* ಲೀಡ್ಸ್‌ ಟೆಸ್ಟ್‌ನಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ* ಲಾರ್ಡ್ಸ್‌ ಟೆಸ್ಟ್‌ ಪಂದ್ಯವನ್ನು ಜಯಿಸಿರುವ ಟೀಂ ಇಂಡಿಯಾ* ಭಾರತಕ್ಕೆ ತಿರುಗೇಟು ನೀಡುವ ಕನವರಿಕೆಯಲ್ಲಿ ಇಂಗ್ಲೆಂಡ್ ಕ್ರಿಕೆಟ್ ತಂಡ 

ಲೀಡ್ಸ್‌(ಆ.25): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಬರೋಬ್ಬರಿ 8 ಟೆಸ್ಟ್‌ ಪಂದ್ಯಗಳ ಬಳಿಕ ವಿರಾಟ್ ಕೊಹ್ಲಿ ಟಾಸ್ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

ನಿರೀಕ್ಷೆಯಂತೆಯೇ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಇನ್ನು ಇಂಗ್ಲೆಂಡ್‌ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು ಡೇವಿಡ್‌ ಮಲಾನ್‌ ಹಾಗೂ ಕ್ರೆಗ್ ಓವರ್‌ಟನ್ ತಂಡ ಕೂಡಿಕೊಂಡಿದ್ದಾರೆ. ಮಾರ್ಕ್‌ ವುಡ್‌ ಗಾಯಗೊಂಡಿರುವ ಹಿನ್ನೆಲೆಯಲ್ಲಿ ಕ್ರೆಗ್ ಓವರ್‌ಟನ್‌ ತಂಡ ಕೂಡಿಕೊಂಡಿದ್ದಾರೆ. ಇನ್ನು ಡಾಮ್ ಸಿಬ್ಲಿ ಬದಲಿಗೆ ಡೇವಿಡ್‌ ಮಲಾನ್‌ ಇಂಗ್ಲೆಂಡ್ ತಂಡ ಕೂಡಿಕೊಂಡಿದ್ದಾರೆ.

Ind vs Eng ಲೀಡ್ಸ್‌ನಲ್ಲೂ ಲಾರ್ಡ್ಸ್‌ ಆಗುತ್ತಾ ಟೀಂ ಇಂಡಿಯಾ?

Scroll to load tweet…

5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 1-0 ಮುನ್ನಡೆಯನ್ನು ಕಾಯ್ದುಕೊಂಡಿದೆ. ಟ್ರೆಂಟ್‌ಬ್ರಿಡ್ಜ್‌ನಲ್ಲಿ ನಡೆದ ನಾಟಿಂಗ್‌ಹ್ಯಾಮ್‌ ಟೆಸ್ಟ್‌ ಪಂದ್ಯದ ಕೊನೆಯ ದಿನದಾಟಕ್ಕೆ ಮಳೆ ಅಡ್ಡಿ ಪಡಿಸಿದ್ದರಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿತ್ತು. ಇನ್ನು ಲಾರ್ಡ್ಸ್‌ ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ 151 ರನ್‌ಗಳ ಅಂತರದ ಭರ್ಜರಿ ಗೆಲುವನ್ನು ದಾಖಲಿಸುವ ಮೂಲಕ ಟೆಸ್ಟ್ ಸರಣಿಯಲ್ಲಿ ಶುಭಾರಂಭ ಮಾಡಿದೆ. ಇದರೊಂದಿಗೆ ಎರಡನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನಲ್ಲಿ ವಿರಾಟ್ ಕೊಹ್ಲಿ ಪಡೆ ಮೊದಲ ಗೆಲುವು ದಾಖಲಿಸಿದೆ.

ತಂಡಗಳು ಹೀಗಿವೆ ನೋಡಿ:

ಭಾರತ:

Scroll to load tweet…

ಇಂಗ್ಲೆಂಡ್: 

Scroll to load tweet…