ಅಹಮ್ಮದಾಬಾದ್(ಮಾ.16); ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿ 1-1 ಅಂತರದಲ್ಲಿ ಸಮಬಲಗೊಂಡಿದೆ. ಹೀಗಾಗಿ ಇಂದಿನ 3ನೇ ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಭಾರತ-ಇಂಗ್ಲೆಂಡ್‌ 3ನೇ ಟಿ20 ಪಂದ್ಯಕ್ಕೂ ಮುನ್ನ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್‌ ಶಾಕ್‌..!

ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಸೂರ್ಯಕುಮಾರ್ ಯಾದವ್‌ಗೆ ವಿಶ್ರಾಂತಿ ನೀಡಲಾಗಿದೆ. ಯಾದವ್ ಬದಲು ರೋಹಿತ್ ಶರ್ಮಾ ತಂಡ ಸೇರಿಕೊಂಡಿದ್ದಾರೆ.  ಇನ್ನು ಇಂಗ್ಲೆಂಡ್ ತಂಡದಲ್ಲೂ ಒಂದು ಬದಲಾವಣೆ ಮಾಡಲಾಗಿದೆ. ಟಾಮ್ ಕುರನ್ ಬದಲು ಮಾರ್ಕ್ ವುಡ್ ತಂಡ ಸೇರಿಕೊಂಡಿದ್ದಾರೆ.

ಮೊದಲ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ಭರ್ಜರಿ ಗೆಲುವು ದಾಖಲಿಸಿತ್ತು. ನಾಯಕ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ವೈಫಲ್ಯ ಟೀಂ ಇಂಡಿಯಾ ಸೋಲಿಗೆ ಕಾರಣವಾಗಿತ್ತು. ಆದರೆ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಕಮ್‌ಬ್ಯಾಕ್ ಮಾಡಿತ್ತು. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಿಂಚಿದ ಟೀ ಇಂಡಿಯಾ 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿತ್ತು.