ಪುಣೆ(ಮಾ.26): ಇಂಗ್ಲೆಂಡ್‌ ವಿರುದ್ದದ ಟಿ20 ಸರಣಿಯಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಕೆ.ಎಲ್‌. ರಾಹುಲ್‌ ಏಕದಿನ ಸರಣಿಯಲ್ಲಿ ಫಾರ್ಮ್‌ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಇಂಗ್ಲೆಂಡ್ ವಿರುದ್ದದ ಎರಡನೇ ಏಕದಿನ ಪಂದ್ಯದಲ್ಲಿ ವೃತ್ತಿಜೀವನದ 5ನೇ ಆಕರ್ಷಕ ಶತಕ ಚಚ್ಚುವ ಮೂಲಕ ಅಬ್ಬರಿಸಿದ್ದಾರೆ.

ಹೌದು, ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಅಜೇಯ ಅರ್ಧಶತಕ ಬಾರಿಸಿದ್ದ ರಾಹುಲ್‌, ಎರಡನೇ ಏಕದಿನ ಪಂದ್ಯದಲ್ಲಿ ಮೂರಂಕಿ ಮೊತ್ತ ದಾಖಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರಂಭದಲ್ಲಿ ಸಾಕಷ್ಟು ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ರಾಹುಲ್‌ ಮೂರನೇ ವಿಕೆಟ್‌ಗೆ ನಾಯಕ ವಿರಾಟ್ ಕೊಹ್ಲಿ ಜತೆ ಶತಕದ ಜತೆಯಾಟ ನಿಭಾಯಿಸಿದರು. 

2ನೇ ಒನ್‌ ಡೇ: ಟಾಸ್‌ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಒಟ್ಟು 108 ಎಸೆತಗಳನ್ನು ಎದುರಿಸಿದ ರಾಹುಲ್‌ 6 ಬೌಂಡರಿ ಹಾಗೂ 3 ಸಿಕ್ಸರ್‌ ನೆರವಿನಿಂದ ತಮ್ಮ ವೃತ್ತಿಜೀವನದ 5ನೇ ಏಕದಿನ ಶತಕ ಸಿಡಿಸಿ ಮಿಂಚಿದರು.

ಟಾಸ್ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಭಾರತ 43.1 ಓವರ್‌ ವೇಳೆಗೆ 3 ವಿಕೆಟ್ ಕಳೆದುಕೊಂಡು ರನ್‌ ಬಾರಿಸಿದ್ದು, ರಾಹುಲ್‌ 100 ಹಾಗೂ ರಿಷಭ್‌ ಪಂತ್‌ 57 ಕ್ರೀಸ್‌ನಲ್ಲಿದ್ದಾರೆ.