ರಾಜ್‌ಕೋಟ್ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಮಹತ್ವದ ಬದಲಾವಣೆ

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನ ಆತಿಥ್ಯ ವಹಿಸಿದೆ. ಭಾರತ ತಂಡದ ಪರ ಸರ್ಫರಾಜ್ ಖಾನ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಮೊಹಮ್ಮದ್ ಸಿರಾಜ್ ಹಾಗೂ ರವೀಂದ್ರ ಜಡೇಜಾ ತಂಡ ಕೂಡಿಕೊಂಡಿದ್ದು, ಮುಕೇಶ್ ಕುಮಾರ್ ಹಾಗೂ ಅಕ್ಷರ್ ಪಟೇಲ್‌ಗೆ ವಿಶ್ರಾಂತಿ ನೀಡಲಾಗಿದೆ.

Ind vs Eng 3rd Test Team India win the toss and elect to bat first Dhruv Jurel Sarfaraz Khan dubute kvn

ರಾಜ್‌ಕೋಟ್‌(ಫೆ.15): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತ ತಂಡದಲ್ಲಿ 4 ಬದಲಾವಣೆ ಮಾಡಲಾಗಿದ್ದು, ಇಬ್ಬರು ಕ್ರಿಕೆಟಿಗರು ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಪಂದ್ಯಕ್ಕೆ ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮೈದಾನ ಆತಿಥ್ಯ ವಹಿಸಿದೆ. ಭಾರತ ತಂಡದ ಪರ ಸರ್ಫರಾಜ್ ಖಾನ್ ಹಾಗೂ ವಿಕೆಟ್ ಕೀಪರ್ ಬ್ಯಾಟರ್ ಧೃವ್ ಜುರೆಲ್ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಇನ್ನು ಮೊಹಮ್ಮದ್ ಸಿರಾಜ್ ಹಾಗೂ ರವೀಂದ್ರ ಜಡೇಜಾ ತಂಡ ಕೂಡಿಕೊಂಡಿದ್ದು, ಮುಕೇಶ್ ಕುಮಾರ್ ಹಾಗೂ ಅಕ್ಷರ್ ಪಟೇಲ್‌ಗೆ ವಿಶ್ರಾಂತಿ ನೀಡಲಾಗಿದೆ.

ಪಾದಾರ್ಪಣೆ ಮಾಡಿದ ಸರ್ಫರಾಜ್, ಜುರೆಲ್: ದೇಶಿ ಕ್ರಿಕೆಟ್‌ನಲ್ಲಿ ರನ್ ರಾಶಿಯನ್ನೇ ಗುಡ್ಡೆ ಹಾಕಿ ಟೀಂ ಇಂಡಿಯಾ ಬಾಗಿಲು ಬಡಿಯುತ್ತಾ ಬಂದಿದ್ದ ಸರ್ಫರಾಜ್ ಖಾನ್‌ ಕೊನೆಗೂ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಗಮನಾರ್ಹ ಪ್ರದರ್ಶನ ತೋರಲು ಕೆ ಎಸ್ ಭರತ್ ವಿಫಲವಾದ ಬೆನ್ನಲ್ಲೇ ಧೃವ್ ಜುರೆಲ್‌ಗೆ ಸ್ಥಾನ ನೀಡಲಾಗಿದೆ. ಧೃವ್ ಜುರೆಲ್ ಕೂಡಾ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್‌ಕೋಟ್‌ ಕದನಕ್ಕೆ ಭಾರತ vs ಇಂಗ್ಲೆಂಡ್ ಸನ್ನದ್ಧ..!

ಮೈಲಿಗಲ್ಲಿನ ಹೊಸ್ತಿಲಲ್ಲಿ ಅಶ್ವಿನ್‌, ಆ್ಯಂಡರ್‌ಸನ್‌ 

ಭಾರತದ ಆರ್‌.ಅಶ್ವಿನ್ ಹಾಗೂ ಇಂಗ್ಲೆಂಡ್‌ನ ದಿಗ್ಗಜ ಬೌಲರ್‌ ಜೇಮ್ಸ್ ಆ್ಯಂಡರ್‌ಸನ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಮಹತ್ವದ ಮೈಲಿಗಲ್ಲುಗಳ ಹೊಸ್ತಿಲಲ್ಲಿದ್ದಾರೆ. ಅದನ್ನು 3ನೇ ಪಂದ್ಯದಲ್ಲೇ ಸಾಧಿಸುವ ನಿರೀಕ್ಷೆ ಇಬ್ಬರು ಬೌಲರ್‌ಗಳದ್ದು. ಆ್ಯಂಡರ್‌ಸನ್ 184 ಟೆಸ್ಟ್‌ನಲ್ಲಿ 695 ವಿಕೆಟ್‌ ಕಿತ್ತಿದ್ದು, 700 ವಿಕೆಟ್‌ ಪೂರೈಸಲು 5 ವಿಕೆಟ್‌ ಅಗತ್ಯವಿದೆ. 97 ಟೆಸ್ಟ್‌ ಆಡಿರುವ ಅಶ್ವಿನ್‌ 499 ವಿಕೆಟ್‌ ಗಳಿಸಿದ್ದು, 500ರ ಮೈಲಿಗಲ್ಲನ್ನು ಸಾಧಿಸುವ ಕೇವಲ 1 ವಿಕೆಟ್‌ ಬೇಕಿದೆ.

03ನೇ ಪಂದ್ಯ: ಇದು ರಾಜ್‌ಕೋಟ್‌ನಲ್ಲಿ ನಡೆಯುತ್ತಿರುವ 3ನೇ ಟೆಸ್ಟ್‌ ಪಂದ್ಯ. 2016ರಲ್ಲಿ ಭಾರತ-ಇಂಗ್ಲೆಂಡ್‌ ಡ್ರಾ ಸಾಧಿಸಿದ್ದರೆ, 2018ರಲ್ಲಿ ವಿಂಡೀಸ್‌ ವಿರುದ್ಧ ಭಾರತ ಗೆದ್ದಿತ್ತು.

ಎರಡು ತಂಡಗಳ ಆಟಗಾರರ ಪಟ್ಟಿ:

ಭಾರತ: ರೋಹಿತ್ ಶರ್ಮಾ(ನಾಯಕ), ಯಶಸ್ವಿ ಜೈಸ್ವಾಲ್‌, ಶುಭ್‌ಮನ್ ಗಿಲ್‌, ರಜತ್‌ ಪಾಟೀದಾರ್, ಸರ್ಫರಾಜ್‌ ಖಾನ್, ರವೀಂದ್ರ ಜಡೇಜಾ, ಧೃವ್ ಜುರೆಲ್‌, ರವಿಚಂದ್ರನ್ ಅಶ್ವಿನ್‌, ಕುಲ್ದೀಪ್‌ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್‌.

ಇಂಗ್ಲೆಂಡ್‌: ಜಾಕ್ ಕ್ರಾವ್ಲಿ, ಬೆನ್ ಡಕೆಟ್‌, ಓಲಿ ಪೋಪ್‌, ಜೋ ರೂಟ್‌, ಜಾನಿ ಬೇರ್‌ಸ್ಟೋವ್‌, ಬೆನ್ ಸ್ಟೋಕ್ಸ್‌(ನಾಯಕ), ಬೆನ್ ಫೋಕ್ಸ್‌,  ರೆಹಾನ್‌ ಅಹಮ್ಮದ್, ಟಾಮ್ ಹಾರ್ಟ್ಲಿ, ಮಾರ್ಕ್‌ ವುಡ್‌, ಜೇಮ್ಸ್ ಆ್ಯಂಡರ್‌ಸನ್‌.

ಪಂದ್ಯ ಆರಂಭ: ಬೆಳಗ್ಗೆ 9.30ಕ್ಕೆ,

ನೇರಪ್ರಸಾರ: ಸ್ಪೋರ್ಟ್ಸ್‌ 18, ಜಿಯೋ ಸಿನಿಮಾ.


 

Latest Videos
Follow Us:
Download App:
  • android
  • ios