ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದೆ. ಆದರೆ ಕೊಹ್ಲಿ ಹೋರಾಟದಿಂದ ಟೀಂ ಇಂಡಿಯಾ, ಇಂಗ್ಲೆಂಡ್‌ಗೆ ಸ್ಪರ್ಧಾತ್ಮಕ ಟಾರ್ಗೆಟ್ ನೀಡಿದೆ.

ಅಹಮ್ಮದಾಬಾದ್(ಮಾ.16): ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಟಾಪ್ ಆರ್ಡರ್ ಬ್ಯಾಟ್ಸ್‌ಮನ್ ವೈಫಲ್ಯ ತಂಡಕ್ಕೆ ಹಿನ್ನಡೆಯಾಗಿದೆ. ನಾಯಕ ವಿರಾಟ್ ಕೊಹ್ಲಿಯ ಏಕಾಂಗಿ ಹೋರಾಟದಿಂದ ಭಾರತ ವಿಕೆಟ್ 6 ನಷ್ಟಕ್ಕೆ 156 ರನ್ ಸಿಡಿಸಿದೆ.

ಬ್ಯಾಟಿಂಗ್ ಸಕ್ಸಸ್‌ ಸೀಕ್ರೇಟ್‌ ಬಿಚ್ಚಿಟ್ಟ ಕಿಂಗ್‌ ಕೊಹ್ಲಿ..!.

ಟಾಸ್ ಸೋತು ಬ್ಯಾಟಿಂಗ್ ಇಳಿದ ಟೀಂ ಇಂಡಿಯಾ ಆರಂಭದಲ್ಲೇ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾದರು. ಸೂರ್ಯಕುಮಾರ್ ಯಾದವ್ ಬದಲು ತಂಡ ಸೇರಿಕೊಂಡ ರೋಹಿತ್ ಶರ್ಮಾ 15 ರನ್ ಸಿಡಿಸಿ ನಿರ್ಗಮಿಸಿದರು. ಕಳೆದ ಪಂದ್ಯದಲ್ಲಿ ಅಬ್ಬರಿಸಿದ ಇಶಾನ್ ಕಿಶನ್ ಕೇವಲ 4 ರನ್ ಸಿಡಿಸಿ ಔಟಾದರು.

ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟ ಆರಂಭಿಸಿದರು. ಇತ್ತ ರಿಷಬ್ ಪಂತ್ 25 ರನ್ ಸಿಡಿಸಿ ಔಟಾದರು. ಶ್ರೇಯರ್ ಅಯ್ಯರ್ ಕೇವಲ 9 ರನ್ ಸಿಡಿಸಿ ಔಟಾದರು. ದಿಟ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್ ಕೊಹ್ಲಿ ಹಾಫ್ ಸೆಂಚುರಿ ಸಿಡಿಸಿದರು. ಹಾರ್ದಿಕ್ ಪಾಂಡ್ಯ ಜೊತೆ ಸೇರಿದ ಕೊಹ್ಲಿ, ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ಕೊಹ್ಲಿ ಅಜೇಯ 77 ರನ್ ಸಿಡಿಸಿದರೆ, ಪಾಂಡ್ಯ 17 ರನ್ ಸಿಡಿಸಿ ಔಟಾದರು. ಈ ಮೂಲಕ ಟೀಂ ಇಂಡಿಯಾ 156 ರನ್ ಸಿಡಿಸಿತು.