05:38 PM (IST) Jul 10

Ind vs Eng 3rd Test Day 1 Live Score Updatesಲಾರ್ಡ್ಸ್ ಟೆಸ್ಟ್‌: ಎಚ್ಚರಿಕೆಯ ಆರಂಭ ಪಡೆದ ಇಂಗ್ಲೆಂಡ್

ಲಾರ್ಡ್ಸ್ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಇಂಗ್ಲೆಂಡ್ ತಂಡವು ಆರಂಭಿಕ ಆಘಾತ ಅನುಭವಿಸಿದೆ. ಮೊದಲ ದಿನದಾಟದ ಲಂಚ್ ಬ್ರೇಕ್ ವೇಳೆಗೆ ಇಂಗ್ಲೆಂಡ್ ತಂಡವು 2 ವಿಕೆಟ್ ಕಳೆದುಕೊಂಡು 83 ರನ್ ಗಳಿಸಿದೆ. ಜೋ ರೂಟ್ 24 ಹಾಗೂ ಓಲಿ ಪೋಪ್ 12 ರನ್ ಗಳಿಸಿ ಕ್ರೀಸ್ ಕಾಯ್ದುಕೊಂಡಿದ್ದಾರೆ. ಭಾರತ ಪರ ನಿತೀಶ್ ಕುಮಾರ್ ರೆಡ್ಡಿ ಒಂದೇ ಓವರ್‌ನಲ್ಲಿ ಇಂಗ್ಲೆಂಡ್ ಆರಂಭಿಕರಿಬ್ಬರನ್ನು ಪೆವಿಲಿಯನ್ನಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

Scroll to load tweet…

04:49 PM (IST) Jul 10

Ind vs Eng 3rd Test Day 1 Live Score Updatesಇಂಗ್ಲೆಂಡ್‌ಗೆ ಡಬಲ್‌ ಶಾಕ್ ಕೊಟ್ಟ ನಿತೀಶ್ ರೆಡ್ಡಿ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯದ ಡ್ರಿಂಕ್ಸ್‌ ಬ್ರೇಕ್‌ ಬಳಿಕ ನಿತೀಶ್ ಕುಮಾರ್ ರೆಡ್ಡಿ ಒಂದೇ ಓವರ್‌ನಲ್ಲಿ ಬೆನ್ ಡಕೆಟ್ ಹಾಗೂ ಜಾಕ್ ಕ್ರಾಲಿ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. 

Scroll to load tweet…

03:14 PM (IST) Jul 10

Ind vs Eng 3rd Test Day 1 Live Score Updatesಲಾರ್ಡ್ಸ್‌ ಟೆಸ್ಟ್‌: ಭಾರತ ಎದುರು ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ; ಎರಡು ತಂಡದಲ್ಲೂ ಒಂದು ಮೇಜರ್ ಚೇಂಜ್

ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಜೋಫ್ರಾ ಆರ್ಚರ್ ಇಂಗ್ಲೆಂಡ್ ತಂಡಕ್ಕೆ ಮರಳಿದ್ದಾರೆ, ಭಾರತದ ಪರ ಜಸ್ಪ್ರೀತ್ ಬುಮ್ರಾ ಆಡುತ್ತಿದ್ದಾರೆ.

Read Full Story
01:17 PM (IST) Jul 10

Ind vs Eng 3rd Test Day 1 Live Score UpdatesICC Test Rankings - ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೂ ಮುನ್ನ ಶುಭ್‌ಮನ್‌ ಗಿಲ್‌ಗೆ ಜಾಕ್‌ಪಾಟ್!

ನವದೆಹಲಿ: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೂ ಮುನ್ನ ಐಸಿಸಿ ಟೆಸ್ಟ್ ಶ್ರೇಯಾಂಕ ಪ್ರಕಟಗೊಂಡಿದ್ದು, ಎಜ್‌ಬಾಸ್ಟನ್ ಟೆಸ್ಟ್‌ನಲ್ಲಿ ಭರ್ಜರಿ ಪ್ರದರ್ಶನ ತೋರಿದ ಶುಭ್‌ಮನ್ ಗಿಲ್ 15 ಸ್ಥಾನ ಜಿಗಿತ ಕಂಡು ಆರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

Read Full Story
12:07 PM (IST) Jul 10

Ind vs Eng 3rd Test Day 1 Live Score Updatesಲಾರ್ಡ್ಸ್ ಟೆಸ್ಟ್ ಪಂದ್ಯಕ್ಕೆ ಕ್ಷಣಗಣನೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಈ ಪಂದ್ಯವು ಇಂದು ಮಧ್ಯಾಹ್ನ 3.30ರಿಂದ ಅಧಿಕೃತವಾಗಿ ಆರಂಭವಾಗಲಿದ್ದು, ಟಾಸ್ ಇಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಎಜ್‌ಬಾಸ್ಟನ್ ಟೆಸ್ಟ್ ಪಂದ್ಯ ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ ಮತ್ತೊಂದು ಗೆಲುವಿನ ಕನವರಿಕೆಯಲ್ಲಿದೆ.

Scroll to load tweet…

12:04 PM (IST) Jul 10

Ind vs Eng 3rd Test Day 1 Live Score Updatesಲಾರ್ಡ್ಸ್ ಟೆಸ್ಟ್: ಅಪರೂಪದ ರೆಕಾರ್ಡ್ಸ್ ಬರೆಯಲು ರೆಡಿಯಾದ ಟೀಂ ಇಂಡಿಯಾ 6 ಕ್ರಿಕೆಟರ್ಸ್

ಇಂಗ್ಲೆಂಡ್ ವಿರುದ್ಧದ ಲಾರ್ಡ್ಸ್ ಟೆಸ್ಟ್‌ನಲ್ಲಿ ಆರು ಭಾರತೀಯ ಆಟಗಾರರು ಮಹತ್ವದ ವೈಯಕ್ತಿಕ ಮೈಲಿಗಲ್ಲುಗಳನ್ನು ತಲುಪುವ ಹಂತದಲ್ಲಿದ್ದಾರೆ. ಏನದು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ

Read Full Story
12:03 PM (IST) Jul 10

Ind vs Eng 3rd Test Day 1 Live Score Updatesಕ್ರಿಕೆಟ್ ಕಾಶಿ ಲಾರ್ಡ್ಸ್‌ನಲ್ಲಿ ಯಾರಾಗ್ತಾರೆ ಲಾರ್ಡ್? ಹೈವೋಲ್ಟೇಜ್‌ ಕದನಕ್ಕೆ ಕ್ಷಣಗಣನೆ

ಲೀಡ್ಸ್ ಮತ್ತು ಎಜ್‌ಬಾಸ್ಟನ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ನೀಡಿದ್ದರೂ, ಲಾರ್ಡ್ಸ್‌ನ ಹಸಿರು ಪಿಚ್‌ನಲ್ಲಿ ಅವರಿಗೆ ಕಠಿಣ ಸವಾಲು ಎದುರಾಗಲಿದೆ. ಜೋಫ್ರಾ ಆರ್ಚರ್ ವಾಪಸಾತಿಯಿಂದ ಇಂಗ್ಲೆಂಡ್ ತಂಡ ಬಲಿಷ್ಠವಾಗಿದೆ. ಈ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಪರೀಕ್ಷೆಗೊಳಪಡಲಿದೆ.

Read Full Story