ್ತ 281 ರನ್‌. 2ನೇ ಇನ್ನಿಂಗ್‌್ಸನ ಸರಾಸರಿ ಮೊತ್ತ 262 ರನ್‌. ಸ್ಪಿನ್ನರ್‌ಗಳಿಗೂ ತಕ್ಕಮಟ್ಟಿಗೆ ನೆರವು ದೊರೆಯುವ ನಿರೀಕ್ಷೆ ಇದೆ.