ಚೆನ್ನೈ(ಫೆ.15): ವಿಚಿತ್ರವಾಗಿ ವರ್ತಿಸುತ್ತಿರುವ ಸ್ಪಿನ್‌ ಪಿಚ್‌ನ ಎರಡನೇ ಇನಿಂಗ್ಸ್‌ನಲ್ಲೂ ಟೀಂ ಇಂಡಿಯಾ ಗೌರವಾನ್ವಿತ ಮೊತ್ತ ಕಲೆಹಾಕುವ ನಿಟ್ಟಿನಲ್ಲಿ ದಿಟ್ಟಹೆಜ್ಜೆಯಿಟ್ಟಿದ್ದು, ಮೂರನೇ ದಿನದಾಟದ ಲಂಚ್‌ ಬ್ರೇಕ್‌ ವೇಳೆಗೆ ಭಾರತ ತಂಡ 6 ವಿಕೆಟ್‌ ಕಳೆದುಕೊಂಡು 156 ರನ್‌ ಬಾರಿಸಿದ್ದು, ಒಟ್ಟಾರೆ 351 ರನ್‌ಗಳ ಮುನ್ನಡೆ ಸಾಧಿಸಿದೆ.

ಹೌದು, ಎರಡನೇ ದಿನದಾಟದಂತ್ಯದ ವೇಳೆಗೆ ಒಂದು ವಿಕೆಟ್‌ ಕಳೆದುಕೊಂಡು 54 ರನ್‌ ಬಾರಿಸಿದ್ದ ಟೀಂ ಇಂಡಿಯಾ, ಮೂರನೇ ದಿನದಾಟದಾರಂಭದಲ್ಲೇ ತನ್ನ ಖಾತೆಗೆ ಒಂದು ರನ್‌ ಸೇರಿಸುವಷ್ಟರಲ್ಲಿ ಚೇತೇಶ್ವರ್ ಪೂಜಾರ ರನೌಟ್ ಆಗಿ ಪೆವಿಲಿಯನ್ ಸೇರಿದರು. ತಂಡ 86 ರನ್‌ ಗಳಿಸುವಷ್ಟರಲ್ಲಿ ಅಗ್ರಕ್ರಮಾಂಕದ ಐವರು ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್ ಸೇರಿದ್ದರು. ಪೂಜಾರ 7, ಪಂತ್ 8 ಹಾಗೂ ಅಜಿಂಕ್ಯ ರಹಾನೆ 10 ರನ್‌ ಬಾರಿಸಿ ವಿಕೆಟ್‌ ಒಪ್ಪಿಸಿದರು.

INDvENG: 2ನೇ ದಿನವೂ ಮೇಲುಗೈ, ಬೃಹತ್ ಮುನ್ನಡೆಯತ್ತ ಟೀಂ ಇಂಡಿಯಾ!

ಆಸರೆಯಾದ ಕೊಹ್ಲಿ-ಅಶ್ವಿನ್‌: ಒಂದು ಹಂತದಲ್ಲಿ 106 ರನ್‌ಗಳಿಗೆ 6 ವಿಕೆಟ್‌ ಕಳೆದುಕೊಂಡಿದ್ದ ಟೀಂ ಇಂಡಿಯಾಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ರವಿಚಂದ್ರನ್ ಅಶ್ವಿನ್ ಅಸರೆಯಾಗಿದ್ದಾರೆ. 7ನೇ ವಿಕೆಟ್‌ಗೆ ಈ ಜೋಡಿ ಮುರಿಯದ 50 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಅಸರೆಯಾದರು. ನಾಯಕ ವಿರಾಟ್ ಕೊಹ್ಲಿ 38 ರನ್‌ ಬಾರಿಸಿದರೆ, ರವಿಚಂದ್ರನ್ ಅಶ್ವಿನ್‌ 34 ರನ್‌ ಬಾರಿಸಿ ಕ್ರೀಸ್‌ ಕಾಯ್ದುಕೊಂಡಿದ್ದಾರೆ.