ಅಹಮದಾಬಾದ್‌(ಮಾ.04): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್‌ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ. ಉಭಯ ತಂಡಗಳು ಕೆಲವು ಬದಲಾವಣೆಗಳೊಂದಿಗೆ ಕಣಕ್ಕಿಳಿದಿವೆ.

ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಕೊನೆಯ ಟೆಸ್ಟ್ ಪಂದ್ಯ ಆರಂಭವಾಗಿದ್ದು, ವಿಶ್ರಾಂತಿ ಬಯಸಿರುವ ಜಸ್ಪ್ರೀತ್ ಬುಮ್ರಾ ಬದಲಿಗೆ ವೇಗಿ ಮೊಹಮ್ಮದ್ ಸಿರಾಜ್‌ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗದಲ್ಲಿ ತಂಡ ಕೂಡಿಕೊಂಡಿದ್ದಾರೆ. ಇನ್ನು ಇಂಗ್ಲೆಂಡ್‌ ತಂಡದಲ್ಲಿ ಎರಡು ಬದಲಾವಣೆಗಳನ್ನು ಮಾಡಲಾಗಿದ್ದು, ಅನುಭವಿ ವೇಗಿಗಳಾದ ಜೋಫ್ರಾ ಆರ್ಚರ್ ಹಾಗೂ ಸ್ಟುವರ್ಟ್‌ ಬ್ರಾಡ್‌ಗೆ ವಿಶ್ರಾಂತಿ ನೀಡಲಾಗಿದ್ದು, ಡಾಮ್ ಬಿಸ್‌ ಹಾಗೂ ಡಾನ್‌ ಲಾರೆನ್ಸ್‌ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದಿದ್ದಾರೆ.

ಈಗಾಗಲೇ ಇಂಗ್ಲೆಂಡ್‌ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಿಂದ ಹೊರಬಿದ್ದು, ಭಾರತ ಕೊನೆಯ ಟೆಸ್ಟ್ ಪಂದ್ಯವನ್ನು ಗೆದ್ದು ವಿರಾಟ್ ಪಡೆಗೆ ಶಾಕ್‌ ನೀಡಲು ಜೋ ರೂಟ್‌ ಎದುರು ನೋಡುತ್ತಿದೆ. 4 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಇಂಗ್ಲೆಂಡ್ ಜಯಿಸಿತ್ತು. ಅದಾದ ಬಳಿಕ ಉಳಿದೆರಡು ಪಂದ್ಯಗಳನ್ನು ಟೀಂ ಇಂಡಿಯಾ ಅನಾಯಾಸವಾಗಿ ಗೆಲ್ಲುವ ಮೂಲಕ 2-1ರ ಮುನ್ನಡೆ ಸಾಧಿಸಿದೆ.

ತಂಡಗಳು ಹೀಗಿವೆ:

ಭಾರತ:

ಇಂಗ್ಲೆಂಡ್‌: